ಬೆಂಗಳೂರು ಮಹಿಳೆಗೆ ಬರೋಬ್ಬರಿ ₹15 ಲಕ್ಷ ವಂಚಿಸಿದ ಆನ್‌ಲೈನ್ ವಂಚಕರು
ವಂಚನೆಗಳು ನಡೆಯುತ್ತವೆ. ಎಂಥಹವರನ್ನೂ ನಂಬಿಸಿ ಲಕ್ಷ ಲಕ್ಷ ವಂಚಿಸಿರುವ ಅನೇಕ ಘಟನೆಗಳನ್ನು ನಾವು ನೋಡಬಹುದು. ಈಗ ಬೆಂಗಳೂರು ಮಹಿಳೆಗೆ ಇದೇ ರೀತಿ ಆನ್‌ಲೈನ್ ವಂಚಕರು ಬರೋಬ್ಬರಿ ₹15 ಲಕ್ಷ ವಂಚಿಸಿದ್ದಾರೆ.
ಅದು ವೃತ್ತಿಯಲ್ಲಿ ವಕೀಲರಾಗಿರುವ ಮಹಿಳೆಯರರಿಗೆ ಸೈಬರ್ ವಂಚಕರು ಸಿಬಿಐ ಅಧಿಕಾರಿಗಳ ಹೆಸರಿನಲ್ಲಿ ಹಣ ಸುಲಿಗೆ ಮಾಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಸಂತ್ರಸ್ತೆ ಮಹಿಳೆಯನ್ನು ವೆಬ್ ಕ್ಯಾಮೆರಾ ಮುಂದೆ ಬಟ್ಟೆ ಬಿಚ್ಚುವಂತೆ ಕೇಳಿದ್ದು, ಬಳಿಕ ಹಣವನ್ನು ವಂಚಿಸಿದ್ದಾರೆ.

ಘಟನೆಯ ವಿವರ
ಮಹಿಳೆಗೆ ಏಪ್ರಿಲ್ 3 ರಂದು ಮುಂಬೈ ಪೊಲೀಸ್ ಇಲಾಖೆಯ ಸಿಬ್ಬಂದಿ ಎಂದು ಹೇಳಿಕೊಳ್ಳುವ ವ್ಯಕ್ತಿಯಿಂದ ಕರೆ ಬಂದಿತ್ತು ಮತ್ತು ಆಕೆಯ ಹೆಸರಿನಲ್ಲಿ ಥಾಯ್ಲೆಂಡ್‌ನಿಂದ ಫೆಡೆಕ್ಸ್ ಮೂಲಕ 140 ಗ್ರಾಂ ಮಾದಕ ದ್ರವ್ಯಗಳು ಬಂದಿವೆ ಎಂದು ಹೇಳಿದ್ದಾರೆ.
ಬಳಿಕ ಆತ ಅನ್ನು ಮತ್ತೊಬ್ಬ ವ್ಯಕ್ತಿಗೆ ಕರೆಯನ್ನು ಹಸ್ತಾಂತರಿಸಿದರು, ಅವರು ಕೇಂದ್ರೀಯ ತನಿಖಾ ದಳದಲ್ಲಿ (ಸಿಬಿಐ) ತಾನು ಉನ್ನತ ಅಧಿಕಾರಿ ಎಂದು ಹೇಳಿಕೊಂಡರು ಮತ್ತು ಆಕೆಯ ವಿರುದ್ಧ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಬೆದರಿಸಿದ್ದಾರೆ.
ಬಳಿಕ ಪ್ರಕರಣದಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳು ಶಾಮೀಲಾಗಿರುವುದರಿಂದ ಯಾರಿಗೂ ತಿಳಿಸದಂತೆ ಆಕೆಯಿಂದ ಪ್ರಮಾಣ ಮಾಡಿಸಿ, ಪ್ರಕರಣಗಳಿಂದ ಹೊರಬರಲು ತಾವು ಹೇಳಿದಂತೆ ಕೇಳಬೇಕು ಎಂದು ಸೂಚಿಸಿದ್ದಾರೆ. ನಂತರ ಅವಳ ವೆಬ್‌ಕ್ಯಾಮ್ ಅನ್ನು ಆನ್ ಮಾಡಲು ಮತ್ತು ಸ್ಕ್ರೀನ್ ಶೇರ್ ಮಾಡುವಂತೆ ಕೇಳಲಾಯಿತು.
ಮಹಿಳೆಯು ಸುಮಾರು 36 ಗಂಟೆಗಳ ಕಾಲ ವಂಚಕರ ಜೊತೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ ಮತ್ತು ಅವರು 'ನಾರ್ಕೋಟಿಕ್ ಟೆಸ್ಟ್' ಹೆಸರಿನಲ್ಲಿ ಕ್ಯಾಮ್‌ನ ಮುಂದೆ ಬಟ್ಟೆ ಕೂಡ ಬಿಚ್ಚಿದ್ದಾರೆ. ಬಳಿಕ ಆಕೆಯ ಹಿಂದಿನ ವಹಿವಾಟುಗಳನ್ನು ಪರಿಶೀಲಿಸಲು ₹ 10.7 ಲಕ್ಷವನ್ನು ವರ್ಗಾಯಿಸಲು ಕೇಳಲಾಯಿತು, ಅವರು ತನ್ನ ಕ್ರೆಡಿಟ್ ಕಾರ್ಡ್ ಬಳಸಿ ಇನ್ನೂ ₹ 4 ಲಕ್ಷ ಕಳುಹಿಸಿದ್ದಾರೆ.
ಆಕೆ ಎಲ್ಲ ವಹಿವಾಟು ನಡೆಸಿದ ಬಳಿಕ ವಂಚಕರು ₹10 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದು, ಹಣ ಕೊಡದೇ ಇದ್ದರೆ ಆಕೆಯ ವಿಡಿಯೋಗಳನ್ನು ಡಾರ್ಕ್ ವೆಬ್‌ನಲ್ಲಿ ಮಾರಾಟ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ ಎಚ್ಚೆತ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಸುಲಿಗೆ, ವಂಚನೆ, ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಯಾವುದೇ ವ್ಯಕ್ತಿಗಳು ಕರೆ ಮಾಡಿ ಯಾವುದೇ ರೀತಿಯ ಬೆದರಿಕೆ ಹಾಕಿದರೂ ತಕ್ಷಣ ಪೊಲೀಸ್ ಇಲಾಖೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications