ಬೆಲೆ ಏರಿಕೆ ವಿರುದ್ಧ ಕಿಡಿಕಾರಿದ ಬೆಂಗಳೂರು ಮಹಿಳಾ ಕಾಂಗ್ರೆಸ್

ಬೆಂಗಳೂರು, ಜನವರಿ 7: ದಿನಬಳಕೆ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಈರುಳ್ಳಿ ದರ ಏರಿಕೆ ಖಂಡಿಸಿ ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದವರು ಮಂಗಳವಾರ ಮಲ್ಲೇಶ್ವರದ ಕುವೆಂಪು ಪ್ರತಿಮೆ ಬಳಿ ಪ್ರತಿಭಟನೆ ಮಾಡಿದರು.

"ಪ್ರಧಾನಿ ನರೇಂದ್ರಮೋದಿ ಸರ್ವಾಧಿಕಾರಿ ಧೋರಣೆಯಿಂದ ದೇಶಕ್ಕೆ ಸಂಕಷ್ಟದ ಪರಿಸ್ಥಿತಿ ಬಂದಿದೆ. ನೋಟು ಅಮ್ಯಾನೀಕರಣ, ಅವೈಜ್ಞಾನಿಕ ಜಿ.ಎಸ್.ಟಿ ಮತ್ತು ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಸಿಗುತ್ತಿಲ್ಲ. ರೈತರ ಸಂಕಷ್ಟಗಳನ್ನು ಕೇಳುವವರು ಇಲ್ಲದಂತಾಗಿದೆ. ಸಿ.ಎ.ಎ.ಮತ್ತು ಎನ್.ಆರ್.ಸಿ.ಕಾನೂನು ಗೊಂದಲದಲ್ಲಿ ಇದ್ದು, ದೇಶದ ಜನರು ಭಯದ ವಾತವರಣದಲ್ಲಿ ಇದ್ದಾರೆ' ಎಂದು ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ವಿಮಲ ವೆಂಕಟ್ ಆರೋಪಿಸಿದರು.

ಕರ್ನಾಟಕ ರಾಜ್ಯದಲ್ಲಿ 18ಕ್ಕೂ ಜಿಲ್ಲೆ ಮಳೆ ಪ್ರವಾಹದಿಂದ ಲಕ್ಷಾಂತರ ಜನ ಬೀದಿ ಪಾಲಾಗಿದ್ದಾರೆ. ಕೋಟ್ಯಾಂತರ ರೂಪಾಯಿ ರೈತನಿಗೆ ಬೆಳೆ ಹಾನಿಯಾದರೂ ಬಿ.ಜೆ.ಪಿ.ಕೇಂದ್ರ ಸರ್ಕಾರ ಹೆಚ್ಚು ಪರಿಹಾರ ನಿಧಿ ಕೊಡುವಲ್ಲಿ ವಿಫಲವಾಗಿದೆ .ಭಾರತದ ಆರ್ಥಿಕ ಪರಿಸ್ಥಿತಿ ಕುಸಿತ ಕಂಡಿದೆ ಉದ್ಯೋಗ ಸೃಷ್ಟಿ ಗಗನಕುಸಮವಾಗಿದೆ. ಯುವಕರು ಕಂಗಾಲಾಗಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

Bengaluru Women Congress Unit Protest

ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ವಿಮಲ ವೆಂಕಟ್, ಮಹಿಳಾ ಕಾಂಗ್ರೆಸ್ ಮುಖಂಡರಾದ ಉಮಾಬಾಯಿ, ಆಶಾ ರಾಜು, ಮಹಿಳಾ ಬ್ಲಾಕ್ ಅಧ್ಯಕ್ಷರುಗಳಾದ ಪಾರ್ವತಿ, ಸುಶೀಲ ಮತ್ತು ಆನಿತಾ, ಭವ್ಯ, ಚಂದ್ರಮ್ಮ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+