Water Crisis: ಬೆಂಗಳೂರಿಗಾಗಿ ಕೆಆರ್‌ಎಸ್‌ನಿಂದ ನೀರು ಬಿಡುಗಡೆ, ಅಧಿಕಾರಿಗಳ ಕಟ್ಟೆಚ್ಚರ
ಮೈಸೂರು, ಮಾರ್ಚ್ 10: ಬೆಂಗಳೂರು ನಗರದಲ್ಲಿ ಹಲವಾರು ಬೋರ್‌ವೆಲ್‌ಗಳು ಬತ್ತಿಹೋಗುವುದರೊಂದಿಗೆ ತೀವ್ರ ನೀರಿನ ಕೊರತೆಯಿಂದ ತತ್ತರಿಸುತ್ತಿದೆ. ಇದೇ ವೇಳೆ ತೊರೆಕಾಡನಹಳ್ಳಿ ಪಂಪಿಂಗ್ ಸ್ಟೇಷನ್‌ನಲ್ಲಿ ನೀರಾವರಿ ಅಧಿಕಾರಿಗಳು ಕೃಷ್ಣರಾಜ ಸಾಗರ ಜಲಾಶಯದಿಂದ (ಕೆಆರ್‌ಎಸ್) ನೀರು ಬಿಡುಗಡೆ ಮಾಡಿದ್ದು, ಬಿಡಬ್ಲ್ಯುಎಸ್‌ಎಸ್‌ಬಿ ಗರಿಷ್ಠ ಸಾಮರ್ಥ್ಯದ ನೀರನ್ನು ಪಂಪ್ ಮಾಡಬಹುದು.
ಬೆಂಗಳೂರು ನಗರದ 1.3 ಕೋಟಿ ನಿವಾಸಿಗಳ ಬೇಡಿಕೆಯನ್ನು ಪೂರೈಸಲು ಬಿಡಬ್ಲ್ಯೂಎಸ್‌ಎಸ್‌ಬಿ ಮೇಲೆ ಒತ್ತಡವಿದೆ. ರೈತರು ತಮ್ಮ ಕುಡಿಯುವ ನೀರು, ಜಾನುವಾರು, ಹಬ್ಬ ಹರಿದಿನಗಳಿಗೆ ನೀರು ಹಾಯಿಸುತ್ತಿದ್ದಾರೆ ಎಂಬ ವರದಿಯಿಂದ ಕಳೆದೆರಡು ದಿನಗಳಿಂದ ಕಾವೇರಿ ನದಿಯಲ್ಲಿ ಹರಿವು ಕಡಿಮೆಯಾಗಿತ್ತು.

ಈ ಬಗ್ಗೆ ಕಾವೇರಿ ನೀರಾವರಿ ನೀರು ನಿಗಮಿತ ತಮ್ಮ ಅಧಿಕಾರಿಗಳಿಗೆ ಪತ್ರ ಬರೆದಿದ್ದು, ನೀರು ಸರಾಗವಾಗಿ ಹರಿಯುವಂತೆ ನೋಡಿಕೊಳ್ಳಲು ಸೂಚನೆ ನೀಡಿದೆ. ಪಂಪಿಂಗ್ ಸ್ಟೇಷನ್‌ನ ಮೇಲ್ವಿಚಾರಣೆ ನಡೆಸುತ್ತಿರುವ ಬಿಡಬ್ಲ್ಯೂಎಸ್‌ಎಸ್‌ಬಿ ಅಧಿಕಾರಿಗಳು ಪಂಪಿಂಗ್‌ಗೆ ತೊಂದರೆಯಾಗದಂತೆ ಜಲಾಶಯದಿಂದ ನೀರು ಹರಿಸುವಂತೆ ವಿನಂತಿಸಿದ್ದಾರೆ.
"ಕಾವೇರಿ ನದಿಯಿಂದ ಬೆಂಗಳೂರು, ಮೈಸೂರು ಮತ್ತು ಇತರೆ ನಗರ, ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಪ್ರತಿದಿನ ಒಟ್ಟಾರೆ ಕನಿಷ್ಟ 1000 ಕ್ಯೂಸೆಕ್ ರಷ್ಟು ನೀರಿನ ಅವಶ್ಯಕತೆ ಇರುತ್ತದೆ. ಬೆಂಗಳೂರು ನಗರಕ್ಕೆ ಸುಮಾರು 700 ಕ್ಯೂಸೆಕ್ಸ್ ನಷ್ಟು ಕುಡಿಯುವ ನೀರನ್ನು BWSSB ಯಿಂದ ತೊರೆಕಾಡನಹಳ್ಳಿ ಬಳಿ ಸರಬರಾಜು ಮಾಡುವ ಅವಶ್ಯಕತೆ ಇರುತ್ತದೆ. ಅದರಂತೆ ಕೆ.ಆರ್.ಎಸ್ ಮತ್ತು ಕಬಿನಿ ಜಲಾಶಯದಿಂದ ನದಿಯ ಮೂಲಕ ಈ ದಿನ ಸುಮಾರು 1,396 ಕ್ಯೂಸೆಕ್ಸ್ ನಷ್ಟು ನೀರನ್ನು ನದಿಯ ಮೂಲಕ ಹರಿಸಲಾಗುತ್ತಿದೆ" ಎಂದು ಪ್ರಕಟಣೆ ಮಾಹಿತಿ ನೀಡಿದೆ.
"ಆದರೆ. BWSSB ಮುಖ್ಯ ಇಂಜಿನಿಯರ್ 07.03.2024 ರಂದು ದೂರವಾಣಿ ಮೂಲಕ ಈ ಕಚೇರಿಗೆ ಸಂಪರ್ಕಿಸಿ ಸಂಜೆ 6.00 ಯ ಗೇಜ್‌ನಂತೆ ಶಿವ ಅಣೆಕಟ್ಟೆಯ ಬಳಿ -9" ಮಾಪನ ಇರುವುದಾಗಿ ತಿಳಿಸಿದ್ದು, ಸದರಿ ಗೇಜ್ ಮಟ್ಟವಿದ್ದಲ್ಲಿ ಬೆಂಗಳೂರು ಮತ್ತು ಇತರೆ ಪಟ್ಟಣ, ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡಲು ಸಾಧ್ಯವಾಗುವುದಿಲ್ಲವೆಂದು ತಿಳಿಸಿರುತ್ತಾರೆ. ಆದ್ದರಿಂದ ತಾವುಗಳು ವಿಷಯವನ್ನು ಅತಿ ಗಂಭೀರವಾಗಿ ಪರಿಗಣಿಸಿ, ದಿನನಿತ್ಯ ನದಿಯ ಪಾತ್ರದಲ್ಲಿನ ಎಲ್ಲಾ ನಗರ, ಪಟ್ಟಣ ಮತ್ತು ಗ್ರಾಮಗಳಿಗೆ ಕುಡಿಯುವ ನೀರಿಗೆ ಅಗತ್ಯವಿರುವ ನೀರಿನ ಪ್ರಮಾಣದಲ್ಲಿ ಯಾವುದೇ ರೀತಿಯ ತೊಡಕು ಆಗದಂತೆ ಸಮರ್ಪಕವಾಗಿ ನೀರನ್ನು ಒದಗಿಸಲು ಎಲ್ಲಾ ಅಗತ್ಯ ಕ್ರಮಕೈಗೊಳ್ಳಲು ಸೂಚಿಸಲಾಗಿದೆ" ಎಂದು ಅಧಿಕಾರಿಗಳಿಗೆ ಸೂಚಿಸಿದೆ.

"ನದಿಯ ಎರಡು ಬದಿಯಲ್ಲೂ ಅನಧಿಕೃತವಾಗಿ ಯಾವುದೇ ಪಂಪ್ ಮತ್ತು ಮೋಟರ್‌ನಿಂದ ನೀರನ್ನು ನದಿಯಿಂದ ಉಪಯೋಗಿಸುವುದು ಕಂಡುಬಂದಲ್ಲಿ ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ತೆರವು ಕಾರ್ಯವನ್ನು ಕೈಗೊಳ್ಳುವುದು. ಅಲ್ಲದೇ, ಅಣೆಕಟ್ಟುಗಳ ಕಾಲುವೆಗಳಲ್ಲಿ ಯಾವುದೇ ರೀತಿಯಲ್ಲಿ ನೀರು ಬಳಸದಂತೆ ಕ್ರಮಕೈಗೊಳ್ಳತಕ್ಕದ್ದು" ಎಂದು ಆದೇಶಿಸಲಾಗಿದೆ.
"ಕಿರು ಜಲ ವಿದ್ಯುತ್ ಸ್ಥಾವರಗಳ ಸ್ಥಳಗಳಲ್ಲಿ ನದಿಯ ನೀರನ್ನು ತಡೆಮಾಡಿ ಶೇಖರಣೆ ಮಾಡದೇ ನೀರನ್ನು ಸರಾಗವಾಗಿ ನದಿಯಲ್ಲಿ ಹರಿಯುವಂತೆ ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿವೀಕ್ಷಣೆ ಮಾಡಿ ಎಲ್ಲಾ ಅಗತ್ಯ ಕ್ರಮಕೈಗೊಂಡು ನದಿಯಲ್ಲಿ ನೀರು ಸಮರ್ಪಕವಾಗಿ ಅಗತ್ಯ ಪ್ರಮಾಣದಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಸರಬರಾಜು ಮಾಡಲು ತಪ್ಪದೇ ಕ್ರಮವಹಿಸತಕ್ಕದ್ದು" ಎಂದಿದೆ.
"ನದಿಯ ಪಾತ್ರದಲ್ಲಿನ ಎಲ್ಲಾ ನಗರ, ಪಟ್ಟಣ ಮತ್ತು ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಕಾರ್ಯದಲ್ಲಿ ಯಾವುದಾದರೂ ಲೋಪ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು" ಎಂದು ಗಂಭೀರ ಎಚ್ಚರಿಕೆ ನೀಡಲಾಗಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications