Bengaluru Rain: ಜೂನ್ 21ರವರೆಗೆ ನಗರದಲ್ಲಿ ಮಳೆ ಅಬ್ಬರ, ಸೋಮವಾರ ವಿವಿಧಡೆ ಮಳೆ ಮಾಹಿತಿ
ಬೆಂಗಳೂರು, ಜೂನ್ 17: ಬೆಂಗಳೂರಿನಲ್ಲಿ ಸೋಮವಾರ ಕೆಲವೆಡೆ ಬಿಸಿಲಿನ ದರ್ಶನವಾದರೆ, ಮತ್ತೆ ಹಲವಡೆ ಮಳೆಯ ಆಗಿದೆ. ಜೂನ್ 21ರವರೆಗೂ ನಗರದಲ್ಲಿ ಹಗುರದಿಂದ ಸಾಧಾರಣ ಮಳೆ ಆಗುವ ಮುನ್ಸೂಚನೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಧ್ಯಾಹ್ನವೇ ಹಲವು ಕಡೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಆಗಿದೆ. ಇಲ್ಲೆಲ್ಲ ಮೋಡ ಕವಿದ ವಾತಾವರಣ ಕಂಡು ಬಂದಿದೆ. ವಿಜಯನಗರ, ಹಂಪಿನಗರ, ನಾಯಂಡಹಳ್ಳಿ, ರಾಜಾಜಿನಗರ, ಮಲ್ಲೇಶ್ವರಂ, ಬನಶಂಕರಿ, ಬಸವೇಶ್ವರ ನಗರ ಕಾಮಾಕ್ಷಿಪಾಳ್ಯ, ಕೆಂಗೇರಿ, ದೀಪಾಂಜಲಿ ನಗರ, ಚಂದ್ರಾ ಬಡಾವಣೆ, ಹಂಪಿನಗರ ಸೇರಿದಂತೆ ಕೆಲವು ಕಡೆಗಳಲ್ಲಿ ಕೆಲ ಕಾಲ ಜೋರು ಮಳೆ ಆಗಿದೆ.

ಇನ್ನೂ ಇದೇ ವೇಳೆ ಕೋರಮಂಗಳ, ಹೆಬ್ಬಾಳ, ಯಲಹಂಕ, ಬೊಮ್ಮನಹಳ್ಳಿ, ಎಲೆಕ್ಟ್ರಾನಿಕ ಸಿಟಿ ಕಡೆಗಳಲ್ಲಿ ಆಗಾಗು ಬಿರು ಬಿಸಿಲು ಕಂಡು ಬಂದಿದೆ. ಈ ಭಾಗದಲ್ಲಿ ಬೇಸಿಗೆಯ ರೀತಿ ವಾತಾವರಣ ಕಂಡು ಬಂದರೆ, ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಮಳೆಗಾಲ ಎಂಬಂತಹ ವಾತಾವರಣ ಕಂಡು ಬಂದಿದೆ.
ಮುಂದಿನ 05 ದಿನ ಮಳೆ ಸಂಭವ
ಸದ್ಯ ಬೆಂಗಳೂರಿನಲ್ಲಿ ಮುಂದಿನ ಜೂನ್ 21ರ ವರೆಗೆ ಭಾರೀ ಮಳೆ ಆಗುವ ನಿರೀಕ್ಷೆ ಇವೆ. ಇಂದಿನಿಂದ ಐದು ದಿನ ಬೆಂಗಳೂರಿನಲ್ಲಿ ಆಗಾಗ ಲಘು ಮಳೆ ಆದರೆ ಮತ್ತೆ ಕೆಲವೆಡೆ ಹಗುರದಿಂದ ವ್ಯಾಪಕ ಮಳೆ ಆಗಬಹದು ಎಂದು ಹೇಳಲಾಗುತ್ತಿದೆ.
ಈ ವೇಳೆ ನಗರದಲ್ಲಿ ತಾಪಮಾನ ಪ್ರಮಾಣ ಈಗಿರುವ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಆಗಲಿದೆ 28-29 ಡಿಗ್ರಿ ಸೆಲ್ಸಿಯಸ್ ನಷ್ಟು ಕಂಡು ಬರುವ ನಿರೀಕ್ಷೆ ಇದೆ. ಇನ್ನೂ ನಗರಕ್ಕೆ ಭಾರೀ ಮಳೆಯ ಮುನ್ಸೂಚನೆ, ಗಂಭೀರ ಸ್ವರೂಪದ ಹವಾಮಾನ ಬದಲಾವಣೆಗಳು ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮಾಹಿತಿ ನೀಡಿದೆ.

ಕರಾವಳಿ ಕರ್ನಾಟಕಕ್ಕೆ ಅತ್ಯಧಿಕ ಮಳೆ ಮುನ್ಸೂಚನೆ
ಕರ್ನಾಟಕದ ಹವಾಮಾನ ನೋಡುವುದಾದರೆ, ನಾಳೆ ಒಂದು ದಿನ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಉಳಿದಂತೆ ಮೂರು ದಿನ ಕರಾವಳಿ ಭಾಗ ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ ಸಾಮಾನ್ಯ ಮಳೆ ಆಗಲಿದೆ. ಒಂದರೆ ಕಡೆಗಳಲ್ಲಿ ವ್ಯಾಪಕ ಮಳೆ ಬರಬಹುದು ಎಂದು ಹೇಳಲಾಗುತ್ತಿದೆ.
ರಾಜ್ಯದಲ್ಲಿ ನೆನ್ನೆ ಉ.ಕನ್ನಡದಲ್ಲಿ ಅಧಿಕ ಮಳೆ
ಇನ್ನೂ ಕಳೆದ 24 ಗಂಟೆಗಳಲ್ಲಿ ಕರಾವಳಿ ಭಾಗದಲ್ಲಿ ಜೋರು ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ. ಇಲ್ಲಿನ ಕುಮಟಾದಲ್ಲಿ ಬೋರೊಬ್ಬರಿ 09 ಸೆಂಟಿ ಮೀಟರ್ ಮಳೆ ಆಗಿದೆ. ಉಳಿದಂತೆ ಗೆರಸೊಪ್ಪದಲ್ಲಿ, ಗೋಕರ್ಣ, ಅಂಕೋಲಾದಲ್ಲಿ ತಲಾ 05 ಸೆಂಟಿ ಮೀಟರ್ ಮಳೆ ಆಗಿದೆ. ಗದಗ ಜಿಲ್ಲೆಯಲ್ಲಿ ಸಹ 05 ಸೆಂಟಿ ಮೀಟರ್ ಮಳೆ ಆಗಿದೆ. ಬೆಳಗಾವಿ, ಕೊಡಗು ಜಿಲ್ಲೆಗಳ ವ್ಯಾಪ್ತಿಯಲ್ಲಿ ಸಾಧಾರಣ ಮಳೆ ಬಿದ್ದಿದೆ ಎಂದು ಐಎಂಡಿ ಇಂದಿನ ವರದಿ ತಿಳಿಸಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications