Benglauru weather: ಭಾನುವಾರ ಕನಿಷ್ಠ ತಾಪಮಾನ ದಾಖಲು: ವಾತಾವರಣ ಹೇಗಿರಲಿದೆ? ಮುನ್ಸೂಚನೆ
ಬೆಂಗಳೂರು, ಜನವರಿ 28: ಬೆಂಗಳೂರಲ್ಲಿ ಕೆಲವು ದಿನಗಳಿಂದ ಮೋಡ ಕವಿದ ಮಬ್ಬು ವಾತಾವರಣ ಕಂಡು ಬಂದಿದೆ. ಚಳಿಯು ಇನ್ನೂ ಮೂರು ದಿನ ಮುಂದುವರಿಯಲಿದೆ. ಇಳಿಕೆ ಆಗಿರುವ ಗರಿಷ್ಠ ತಾಪಮಾನ ಕೊಂಚ ಬದಲಾವಣೆ ಆಗಲಿದೆ. ಭಾನುವಾರ ಸಹ ಕನಿಷ್ಠ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬಿಸಿಲಿನ ವಾತಾವರಣ ಕಡಿಮೆ ಆಗಿದೆ. ಚಳಿ ತುಸು ಏರಿಕೆಯಾಗಿ ನಂತರ ಮೋಡ ಮುಸುಕಿನ ವಾತಾವರಣ ಕಂಡು ಬಂದಿತ್ತು. ಕಳೆದ ಎರಡು ದಿನದಿಂದ ಬೆಳಗ್ಗೆ ತಂಪು ವಾತಾವರಣ ಕಂಡು ಬಂದಿದೆ. ಈ ವೇಳೆ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಗರಿಷ್ಠ ತಾಪಮಾನದಲ್ಲೂ ಸಹಿತ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಕನಿಷ್ಠ ತಾಪಮಾನ ಹೀಗೆ ಮುಂದುವರಿಯಲಿದೆ. ಬೆಳಗ್ಗೆ ಮಂಜು ಕವಿಯುವ ಸಾಧ್ಯತೆ ಇದೆ. ಬೆಳಗ್ಗೆ ರಾತ್ರಿ ತಂಪು ವಾತಾವರಣ ಕಂಡು ಬರಲಿದೆ. ಈ ವೇಳೆ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಜನವರಿ 30ರಿಂದ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬೆಂಗಳೂರಿನ HALನಲ್ಲಿ 14.9 ಡಿ.ಸೆ
ನಗರದಲ್ಲಿ ಮಧ್ಯಾಹ್ನ ಗರಿಷ್ಠ ತಾಪಮಾನ ಮುಂದುವರಿಯಲಿದೆ. ಸದ್ಯ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಇದು 31 ಡಿ.ಸೆ. ವರೆಗೆ ದಾಖಲಾಗುವ ನಿರೀಕ್ಷೆ ಇದೆ. ಎರಡು ದಿನದಿಂದ ಬಿದ್ದಿದ್ದ ಮಬ್ಬು ವಾತಾವರಣ ಮರೆಯಾಗಿದೆ.
ಭಾನುವಾರ ಬೆಳಗ್ಗೆ ಬೆಂಗಳೂರಿನ ಎಚ್‌ಎಎಲ್ ವ್ಯಾಪ್ತಿಯಲ್ಲಿ 14.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಎಲ್ಲಿಯೂ ಮಳೆಯ ಸಾಧ್ಯತೆಗಳು ಇಲ್ಲ. ಬದಲಾಗಿ ನೀಲಿ ಸ್ವಚ್ಚ ಆಕಾಶ ಇರಲಿದ್ದು, ಹೀಗಿದ್ದಾಗ, ಮಧ್ಯಾಹ್ನ ಬಿಸಿಲು ಹೆಚ್ಚಿರುತ್ತದೆ. ಬೆಳಗ್ಗೆ ಮಂಜು, ತಂಪು ವಾತಾವರಣ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಒಣಹವೆ
ಬೆಂಗಳೂರಿನ ಜೊತೆಗೆ ಬೇರೆಯ ಜಿಲ್ಲೆಗಳ ವಾತಾವರಣ ನೋಡುವುದಾದರೆ, ರಾಜ್ಯದಲ್ಲಿ ಚಳಿ ತುಸು ಕಡಿಮೆ ಆಗಿದೆ. ಚಾಮರಾಜನಗರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಒಳಡನಾಡು ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ.
ಇನ್ನೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಳ್ಳಾರಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ,ತುಮಕೂರು, ವಿಜಯನಗರ ಹಾಗೂ ಶಿವಮೊಗ್ಗದಲ್ಲೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.












Click it and Unblock the Notifications