ಬೆಂಗಳೂರಲ್ಲಿ 50 ವರ್ಷಗಳಿಂದ ಬೀದಿ ನಾಯಿ ಸಮಸ್ಯೆ ಇದೆ: ಈಗ 3.33 ಲಕ್ಷ ಬೀದಿ ನಾಯಿಗಳಿವೆ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರಿನಲ್ಲಿ ಬೀದಿ ನಾಯಿಗಳ ಸಮಸ್ಯೆ ಪರಿಹಾರಕ್ಕೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಮಾಸ್ಟರ್ ಪ್ಲ್ಯಾನ್ ರೂಪಿಸುವುದಕ್ಕೆ ಮುಂದಾಗಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಶೇ.100 ಎಬಿಸಿ(Animal Birth Control) ಕಾರ್ಯ ಪೂರ್ಣಗೊಳಿಸಲು ಸಮಗ್ರ ಕಾರ್ಯಸೂಚಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಪಶುಸಂಗೋಪನೆ ಹಾಗೂ ನಗರ ಸಸಿ ನೆಡುವುದಕ್ಕೆ ಸಂಬಂಧಿಸಿದಂತೆ ಜೂನ್ 30ರ ಮಂಗಳವಾರ ನಡೆದ ಸಭೆಯ ಬಳಿಕ ಅವರು ಮಾತನಾಡಿದರು. ನಗರದಲ್ಲಿ ಬೀದಿ ನಾಯಿಗಳ ಸಮಸ್ಯೆಯನ್ನು ಕಳೆದ 50 ವರ್ಷಗಳಿಂದ ಪರಿಹರಿಸಲು ಹಲವು ಪ್ರಯತ್ನಗಳು ನಡೆದಿದ್ದರೂ, ಸಮಸ್ಯೆ ನಿರೀಕ್ಷಿತ ಮಟ್ಟದಲ್ಲಿ ನಿಯಂತ್ರಣಕ್ಕೆ ಬಂದಿಲ್ಲ. ನಾಗರಿಕರ ಆತಂಕ ಮತ್ತು ಅಭಿಪ್ರಾಯಗಳಿಗೆ ಸರ್ಕಾರವೂ ಸ್ಪಂದಿಸುತ್ತಿದ್ದು, ಪರಿಣಾಮಕಾರಿ ಪರಿಹಾರ ಕಂಡುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.

Stray Dog

ಬೆಂಗಳೂರು ನಗರದಲ್ಲಿ 2000ನೇ ಸಾಲಿನಿಂದಲೇ ಎಬಿಸಿ ಕಾರ್ಯ ಆರಂಭವಾಗಿದೆ. 2007ರಲ್ಲಿ ಬಿಬಿಎಂಪಿ ರಚನೆಯಾದ ಬಳಿಕ ಇದುವರೆಗೆ ಸುಮಾರು 8.80 ಲಕ್ಷ ನಾಯಿಗಳಿಗೆ ಎಬಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 2019ರ ಸಮೀಕ್ಷೆ ಪ್ರಕಾರ ನಗರದಲ್ಲಿ 3.10 ಲಕ್ಷ ಹಾಗೂ 2023ರ ಅಂದಾಜು ಪ್ರಕಾರ 2.79 ಲಕ್ಷ ಬೀದಿ ನಾಯಿಗಳಿವೆ. 2016ರಿಂದ 2023ರವರೆಗೆ 3.33 ಲಕ್ಷ ನಾಯಿಗಳಿಗೆ ಎಬಿಸಿ ಚಿಕಿತ್ಸೆ ನೀಡಲಾಗಿದೆ. ಆದರೂ, ಬೀದಿ ನಾಯಿಗಳ ಸಂಖ್ಯೆಯಲ್ಲಿ ನಿರೀಕ್ಷಿತ ಇಳಿಕೆ ಕಂಡುಬಂದಿಲ್ಲ. ಇದೇ ರೀತಿಯಲ್ಲಿ ಮುಂದುವರಿದರೆ ಇನ್ನೂ ಹಲವು ವರ್ಷಗಳಾದರೂ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗುವುದಿಲ್ಲ. ಆದ್ದರಿಂದ ಕಟ್ಟುನಿಟ್ಟಿನ ಕಾರ್ಯತಂತ್ರ ರೂಪಿಸಿ ಸಮಸ್ಯೆಯನ್ನು ನಿಯಂತ್ರಣಕ್ಕೆ ತರಲು ಸೂಚಿಸಲಾಗಿದೆ ಎಂದರು.

ಕಳೆದ ಐದು ವರ್ಷಗಳಲ್ಲಿ ಎಬಿಸಿ ಶಸ್ತ್ರಚಿಕಿತ್ಸೆಗಾಗಿ ಸುಮಾರು 42 ಕೋಟಿ ರೂ. ವೆಚ್ಚ ಮಾಡಲಾಗಿದೆ. ಸಾರ್ವಜನಿಕರ ತೆರಿಗೆ ಹಣವನ್ನು ವ್ಯಯಿಸುತ್ತಿದ್ದರೂ ನಿರೀಕ್ಷಿತ ಫಲಿತಾಂಶ ದೊರೆತಿಲ್ಲ. ಬೀದಿ ನಾಯಿಗಳಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ವರ್ಷಕ್ಕೆ 90 ಸಾವಿರ ನಾಯಿಗಳಿಗೆ ಎಬಿಸಿ ಮಾಡಿ: ಇನ್ನು ಬೆಂಗಳೂರಿನಲ್ಲಿ ಪ್ರಸ್ತುತ ವರ್ಷಕ್ಕೆ ಸುಮಾರು 45 ಸಾವಿರ ಬೀದಿ ನಾಯಿಗಳಿಗೆ ಎಬಿಸಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ. ಅಗತ್ಯ ಮೂಲಸೌಕರ್ಯ ಮತ್ತು ಸಂಪನ್ಮೂಲಗಳನ್ನು ಹೆಚ್ಚಿಸಿ ಈ ಸಾಮರ್ಥ್ಯವನ್ನು ದ್ವಿಗುಣಗೊಳಿಸಿ ವರ್ಷಕ್ಕೆ 90 ಸಾವಿರ ನಾಯಿಗಳಿಗೆ ಎಬಿಸಿ ನಡೆಸುವ ಗುರಿ ಹೊಂದಲಾಗಿದೆ. ಈ ರೀತಿಯಾಗಿ ಮೂರು ವರ್ಷಗಳ ಕಾಲ ನಿರಂತರವಾಗಿ ಕಾರ್ಯನಿರ್ವಹಿಸಿ ನಗರದಲ್ಲಿ ಶೇ.100 ಎಬಿಸಿ ಸಾಧಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಸಾಮರ್ಥ್ಯ ಹೆಚ್ಚಳಕ್ಕೆ ಸೂಚನೆ

ಎಬಿಸಿ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಸಂಸ್ಥೆಗಳನ್ನು ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ನಾಗರಿಕರಲ್ಲಿ ಜಾಗೃತಿ ಮೂಡಿಸಿ, ಆಸಕ್ತಿ ಹೊಂದಿರುವ ಸಂಸ್ಥೆಗಳು ಹಾಗೂ ಸಂಘಟನೆಗಳನ್ನು ಈ ಕಾರ್ಯದಲ್ಲಿ ಭಾಗಿಯಾಗುವಂತೆ ಪ್ರೋತ್ಸಾಹಿಸಬೇಕು. ಬೆಂಗಳೂರು ನಗರದಲ್ಲಿನ ಸಂಸ್ಥೆಗಳ ಜೊತೆಗೆ ಇತರೆ ನಗರಗಳ ಸಂಸ್ಥೆಗಳಿಗೂ ಅವಕಾಶ ಕಲ್ಪಿಸಿ ಕಾರ್ಯಸಾಮರ್ಥ್ಯ ಹೆಚ್ಚಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ನೇಮಕ

ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರ ಜೊತೆಗೆ ಹೊರಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ ವೈದ್ಯರನ್ನು ನೇಮಕ ಮಾಡಿಕೊಂಡು ಎಬಿಸಿ ಶಸ್ತ್ರಚಿಕಿತ್ಸೆಯ ಪ್ರಮಾಣವನ್ನು ಹೆಚ್ಚಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಸಿ ನೆಡುವ ಯೋಜನೆ

ಪ್ರಸಕ್ತ ಸಾಲಿನಲ್ಲಿ 64,130 ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ಸಾರ್ವಜನಿಕರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಸಹಭಾಗಿತ್ವದಲ್ಲಿ ಸಸಿ ನೆಟ್ಟು ಅವುಗಳ ಪೋಷಣೆಗೆ ಆದ್ಯತೆ ನೀಡಬೇಕು. ಈ ಸಂಬಂಧ ಪ್ರತಿಯೊಂದು ಪಾಲಿಕೆಯೂ ಸಮಗ್ರ ಯೋಜನೆ ರೂಪಿಸಿ ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

2008ರಿಂದ ಇದುವರೆಗೆ ಸುಮಾರು 20 ಲಕ್ಷ ಸಸಿಗಳನ್ನು ನೆಟ್ಟಿರುವುದಾಗಿ ದಾಖಲೆಗಳಿವೆ. ಆದರೆ ಮರಗಳ ಗಣತಿ ಪ್ರಕಾರ ಶೇ.85ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಸುಮಾರು 11 ಲಕ್ಷ ಮರಗಳು ಮಾತ್ರ ಇರುವ ಸಾಧ್ಯತೆ ಕಂಡುಬಂದಿದೆ. ಉಳಿದ ಸಸಿಗಳ ಕುರಿತು ಸ್ಪಷ್ಟ ಮಾಹಿತಿ ಲಭ್ಯವಿಲ್ಲ. ಪ್ರತಿಯೊಂದು ಸಸಿ ನೆಡುವ ಕಾರ್ಯಕ್ಕೂ ಸಂಪೂರ್ಣ ಉತ್ತರದಾಯಿತ್ವ ಮತ್ತು ದಾಖಲೆ ನಿರ್ವಹಣೆ ಕಡ್ಡಾಯವಾಗಬೇಕು ಎಂದಿದ್ದಾರೆ.

ಒಂದು ಸಸಿ ನೆಡಲು ಸುಮಾರು 2,300 ರೂ. ವೆಚ್ಚ

ಒಂದು ಸಸಿ ನೆಡುವ ಪ್ರಕ್ರಿಯೆಯಲ್ಲಿ ಗುಂಡಿ ತೋಡುವುದು, ಮುಚ್ಚುವುದು, ಸಸಿ ಖರೀದಿ, ರಕ್ಷಣಾ ಕವಚ ಅಳವಡಿಕೆ, ಕಡ್ಡಿ ಅಳವಡಿಕೆ, ನೀರುಣಿಸುವುದು, ಕಾವಲು, ಮೂರು ವರ್ಷಗಳ ನಿರ್ವಹಣೆ ಹಾಗೂ ಇತರೆ ವೆಚ್ಚಗಳನ್ನು ಸೇರಿ ಸುಮಾರು 2,300 ರೂ. ವ್ಯಯವಾಗುತ್ತದೆ. ಬದಲಿ ಸಸಿ ನೆಡುವ ಕಡ್ಡಾಯ ಅರಣ್ಯೀಕರಣ ಯೋಜನೆಯಲ್ಲಿ ಪ್ರತಿ ಸಸಿಗೆ ಸುಮಾರು 3,108 ರೂ. ವೆಚ್ಚವಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+