ಎಲಿವೇಟೆಡ್ ಕಾರಿಡಾರ್ ಯೋಜನೆ: ಪ್ರತ್ಯೇಕ ಟೆಂಡರ್ ಗೆ ನಿರ್ಧಾರ
ಬೆಂಗಳೂರು, ಮಾರ್ಚ್ 7: ಎಲಿವೇಟೆಡ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಟೆಂಡರ್ ಕರೆಯಲು ಕೆಆರ್‌ಸಿಡಿಎಲ್ ಒಲವು ತೋರಿದೆ.
ನಗರದ ಸೆಂಟ್ರಲ್ ಬ್ಯುಸಿನೆಸ್ ಡಿಸ್ಟ್ರಿಕ್ಟ್ ವ್ಯಾಪ್ತಿಯಲ್ಲಿನ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಲು ಉದ್ದೇಶಿತ ಎಲಿವೇಟೆಡ್ ಕಾರಿಡಾರ್ ಯೋಜನೆಯಡಿ ಲೂಪ್ ಮಾದರಿಯಲ್ಲಿ ಮೇಲು ರಸ್ತೆ ನಿರ್ಮಿಸಲು ನಿರ್ಧರಿಸಲಾಗಿದೆ.
ಉತ್ತರ-ದಕ್ಷಿಣ ಕಾರಿಡಾರ್ ಮಾರ್ಗದಲ್ಲಿನ ಸಿಬಿಡಿ ಪ್ರದೇಶದಲ್ಲಿನ ವಾಣಿಜ್ಯ ಚಟುವಟಿಕೆಯಿಂದಾಗಿ ಸದಾ ಟ್ರಾಫಿಕ್ ಪ್ರಮಾಣ ಹೆಚ್ಚಿರುತ್ತದೆ. ಬೆಳಗ್ಗೆಯಿಂದ ರಾತ್ರಿವರೆಗೂ ಸಂಚಾರ ದಟ್ಟಣೆಯಲ್ಲೇ ಕಾಲ ಕಳೆಯಬೇಕಿದೆ. ವಸತಿ ಸಮುಚ್ಚಯವಿರುವ ಪ್ರದೇಶವಾಗಿರುವ ಕಾರಣ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಸಂಚಾರ ದಟ್ಟಣೆಯಾಗುವುದನ್ನು ಗಮನಿಸಿ ಕೆಲ ಮುಖ್ಯ ರಸ್ತೆಗಳನ್ನು ಲೂಪ್ ಮಾದರಿಯ ಮೇಲು ರಸ್ತೆಗೆ ಸಂಪರ್ಕಿಸಲಾಗುತ್ತದೆ.

ಈಗಾಗಲೇ ಮೊದಲ ಹಂತದ ಕಾರಿಡಾರ್ ಗೆ ಮೂರು ಪ್ಯಾಕೇಜ್‌ನಡಿ ಟೆಂಡರ್ ಆಹ್ವಾನಿಸಲಾಗಿದೆ. ಆದರೆ ಲೂಪ್ ಮಾದರಿಯ ಮೇಲು ರಸ್ತೆಯನ್ನು ಸೇರ್ಪಡೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಪ್ರತ್ಯೇಕ ಟೆಂಡರ್ ಆಹ್ವಾನಿಸಿ ಕಾಮಗಾರಿಯನ್ನು ಅನುಷ್ಠಾನಕ್ಕೆ ತರುವ ಕೆಆರ್‌ಡಿಸಿಎಲ್ ಹೊಂದಿದೆ.
ಈಗಿರುವ ಟೆಂಡರ್ ನ 2,3ನೇ ಪ್ಯಾಕೇಜ್ ಜಾರಿಯಾಗುವ ಮಾರ್ಗದಲ್ಲಿ ಲೂಪ್ ಮಾದರಿ ಮೇಲು ರಸ್ತೆ ಮೇಲೇಳಲಿದೆ. ಶಿವಾಜಿನಗರದ ವಾಣಿಜ್ಯ ಪ್ರದೇಶ ಹಾಗೂ ರಿಚ್ಮಂಡ್ ರಸ್ತೆ ಸುತ್ತಲಿನ ಪ್ರಮುಖ ಜಂಕ್ಷನ್‌ಗಳ ವ್ಯಾಪ್ತಿಗೆ ಒಳಪಟ್ಟ ಆರು ರಸ್ತೆಗಳಲ್ಲಿ ಲೂಪ್ ಅಳವಡಿಸಲಾಗುತ್ತದೆ.
ಹಡ್ಸನ್ ವೃತ್ತ-ರಿಚ್ಮಂಡ್ ರಸ್ತೆ, ಮಿನರ್ವ ವೃತ್ತ, ಕೆಎಚ್ ರಸ್ತೆ ಹಾಗೂ ದಂಡು ರೈಲು ನಿಲ್ದಾಣದಿಂದ ಶಿವಾಜಿನಗರದ ರಸಲ್ ಮಾರುಕಟ್ಟೆ ಕಡೆಗೆ ಸಾಗುವ ರೀತಿ ವಿನ್ಯಾಸ ಮಾಡಲಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications