Bengaluru Weather: ನಗರಾದ್ಯಂತ ಮುಂದುವರಿಯಲಿದೆ ತೀವ್ರ ಚಳಿ, ಈ ದಿನದಿಂದ ಮಳೆ: ಐಎಂಡಿ ಮುನ್ಸೂಚನೆ
ಬೆಂಗಳೂರು: ಬೆಂಗಳೂರಿನಲ್ಲಿ ಚಳಿ ವಾತಾವರಣ ಇದೆ. ಮೂರರಿಂದ ನಾಲ್ಕು ದಿನಗಳ ವರೆಗೆ ಚಳಿ ಮುಂದುವರಿಯಲಿದ್ದು ಗುರುವಾರ ಹಾಗೂ ಶುಕ್ರವಾರ (ಜನವರಿ 8 ಮತ್ತು 9)ರಂದು ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಇನ್ನೊಂದು ವಾರ ಹವಾಮಾನ ಹೇಗಿರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಭಾರೀ ಚಳಿ ಮುಂದುವರಿದಿದೆ. ಶೀತ ಅಲೆ ಇರುವುದರಿಂದ ಬೆಂಗಳೂರಿನಲ್ಲೂ ಮುಂಜಾನೆ ಹಾಗೂ ಸಂಜೆ ಸಮಯದಲ್ಲಿ ಚಳಿ ಮುಂದುವರಿದಿದೆ. ಇನ್ನೊಂದು ವಾರದ ಅವಧಿಗೆ ಚಳಿ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕಳೆದ ಎರಡು ತಿಂಗಳಿನಿಂದಲೂ ಚಳಿ ವಾತಾವರಣವಿದ್ದು. ಇನ್ನೊಂದು ತಿಂಗಳ ಅವಧಿಗೆ ಇದೇ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಈ ನಡುವೆ ಹವಾಮಾನ ಬದಲಾವಣೆಯಿಂದಾಗಿ ಮೂರು ದಿನಗಳ ವರೆಗೆ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.

ಈ ಭಾಗಗಳಲ್ಲಿ ಕನಿಷ್ಠ ತಾಪಮಾನ ದಾಖಲು
ಇನ್ನು ಬೆಂಗಳೂರಿನಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಗರಿಷ್ಠ ತಾಪಮಾನವು 26.3 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು ಅತ್ಯಂತ ಕಡಿಮೆ 14.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿ ಗರಿಷ್ಠ ತಾಪಮಾನವು 25.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 13.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನು ಬೆಂಗಳೂರು ಎಚ್‌ಎಎಲ್ ಏರ್‌ಪೋರ್ಟ್ ಪ್ರದೇಶದಲ್ಲಿ ಗರಿಷ್ಠ ತಾಪಮಾನವು 25.6 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನವು 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಐಎಂಡಿ ರಿಪೋರ್ಟ್ ಉಲ್ಲೇಖಿಸಿದೆ.
ಬೆಂಗಳೂರಿನಲ್ಲಿ ಈ ದಿನಗಳಲ್ಲಿ ಮಳೆ
ಸಿಲಿಕಾನ್ ಸಿಟಿಯಲ್ಲಿ ಕಳೆದ 15 ದಿನಗಳಿಂದಲೂ ತೀವ್ರ ಚಳಿ ಇದೆ. ಇದೀಗ ಚಳಿ ಹೆಚ್ಚಾದ ಬೆನ್ನಲ್ಲೇ ಈ ವಾರ ಎರಡು ದಿನಗಳ ಕಾಲ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನ ಜನವರಿ 9 ಹಾಗೂ ಜನವರಿ 10ರಂದು ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ.
ಮುಂದಿನ 48 ಗಂಟೆ ಹವಾಮಾನ ಹೇಗಿರಲಿದೆ ?
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಯ ಅವಧಿಯಲ್ಲಿ ಪ್ರಮುಖವಾಗಿ ಶುಭ್ರ ಆಕಾಶ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಮುಂಜಾನೆ ಸಮಯದಲ್ಲಿ ದಟ್ಟ ಮಂಜು ಕವಿದಿರುವ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಡಿಗ್ರಿ ಸೆಲ್ಸಿಯಸ್ ಹಾಗೂ 15 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮುಂದಿನ 48 ಗಂಟೆ ಅವಧಿಯಲ್ಲೂ ಇದೇ ವಾತಾವರಣ ಇರುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಉಲ್ಲೇಖಿಸಿದೆ.
ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಅದರ ಪಕ್ಕದ ಕೇರಳ ಕರಾವಳಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ಇನ್ನು ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ನೈಋತ್ಯ ಬಂಗಾಳ ಕೊಲ್ಲಿ ಹಾಗೂ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಇದೆ. ಈ ಕಾರಣಕ್ಕಾಗಿ ಈ ವಾರದಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ತಿಳಿಸಿದೆ.












Click it and Unblock the Notifications