Bengaluru 2nd Airport: ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾವನೆ ಸಲ್ಲಿಕೆ ಅಪ್ಡೇಟ್

Bengaluru 2nd Airport: ಈಗಾಗಲೇ ಬೆಂಗಳೂರಿನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೆ. ಇದು ಎರಡು ಟರ್ಮಿನಲ್‌ಗಳನ್ನು ಒಳಗೊಂಡಿದೆ. ಆದರೂ ಪ್ರಯಾಣಿಕರ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದ್ದು, ಈ ಹಿನ್ನೆಲೆ ನಗರದ ಸಮೀಪ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲು ಸ್ಥಳ ಗುರುತು ಕೆಲಸ ಜೋರಾಗಿ ನಡೆಯುತ್ತಿದೆ. ಇದರ ನಡುವೆಯೇ ಈ ಬಗ್ಗೆ ಮಹತ್ಚದ ಅಪ್ಡೇಟ್‌ವೊಂದು ಹೊರಬಿದ್ದಿದೆ. ಇಲ್ಲಿದೆ ನೋಡಿ ಮಾಹಿತಿ.

ಇದೀಗ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ ವಿಶ್ವದ ಅತ್ಯಂತ ಸುಂದರ ಟರ್ಮಿನಲ್‌ ಎಂದು ಪ್ರಸಿದ್ಧಿ ಪಡೆದಿದೆ. ಇಲ್ಲಿಯೂ ಕೂಡ ಪ್ರಯಾಣಿಕರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಲೇ ಇದೆ. ಈ ಹಿನ್ನೆಲೆ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ.

Bengaluru s 2nd International Airport Construction Proposal Update

ಬೆಂಗಳೂರಿನ ದಕ್ಷಿಣ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಆಗುವುದು ಬಹುತೇಕ ಖಚಿತ ಆಗಿದ್ದು, 2033ರ ವೇಳೆಗೆ 3 ವಿಮಾನ ನಿಲ್ದಾಣಗಳು ಕಾರ್ಯಾಚರಣೆ ಮಾಡುವ ಸಾಧ್ಯತೆಯಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಆಗುತ್ತಲೇ ಇದೆ. ಈ ಹಿನ್ನೆಲೆ ಪ್ರಯಾಣಿಕೆ ದಟ್ಟಣೆ ನಿಯಂತ್ರಿಸಲು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ.

ಜೊತೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲೂ ಪ್ರಯಾಣಿಕರ ಸಂಚಾರ ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ. 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಬಗ್ಗೆ ಜನವರಿ ಮೊದಲ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ತನ್ನ ಪ್ರಸ್ತಾವನೆ ಸಲ್ಲಿಸಲಿ ಅಂತಲೂ ತಿಳಿದುಬಂದಿದೆ. ಈಗಾಗಲೇ ವಿಮಾನ ನಿಲ್ದಾಣದ ನಿರ್ಮಾಣಕ್ಕೆ 4 ಸ್ಥಳಗಳನ್ನು ಗುರುತಿಸಲಾಗಿದೆ. ಆದರೂ ಬೆಂಗಳೂರಿನ ದಕ್ಷಿಣ ಭಾಗದಲ್ಲಿಯೇ ವಿಮಾನ ನಿಲ್ದಾಣ ನಿರ್ಮಾಣವಾಗುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ.

ಆದರೆ ಯಾವ ಜಾಗ ಎಂಬುದನ್ನು ಅಧಿವೇಶನ ಮುಗಿಯುತ್ತಿದ್ದಂತೆಯೇ ಅಧಿಕೃತವಾಗಿಯೇ ಘೋಷಣೆ ಮಾಡಲಾಗುತ್ತದೆ. ವಿಮಾನ ನಿಲ್ದಾಣದಲ್ಲಿ ಕಾರ್ಯಾಚರಣೆಗೆ ಸಂಬಂಧಿಸಿದಂತಹ ಡೆಕ್ಕನ್‌ ಏವಿಯೇಷನ್‌ ಸೇರಿ ಬೇರೆ ಬೇರೆ ಸಂಸ್ಥೆಗಳ ಜೊತೆಗೂ ಚರ್ಚೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕನಕಪುರ, ಬಿಡದಿ, ದಾಬಸ್‌ಪೇಟೆ-ಕುಣಿಗಲ್‌ ಸಮೀಪ, ನೆಲಮಂಗಲ ಹಾಗೂ ಹಾರೋಹಳ್ಳಿ ಬಳಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಅಂತಿಮವಾಗಿ ಕನಕಪುರ ಅಥವಾ ಮೈಸೂರು ರಸ್ತೆಯಲ್ಲಿ 2ನೇ ವಿಮಾನ ನಿಲ್ದಾಣ ಸ್ಥಾಪನೆಯಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದಕ್ಷಿಣ ಭಾಗದಲ್ಲೇ ಯಾಕೆ ನಿರ್ಮಾಣ?: ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವ ದಕ್ಷಿಣ ಭಾಗದಲ್ಲಿ ನಿರ್ಮಾಣ ಆದರೆ ರಾಜ್ಯದಲ್ಲಿ ಉದ್ಯಮಗಳ ಅಭಿವೃದ್ಧಿಗೆ ಅನುಕೂಲ ಆಗಲಿದೆ. ಅಲ್ಲದೆ, ತಮಿಳುನಾಡಿನ ಹೊಸೂರಿಗೆ ಪೈಪೋಟಿ ನೀಡಲು ಅನುಕೂಲ ಆಗಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಾಜಧಾನಿಯ ದಕ್ಷಿಣ ಭಾಗದಲ್ಲಿಯೇ ನಿರ್ಮಾಣವಾಗುವ ಸಾಧ್ಯತೆಯಿದೆ ಹೆಚ್ಚಿದೆ ಎನ್ನಲಾಗುತ್ತಿದೆ. ಪ್ರಯಾಣಿಕರು ಯಾವ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ನಿಲ್ದಾಣ ಬಳಕೆ ಮಾಡಲಿದ್ದಾರೆ ಎಂಬುದನ್ನು ಗಮನಿಸಿದರೆ, ಎಲೆಕ್ಟ್ರಾನಿಕ್‌ ಸಿಟಿ ಸೇರಿ ದಕ್ಷಿಣ ಭಾಗದಲ್ಲಿಯೇ ಐಟಿ, ಬಿಟಿ ಕಂಪನಿಗಳು ಹೆಚ್ಚಿನ ಪ್ರಮಾಣದಲ್ಲಿ ಇವೆ. ಆದ್ದರಿಂದ ಈ ಭಾಗದ ಸೂಕ್ತ ಎನ್ನುವ ಮಾತುಗಳು ಜೋರಾಗಿ ಕೇಳಿಬರುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+