ವೈಟ್‌ಫೀಲ್ಡ್-ಕೆಆರ್ ಪುರಂ ಮೆಟ್ರೋ ಮಾರ್ಗ: ಉದ್ಘಾಟನೆಗೂ ಮುನ್ನ ಆರು ನಿಲ್ದಾಣಗಳ ಹೆಸರು ಬದಲಾವಣೆ- ಇಲ್ಲಿದೆ ಪಟ್ಟಿ
ಬೆಂಗಳೂರು, ಮಾರ್ಚ್ 24: ಬಹು ನಿರೀಕ್ಷಿತ ವೈಟ್‌ಫೀಲ್ಡ್- ಕೆಆರ್ ಪುರಂ ಮೆಟ್ರೋ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಲಿದ್ದಾರೆ. 12 ನಿಲ್ದಾಣಗಳನ್ನು ಹೊಂದಿರುವ ಮಾರ್ಗದ ವಾಣಿಜ್ಯ ಕಾರ್ಯಾಚರಣೆ ಭಾನುವಾರ ಪ್ರಾರಂಭವಾಗುವ ನಿರೀಕ್ಷೆಯಿದೆ. ಉದ್ಘಾಟನೆಗೂ ಮುನ್ನ ಹೊಸ ಕಾರಿಡಾರ್‌ನಲ್ಲಿ ಆರು ಮೆಟ್ರೋ ನಿಲ್ದಾಣಗಳ ಹೆಸರನ್ನು ಬದಲಾಯಿಸಲು ಬೆಂಗಳೂರು ಮೆಟ್ರೋ ಅಧಿಕಾರಿಗಳು ನಿರ್ಧರಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಮೆಟ್ರೋ ನಿಲ್ದಾಣಗಳ ಹೆಸರನ್ನು ಬದಲಾಯಿಸುವುದು ಸಾಮಾನ್ಯ ಕ್ರಮವಲ್ಲ. ಜನಪ್ರಿಯ ಬೇಡಿಕೆ ಮತ್ತು ಪ್ರಯಾಣಿಕರ ಅನುಕೂಲ ಸೇರಿದಂತೆ ವಿವಿಧ ಅಂಶಗಳನ್ನು ಅಧಿಕಾರಿಗಳು ಗಮನಿಸುತ್ತಾರೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (BMRCL) ಅಧಿಕಾರಿಗಳು ತಿಳಿಸಿದ್ದಾರೆ.

ಆರು ನಿಲ್ದಾಣಗಳ ಹೆಸರುಗಳಲ್ಲಿ ಬದಲಾವಣೆ
1. ಕೆ.ಆರ್. ಪುರಂ ನಿಲ್ದಾಣವನ್ನು ಕೃಷ್ಣರಾಜಪುರ (ಕೆ.ಆರ್. ಪುರ) ಎಂದು ಬದಲಾಯಿಸಲಾಗಿದೆ. ಕನ್ನಡ ಪರ ಸಂಘಟನೆಗಳ ಮನವಿ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.
2. ಮಹದೇವಪುರ ಮೆಟ್ರೋ ನಿಲ್ದಾಣವನ್ನು ಸಿಂಗಯ್ಯಪ್ಪನಪಾಳ್ಯ ನಿಲ್ದಾಣವೆಂದು ಮರುನಾಮಕರಣ ಮಾಡಲಾಗಿದೆ.
3. ಹೂಡಿ ಜಂಕ್ಷನ್ ಮೆಟ್ರೋ ನಿಲ್ದಾಣವನ್ನು ಹೂಡಿ ಎಂದು ಬದಲಾಯಿಸಲಾಗಿದೆ.
4. ಕಾಡುಗೋಡಿ ಮೆಟ್ರೋ ನಿಲ್ದಾಣವನ್ನು ಕಾಡುಗೋಡಿ ಟ್ರೀ ಪಾರ್ಕ್ ಎಂದು ಮರುನಾಮಕರಣ ಮಾಡಲಾಗಿದೆ.
5. ಚನ್ನಸಂದ್ರವನ್ನು ಹೋಮ್ ಫಾರ್ಮ್ ಚನ್ನಸಂದ್ರ ಎಂದು ಬದಲಾಯಿಸಲಾಗಿದೆ.
6. ವೈಟ್‌ಫೀಲ್ಡ್ ಅನ್ನು ವೈಟ್‌ಫೀಲ್ಡ್ (ಕಾಡುಗೋಡಿ) ಎಂದು ಮರುನಾಮಕರಣ ಮಾಡಲಾಗಿದೆ.
ಪಟ್ಟಂದೂರು ಅಗ್ರಹಾರ, ಸದಾಮಂಗಲ, ನಲ್ಲೂರಹಳ್ಳಿ, ಕುಂದಹಳ್ಳಿ, ಸೀತಾರಾಮಪಾಳ್ಯ, ಗರುಡಾಚಾರ್ಪಾಳ್ಯ ಮತ್ತು ಮಹದೇವಪುರ ಈ ಮಾರ್ಗದ ಇತರ ನಿಲ್ದಾಣಗಳಾಗಿವೆ.
ಈ 13.7 ಕಿಲೋಮೀಟರ್ ಪರ್ಪಲ್ ಲೈನ್ ವಿಸ್ತರಣೆಯು ವೈಟ್‌ಫೀಲ್ಡ್- ಬೈಯಪ್ಪನಹಳ್ಳಿ ಕಾರಿಡಾರ್‌ನ ಮೊದಲ ಹಂತವಾಗಿದೆ. ವೈಟ್‌ಫೀಲ್ಡ್ ಮತ್ತು ಕೆಆರ್ ಪುರಂ ನಡುವಿನ ಅಂತರವನ್ನು ಮೆಟ್ರೋ 22 ನಿಮಿಷಗಳಲ್ಲಿ ಕ್ರಮಿಸಲಿದೆ.

ಬೆಂಗಳೂರಿನ ಐಟಿ ಕಾರಿಡಾರ್ ಅನ್ನು ಇತರ ಭಾಗಗಳಿಗೆ ಸಂಪರ್ಕಿಸುವ ಮೂಲಕ ವೈಟ್‌ಫೀಲ್ಡ್‌ಗೆ ಮೆಟ್ರೋ ಜಾಲವು ನಮ್ಮ ಮೆಟ್ರೋದ ಮಹತ್ವದ ಹೆಜ್ಜೆಯಾಗಿದೆ. BMRCL ಮ್ಯಾನೇಜಿಂಗ್ ಡೈರೆಕ್ಟರ್ ಅಂಜುಮ್ ಪರ್ವೇಜ್ ಪ್ರಕಾರ, ಈ ವಿಸ್ತರಣೆಯು ಪ್ರತಿ ದಿನ ಸುಮಾರು 1.2 ಲಕ್ಷ ಪ್ರಯಾಣಿಕರನ್ನು ಹೊಂದುವ ನಿರೀಕ್ಷೆಯಿದೆ.
ಆರಂಭದಲ್ಲಿ, ಈ ಮಾರ್ಗವು 10- 12 ನಿಮಿಷಗಳ ಆವರ್ತನದೊಂದಿಗೆ ಏಳು ರೈಲುಗಳನ್ನು ಹೊಂದಿರುತ್ತದೆ. ಈ ಮಾರ್ಗದಲ್ಲಿ ಗರಿಷ್ಠ ಟಿಕೆಟ್ ದರ 35 ರೂ. ಆಗಿದೆ ಎಂದು ಅಂಜುಮ್ ಪರ್ವೇಜ್ ಮಾಹಿತಿ ನೀಡಿದ್ದಾರೆ.
ಉಳಿದಿರುವ ಕೆ ಆರ್ ಪುರಂ- ಬೈಯಪ್ಪನಹಳ್ಳಿ ವಿಭಾಗವು ಜುಲೈ 2023 ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸಂಪೂರ್ಣ ಕಾರಿಡಾರ್ ತೆರೆಯುವುದರೊಂದಿಗೆ, ನಮ್ಮ ಮೆಟ್ರೋ 35 ಕ್ಕೂ ಹೆಚ್ಚು ಸ್ಥಳಗಳಿಗೆ ಸಂಪರ್ಕ ಕಲ್ಪಿಸುತ್ತದೆ.
ಈ ಹೊಸ ಮೆಟ್ರೋ ಮಾರ್ಗವು ಕೆ ಆರ್ ಪುರಂ ಮತ್ತು ವೈಟ್‌ಫೀಲ್ಡ್ ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಸರ್ಕಾರದ ಪ್ರಕಾರ, ಕೆ ಆರ್ ಪುರಂನಿಂದ ವೈಟ್‌ಫೀಲ್ಡ್ ತಲುಪಲು ಮೆಟ್ರೋದಲ್ಲಿ ಕೇವಲ 24 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಇಲ್ಲದಿದ್ದರೆ ಅದು ಸುಮಾರು ಒಂದು ಗಂಟೆ ತೆಗೆದುಕೊಳ್ಳುತ್ತದೆ.
ಈ ಹೊಸ ವೈಟ್‌ಫಿಲ್ಡ್ ಮೆಟ್ರೋ ಮಾರ್ಗದ ಉದ್ಘಾಟನೆಗೆ ಮುಂಚಿತವಾಗಿ, BMRCL (ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್) ವೈಟ್‌ಫೀಲ್ಡ್ - ಕಾಡುಗೋಡಿ ಮೆಟ್ರೋ ನಿಲ್ದಾಣವನ್ನು ವರ್ಣರಂಜಿತ ದೀಪಗಳಿಂದ ಅಲಂಕರಿಸಿರುವುದು ಕಂಡುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 25 ರಂದು ಕೆಆರ್ ಪುರಂ-ವೈಟ್‌ಫೀಲ್ಡ್ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲಿದ್ದಾರೆ. ಮೇ ತಿಂಗಳಲ್ಲಿ ಚುನಾವಣೆ ಇರುವ ರಾಜ್ಯಕ್ಕೆ ಪ್ರಧಾನಿ ಮೋದಿ ಅವರು ಏಳನೇ ಬಾರಿಗೆ ಭೇಟಿ ನೀಡಲಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD










Click it and Unblock the Notifications