Get Updates
Get notified of breaking news, exclusive insights, and must-see stories!

Bengaluru Water Crisis: ನೀರಿನ ಅಭಾವ ತಪ್ಪಿಸಲು ಸರ್ಕಾರದ ಕ್ರಮಗಳ ಮಾಹಿತಿ: ಅಪ್ಡೇಟ್

ಬೆಂಗಳೂರು, ಫೆಬ್ರವರಿ 24: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚುತ್ತಿದೆ. ಇತ್ತ ಮಳೆ ಕಡಿಮೆಯಾಗಿ ಬರಗಾಲ ಎದುರಾಗಿದ್ದು ನೀರಿನ ಹಾಹಾಕಾರ ಎದುರಾಗಿದೆ. ನದಿಗಳಲ್ಲಿ ಅಷ್ಟಾಗಿ ನೀರಿಲ್ಲ. ಆದರೂ ನೀರು ಪೂರೈಸಬೇಕಿದೆ. ಹಾಗಾದರೆ ಸರ್ಕಾರ ನೀರಿನ ಅಭಾವ ತಡೆದು ಅಗತ್ಯ ಪೂರೈಕೆಗೆ ಕೈಗೊಳ್ಳಲಿರುವ ಮಾರ್ಗೋಪಾಯ, ಕ್ರಮಗಳ ಪೂರ್ಣ ಮಾಹಿತಿ ಇಲ್ಲಿದೆ.

ಬೆಂಗಳೂರಿನಲ್ಲಿ ನೀರಿನ ಅಭಾವ ಉದ್ಬವವಾಗದಂತೆ BBMP ಹಾಗೂ BWSSB ಸೂಕ್ತ ಕ್ರಮ ಕೈಗೊಳ್ಳಲು ನಗರಾಭಿವೃದ್ಧಿ ಇಲಾಖೆ ನಿರ್ದೇಶಿಸಿದೆ. ಈ ಬಗ್ಗೆ ಭಾನುವಾರ ಬಿಬಿಎಂಪಿಯಲ್ಲಿ ನಡೆದ ಹೈವೋಲ್ಟೇಜ್ ಸಭೆಯಲ್ಲಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾದ ರಾಕೇಶ್ ಸಿಂಗ್ ಸೂಚಿಸಿದರು.

Bengaluru Water Shortage Crisis: Cauvery Water: BWSSB BBMP Govt What Take Action, details

ಬಿಬಿಎಂಪಿಯ ಮಹದೇವಪುರ, ಆರ್.ಆರ್.ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಯಲಹಂಕ ವಲಯಗಳಿಗೆ(110 ಹಳ್ಳಿಗಳು ಸೇರಿದಂತೆ) ಬೋರ್ ವೆಲ್‌ಗಳನ್ನು ಕೊರೆಯಲು 131 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಅವಶ್ಯಕತೆಯಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶಿಸಿದರು.

ಬೆಂಗಳೂರಿನಲ್ಲಿ 58 ಕಡೆ ನೀರಿನ ಸಮಸ್ಯೆ

ನಗರದಲ್ಲಿ 58 ಕಡೆ ನೀರಿನ ಸಮಸ್ಯೆಯಿದೆ. ಮಹದೇವಪುರ 16, ಆರ್.ಆರ್ ನಗರ 25, ಬೊಮ್ಮನಹಲ್ಳಿ 5 ಕಡೆ, ಯಲಹಂಕ ಹಾಗೂ ದಾಸರಹಳ್ಳಿ ತಲಾ 3 ಕಡೆ ನೀರಿನ ಅಭಾವ ಹೆಚ್ಚಿದ್ದು, ಈ ಸಂಬಂಧ ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಬೋರ್ ವೆಲ್‌ಗಳನ್ನು ಕೊರೆದು ನೀರಿನ ಅಭಾವವನ್ನು ಕಡಿಮೆ ಮಾಡಬೇಕು.

Bengaluru Water Shortage Crisis: Cauvery Water: BWSSB BBMP Govt What Take Action, details

ನಗರದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಘಟಕಗಳು ನಿಂತಿವೆ, ಅಲ್ಲಿ ಕೂಡಲೆ ಬೋರ್ ವೆಲ್‌ಗಳನ್ನು ಹಾಕಿ ಆರ್.ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಆರ್.ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡುವವರೆಗೆ ತಾತ್ಕಾಲಿಕವಾಗಿ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಅಗತ್ಯ ನೋಡಿ ಕೊಳವೆಬಾವಿ ಕೊರೆಯಲು ಚಿಂತನೆ

ನಗರದ ಸಿಎಂಸಿ, ಟಿಎಂಸಿ ಹಾಗೂ ಕೋರ್ ಏರಿಯಾಗಳಲ್ಲಿ ಈಗಾಗಲೇ ಪಾಲಿಕೆ ವತಿಯಿಂದ ಕೊರೆದಿರುವ ಕೊಳವೆ ಬಾವಿಗಳು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲಾಗಿದೆ. ಮುಂದೆ ಕೊಳವೆಬಾವಿಗಳ ಅವಶ್ಯಕತೆಯಿದ್ದಲ್ಲಿ ಜಲಮಂಡಳಿಯಿಂದಲೇ ಕೊಳವೆ ಬಾವಿ ಕೊರೆಯಲಿದ್ದು, ಪಾಲಿಕೆಯಿಂದ ಜಲಮಂಡಳಿಗೆ ಹಣ ನೀಡಲಾಗುತ್ತದೆ ಎಂದು ಅವರು ಅಭಯ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಕುರಿತು ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

110 ಹಳ್ಳಿಗಳಿಗೆ ಬೇಕಾದ ಅನುದಾನ ಮಾಹಿತಿ ಕೊಡಿ

ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿತಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನಿರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ/ಸಿಬ್ಬಂದಿಯನ್ನು ವಲಯ ಆಯುಕ್ತರ ಅಧೀನದಲ್ಲಿ ಕಾರ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಾಭಿವೃದ್ಧಿ ಇಲಾಖೆಯ ರಾಕೇಶ್ ಸಿಂಗ್ ಅವರು, ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳಿ. ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದರು.

ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿತಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನಿರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ/ಸಿಬ್ಬಂದಿಗಳನ್ನು ವಲಯ ಆಯುಕ್ತರ ಅಧೀನದಲ್ಲಿ ಕಾರ್ಯ ನಿರ್ವಹಿಸಿ ಎಂದು ತಿಳಿಸಿದರು.

ಸಿಂಟೆಕ್ಸ್ ಟ್ಯಾಂಕ್‌ಗಳ ಮೂಲಕ ನೀರಿನ ವ್ಯವಸ್ಥೆ

ಆರ್.ಆರ್ ನಗರ ವಲಯದಲ್ಲಿ ಈಗಾಗಲೇ ಪ್ರಮುಖ ಸ್ಥಳದಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಎಲ್ಲಾ ವಲಯಗಳಲ್ಲಿಯೂ ಪ್ರಮುಖ ಸ್ಥಳ, ಕೊಳಗೇರಿ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಿದೆ.

110 ಹಳ್ಳಿಗಳಲ್ಲಿ ನೀರಿನ ಸಮಸ್ಯೆಗೆ ಪರಿಹಾರಕ್ಕೆ ವ್ಯವಸ್ಥೆ

ಬಿಬಿಎಂಪಿ ವ್ಯಾಪ್ತಿಗೆ ಬರುವ 110 ಹಳ್ಳಿಗಳಲ್ಲಿ ಹೆಚ್ಚು ಸಮಸ್ಯೆ ಇದೆ. ಹಳ್ಳಿಗಳಿಗೆ ಹೆಚ್ಚು ಒತ್ತು ನೀಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಜೊತೆಗೆ ನೀರಿನ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಂಡು ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಲಿದೆ. 110 ಹಳ್ಳಿಗಳಿಗೆ ಜಲಮಂಡಳಿಯಿಂದ 40000 ಸಂಪರ್ಕ ನೀಡಲಾಗಿದೆ. 110 ಹಳ್ಳಿಗಳಲ್ಲಿ ಕಾರ್ಯ ನಿರ್ವಹಿಸುವ ಜಲಮಂಡಳಿಯ ಅಧಿಕಾರಿ/ಸಿಬ್ಬಂದಿ ಪಾಲಿಕೆ ವಲಯ ಆಯುಕ್ತರ ಅಧೀನದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+