Get Updates
Get notified of breaking news, exclusive insights, and must-see stories!

ಬೆಂಗಳೂರಿನ 138 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಶೀಘ್ರ ಆರಂಭ

ಬೆಂಗಳೂರು, ಏ.9: ಮುಂಬರುವ ಶೈಕ್ಷಣಿಕ ವರ್ಷದಿಂದ ಬೆಂಗಳೂರಲ್ಲಿ 138 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಸರ್ಕಾರ ತುದಿಗಾಲಿನಲ್ಲಿ ನಿಂದಿದೆ. ಹಾಗಾಗಿ ಒಟ್ಟು 1 ಸಾವಿರ ಶಿಕ್ಷಕರಿಗೆ ಇಂಗ್ಲಿಷ್ ತರಬೇತಿಯನ್ನು ನೀಡಲಾಗುತ್ತಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಬೆಂಗಳೂರಾದ್ಯಂತ ಒಟ್ಟು 1ಸಾವಿರ ಶಾಲೆಗಳನ್ನು ಗುರುತಿಸಿತ್ತು. ಅದರಲ್ಲಿ 138 ಶಾಲೆಗಳಲ್ಲಿ ಮೊದಲು ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗುತ್ತಿದೆ.

Bengaluru will get 138 English-medium schools

ಬೆಂಗಳೂರು ನಗರ ಹಾಗೂ ಹೊರವಲಯದಲ್ಲಿ ಇರುವ ಒಟ್ಟು 138 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಿಸಲು ಯೋಜನೆ ರೂಪಿಸಿದೆ. ಇದಕ್ಕೆ ಕನ್ನಡ ಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿವೆ. ಇದರ ಮಧ್ಯೆಯೇ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಸರ್ಕಾರಕ್ಕೆ ಇಂಗ್ಲಿಷ್ ಮಾಧ್ಯಮ ಶಾಲೆ ಆರಂಭಿಸುವ ಉಸಾಬರಿ ಬೇಡ, ಕನ್ನಡ ಶಾಲೆಗಳಲ್ಲಿಯೇ ಒಂದನೇ ತರಗತಿಯಿಂದ ಇಂಗ್ಲಿಷ್ ಅನ್ನು ಒಂದು ಭಾಷೆಯಾಗಿ ಸಮರ್ಥವಾಗಿ ಕಲಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹುಟ್ಟಿಸಬೇಕು ಎನ್ನುವುದು ಹಲವರ ವಾದವಾಗಿತ್ತು.

ಸರ್ಕಾರ ಹಾಗಾಗಿ ಸರ್ಕಾರಿ ಶಾಲೆಗಳಲ್ಲೇ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯಲು ಹೊರಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+