Bengaluru Traffic:ವಾಹನ ಸವಾರರೇ ಗಮನಿಸಿ ಈ ಪ್ರಮುಖ ರಸ್ತೆಯಲ್ಲಿ ಒಂದು ವರ್ಷ ವಾಹನ ಸಂಚಾರ ನಿಷೇಧ

ಬೆಂಗಳೂರಿನ ವಾಹನ ಸವಾರರೇ ನೀವೇನಾದ್ರು ನಗರದಲ್ಲೆಡೆ ಸುತ್ತಾಡುತ್ತಿದ್ದರೆ, ಅಥವಾ ಬನ್ನೇರುಘಟ್ಟ ರಸ್ತೆಯನ್ನು ಹೆಚ್ಚಾಗಿ ಬಳಸುತ್ತಿದ್ದರೆ ಏಪ್ರಿಲ್ 1 ರಿಂದ ನಿಮ್ಮ ಸಂಚಾರ ಮಾರ್ಗ ಬದಲಾವಣೆಯಾಗಲಿದೆ. ಬನ್ನೇರುಘಟ್ಟ ರಸ್ತೆಯಲ್ಲಿ ಮೈಕೋ (MICO) ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಒಂದು ವರ್ಷಗಳ ಕಾಲ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

ನಮ್ಮ ಮೆಟ್ರೋ ಕಾಮಗಾರಿ ಭರದಿಂದ ನಡೆಯುತ್ತಿರುವ ಕಾರಣ, ಈ ರಸ್ತೆಯಲ್ಲಿ ಒಂದು ವರ್ಷಗಳ ಕಾಲ ವಾಹನ ಸಂಚಾರಕ್ಕೆ ಅನುಮತಿ ಇರುವುದಿಲ್ಲ. ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ ಲಕ್ಕಸಂದ್ರ ಭೂಗತ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಪ್ರವೇಶ ಮಾರ್ಗ ನಿರ್ಮಾಣವಾಗುತ್ತಿದ್ದು, ಕಾಮಗಾರಿಯ ಅನುಕೂಲಕ್ಕಾಗಿ ರಸ್ತೆಯಲ್ಲಿ ಸಂಚಾರ ನಿಷೇಧಿಸಲಾಗಿದೆ.

Bannerghatta Road Closed for a Year from April 1 Due to Namma Metro Pink Line Construction

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮೆಟ್ರೋ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಸುಲಭವಾಗಿಸಲು ಈ ಕ್ರಮ ತೆಗೆದುಕೊಂಡಿರುವುದಾಗಿ ಹೇಳಿದೆ. ಇದರಿಂದ ಟ್ರಾಫಿಕ್ ಮೇಲೆ ಪರಿಣಾಮ ಬೀರಲಿದ್ದು, ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸುವ ಯೋಜನೆಯನ್ನು ತಪ್ಪಿಸುವಂತೆ ಕೇಳಿದೆ.

ಎಕ್ಸ್‌ನಲ್ಲಿ ಮಾಹಿತಿ ನೀಡಿದ ಬಿಎಂಆರ್ ಸಿಎಲ್

ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಎಂಆರ್ ಸಿಎಲ್ ಈ ಮಾಹಿತಿಯನ್ನು ಹಂಚಿಕೊಂಡಿದೆ. "ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ದಕ್ಷಿಣ ಭಾಗದ ಕಾಮಗಾರಿ ನಿರ್ಮಾಣಕ್ಕೆ ಅನುಕೂಲವಾಗುವಂತೆ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ರಸ್ತೆಯನ್ನು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಏಪ್ರಿಲ್ 1ರಿಂದ ಒಂದು ವರ್ಷದ ಅವಧಿಗೆ ಮುಚ್ಚಲಾಗಿದೆ." ಎಂದು ಮಾಹಿತಿ ನೀಡಿದೆ.

ಈ ಸಂಬಂಧ ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು, ಆನೆಪಾಳ್ಯ ಜಂಕ್ಷನ್‌ ಕಡೆಗೆ ಚಲಿಸಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ ಬೋಷ್‌ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ತಲುಪಿ ಎಡಕ್ಕೆ ಚಲಿಸಬೇಕು ಎಂದು ಸೂಚನೆ ನೀಡಿದೆ.

ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಡೈರಿ ಸರ್ಕಲ್‌ನಿಂದ ಶಾಂತಿನಗರದ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು ಎಂದು ಹೇಳಿದೆ.

ಪಿಂಕ್ ಲೈನ್ ಕಾಮಗಾರಿ

ಲಕ್ಕಸಂದ್ರ ಭೂಗತ ಮೆಟ್ರೋ ನಿಲ್ದಾಣವು ನಮ್ಮ ಮೆಟ್ರೋ ಯೋಜನೆಯ ಪಿಂಕ್ ಲೈನ್‌ನ ಭಾಗವಾಗಿದೆ. ಬೆಂಗಳೂರಿನ ಸಾರಿಗೆ ವ್ಯವಸ್ಥೆಯನ್ನು ಉತ್ತಮಗೊಳಿಸುವಲ್ಲಿ ನಮ್ಮ ಮೆಟ್ರೋ ಪಾತ್ರ ವಹಿಸುತ್ತದೆ. ಬಿಎಂಆರ್ ಸಿಎಲ್ ಕಾಮಗಾರಿ ವೇಗವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಕಾಮಗಾರಿ ಮುಗಿಸಲು ಕೆಲಸ ಮಾಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+