ಮಹಿಳೆಯರ ಸುರಕ್ಷತೆಗೆ ಆದ್ಯತೆ ಕೊಡಿ: ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಪೊಲೀಸರು ಮಹಿಳೆಯರಿಗೆ ರಕ್ಷಣೆ ನೀಡಬೇಕು, ತಮ್ಮ ವ್ಯಾಪ್ತಿಯಲ್ಲಿ ಸರಿಯಾಗಿ ನಿಗಾ ವಹಿಸಬೇಕು ಮತ್ತು ಅಪರಾಧ ತಡೆಗೆ ಕೆಲಸ ಮಾಡಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಸೂಚನೆ ನೀಡಿದರು.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸ್ಥಾಪಿಸಲಾದ 'ಸೇಫ್ ಸಿಟಿ ಕಮಾಂಡ್ ಸೆಂಟರ್' ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಇಂತಹ ಸೌಲಭ್ಯಗಳ ಪ್ರಯೋಜನಗಳು ಜನರಿಗೆ ತಲುಪಬೇಕು ಎಂದು ಪೊಲೀಸರಿಗೆ ಕಿವಿಮಾತು ಹೇಳಿದರು.

Bengalurus Rs 668 Crore Safe City Command Centre, Funded by Nirbhaya Fund, Inaugurated

ಬೆಂಗಳೂರಿನಲ್ಲಿ ಸರಗಳ್ಳತನ ಹಾಗೂ ಮಹಿಳೆಯರ ಮೇಲೆನ ದೌರ್ಜನ್ಯ ಹೆಚ್ಚಾಗಿದೆ ಹಾಗೂ ಕೊಲೆಗಳೂ ಕೂಡ ನಡೆಯುತ್ತಿವೆ. ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ನಿರ್ಭಯಾ ನಿಧಿಯಡಿ "ಬೆಂಗಳೂರು ಸೇಫ್ ಸಿಟಿ ಕಮಾಂಡ್ ಸೆಂಟರ್" ಕಟ್ಟಡ ನಿರ್ಮಾಣವಾಗಿದೆ, 668 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಕೇಂದ್ರವನ್ನು ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಇಂಥ ಸೌಲಭ್ಯಗಳು ಜನರಿಗೆ ತಲುಪಿದಾಗ, ಉಪಯೋಗಕ್ಕೆ ಬಂದಾಗ ಮಾತ್ರ ಸಾರ್ಥಕವಾಗುತ್ತದೆ. ರೂ.668 ಕೋಟಿ ವೆಚ್ಚದಲ್ಲಿ ಕಮಾಂಡ್ ಸೆಂಟರ್ ನಿರ್ಮಾಣವಾಗಿದೆ. ನಿರೀಕ್ಷಿತ ಫಲ ಸಿಕ್ಕದೇ ಹೋದರೆ ಕಷ್ಟ ಎಂದರು.

ಮಹಿಳೆಯರ ಸುರಕ್ಷತೆ ಗಮನಹರಿಸಿ!

ಬೆಂಗಳೂರು ನಗರವು ಎಲ್ಲರಿಗೂ ಸುರಕ್ಷಿತವಾಗಿದೆ ಎಂದು ಖಚಿತಪಡಿಸಿಕೊಳ್ಳಲು ವೈಯಕ್ತಿಕ ಮನೆಗಳ ಮೇಲೆ ಮತ್ತು ಒಂಟಿ ಮಹಿಳೆಯರು ವಾಸಿಸುವ ನಿವಾಸಗಳ ಮೇಲೆ ಪೊಲೀಸರು ನಿಗಾ ಇಡಬೇಕು ಎಂದು ಸಿದ್ದರಾಮಯ್ಯ ಪೊಲೀಸರಿಗೆ ಸೂಚನೆ ನೀಡಿದರು.

Bengalurus Rs 668 Crore Safe City Command Centre, Funded by Nirbhaya Fund, Inaugurated

ನಗರದಲ್ಲಿ ಸಂಚಾರ ಸುಗಮಗೊಳಿಸಲು ಪೊಲೀಸರು ಗಮನಹರಿಸಬೇಕು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಆಯಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚಿಸಿದರು.

ಅಪರಾಧವಾದ ನಂತರ ಶಿಕ್ಷೆ ಕೊಡುವುದು ಒಂದು ಭಾಗ. ಆದರೆ ಅಪರಾಧಗಳು ನಡೆಯದ ರೀತಿ ತಡೆಯಬೇಕು. ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಬೇಕು. ಪೋಲಿಸರು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಬೆಂಗಳೂರು ನಗರದಲ್ಲಿ ಮೊದಲ ಬಾರಿ ಕಮಾಂಡ್ ಸೆಂಟರ್ ಸ್ತಾಪನೆಯಾಗಿದ್ದು, ಅವಶ್ಯಕತೆ ಇರುವವರಿಗೆ ಇದರ ಪ್ರಯೋಜನ ದೊರಕಲಿ ಎಂದರು.

ಪೊಲೀಸರು ಮಹಿಳೆಯರಿಗೆ ರಕ್ಷಣೆ ನೀಡಬೇಕು ಮತ್ತು ಅವರ ವ್ಯಾಪ್ತಿಯಲ್ಲಿ ಬಿಗಿ ನಿಗಾ ಇರಿಸಬೇಕು ಎಂದು ಹೇಳಿದರು. 'ಬೆಂಗಳೂರು ಸುರಕ್ಷಿತ ನಗರವಾಗಬೇಕು' ಎಂದು ಹೇಳಿದರು.

Bengalurus Rs 668 Crore Safe City Command Centre, Funded by Nirbhaya Fund, Inaugurated

ಅತ್ಯಾಧುನಿಕ ಉಪಕರಣಗಳನ್ನು ಕೇಂದ್ರದಲ್ಲಿ ಅಳವಡಿಸಲಾಗಿದ್ದು ಇವೆಲ್ಲವೂ ಉಪಯೋಗವಾಗಬೇಕು . ಹಾಗಾದಾರೆ ಕಮಾಂಡ್ ಸೆಂಟರ್ ನಿಂದ ಬೆಂಗಳೂರು ನಿಜವಾಗಿಯೂ ಸುರಕ್ಷಿತ ನಗರವೆನಿಸುತ್ತದೆ. ಪೊಲೀಸರಿಗೂ ಉತ್ತಮ ಹೆಸರು ಬರಲಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+