Bengaluru: ನೀರು ಸಮಸ್ಯೆ ಪರಿಹಾರಕ್ಕೆ ವಾರ್ಡ್‌ಗಳಿಗೆ ಪ್ರತ್ಯೇಕ ನೋಡೆಲ್ ಅಧಿಕಾರಿ ನೇಮಕ
ಬೆಂಗಳೂರು, ಮಾರ್ಚ್ 04: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಗೆ 2007ರಲ್ಲಿ ಸೇರ್ಪಡೆಯಾದ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದೆ. ಬೆಂಗಳೂರು ನಗರ ಭಾಗದಲ್ಲೂ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಇದರ ಪರಿಹಾರಾರ್ಥವಾಗಿ ಸರ್ಕಾರ 35 ವಾರ್ಡ್‌ಗಳಿಗೆ ಪ್ರತ್ಯೇಕ ಉಸ್ತುವಾರಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜನೆ ಮಾಡಿದೆ.
ಬಿಬಿಎಂಪಿ ಹೊರವಲಯ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿನ 110 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಪಾಲಿಕೆ ಕೇಂದ್ರ ಕಛೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ. ಶೀಘ್ರವೇ ಕುಡಿಯುವ ನೀರಿನ ಸಮಸ್ಯೆ ಆಲಿಸುವ ಸಲುವಾಗಿ ಪ್ರತ್ಯೇಕವಾಗಿ ಮೇಲುಸ್ತುವಾರಿಗಾಗಿ ಧರಣೇಂದ್ರ ಕುಮಾರ್, ಕಾರ್ಯಪಾಲಕ ಅಭಿಯಂತರರು(ದಾಸರಹಳ್ಳಿ), ಬಿಬಿಎಂಪಿ ಇವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

ನೀರಿನ ಸಮಸ್ಯೆ: ಸಹಾಯವಾಣಿಗೆ ಸಂಪರ್ಕಿಸಿ
ಬಿಬಿಎಂಪಿ ವ್ಯಾಪ್ತಿಯ 35 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ಒದಗಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ ಎಂದು ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್ ತಿಳಿಸಿದರು.
ಇನ್ನೂ ಬಿಬಿಎಂಪಿ ವ್ಯಾಪ್ತಿಯ ಇನ್ನುಳಿದ ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯವಾಣಿ ಸಂಖ್ಯೆಯಾದ 1916 ಗೆ ಕರೆ ಮಾಡಿ ತಮ್ಮ ಸಮಸ್ಯೆ ಕುರಿತು ಮಾಹಿತಿ ನೀಡುವಂತೆ ಕೋರಲಾಗಿದೆ ಎಂದರು.
ಬೆಂಗಳೂರು ನಗರದ ಹೊರ ವಲಯಗಳಲ್ಲಿ ಬರುವ 35 ವಾರ್ಡ್‌ಗಳಲ್ಲಿ ಬರುವ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಪಾಲಿಕೆಯು 35 ವಾರ್ಡ್‌ಗಳಿಗೂ ಪ್ರತ್ಯೇಕವಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಪರಿಹಾರ ಕ್ರಮದ ಭಾಗವಾಗಿ ಅಧಿಕಾರಿಗಳ ನಿಯೋಜನೆ
ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ. ರಾಜ್ಯ ಸರ್ಕಾರದ ಸ್ಥಳೀಯ ನಾಗರಿಕ ಸಂಸ್ಥೆಗಳು ಸಮನ್ವಯತೆಯಿಂದ ಪರಿಹಾರ ಕ್ರಮ ಕೈಗೊಳ್ಳುತ್ತಿವೆ. ಇಂದು ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಬೆಂಗಳೂರು ನೀರು ಸಮಸ್ಯೆ ಪರಿಹಾರಕ್ಕಾಗಿ 500ಕೋಟಿಗೂ ಅಧಿಕ ಹಣ ನೀಡಲಾಗಿದೆ. ಬೋರ್ವೆಲ್, ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಅದರ ಭಾಗವಾಗಿಯೇ ಉಸ್ತುವಾರಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.












Click it and Unblock the Notifications