ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ "ಬೆಂಗಳೂರು ಉತ್ಸವ"

|
Google Oneindia Kannada News

ಬೆಂಗಳೂರು, ಮೇ 1: ಗ್ರಾಂಡ್ ಫ್ಲಿಯಾ ಮಾರ್ಕೇಟ್ ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಮೇ 3 ರಿಂದ ಮೇ 12 ರ ವರೆಗೆ ದೇಶದ ಎಲ್ಲಾ ಭಾಗಗಳ ಕಲಾವಿದರ ಕಲಾಕೃತಿಗಳ ಪ್ರದರ್ಶನ ಹಾಗೂ ಮಾರಾಟ ಮೇಳ "ಬೆಂಗಳೂರು ಉತ್ಸವ" ವನ್ನು ಆಯೋಜಿಸಿದೆ.

ಬೆಂಗಳೂರು ಉತ್ಸವದ ಮೂಲಕ ನೇಕಾರರು ಮತ್ತು ಕುಶಲಕರ್ಮಿಗಳು ಉತ್ಪಾದಿಸುವ ಉತ್ಪನ್ನಗಳಿಗೆ ದೇಶದ ಮುಖ್ಯ ನಗರಗಳಲ್ಲಿ ಮಾರಾಟ ಮೇಳವನ್ನು ಆಯೋಜಿಸುವ ಮೂಲಕ ನೇರವಾಗಿ ಅವರ ಉತ್ಪನ್ನಗಳು ಗ್ರಾಹಕರಿಗೆ ತಲುಪಿಸುವಂತೆ ವ್ಯವಸ್ಥೆ ಮಾಡುವುದು ಮತ್ತು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇಕಾರರೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭವನ್ನು ಹೆಚ್ಚು ಗಳಿಸುವಂತೆ ಮಾಡುವ ಉದ್ದೇಶವನ್ನು ಈ ಮೇಳವು ಹೊಂದಿದೆ.

ಅದರಂತೆ ಬೆಂಗಳೂರಿನಲ್ಲಿ ಬೇಸಿಗೆ ರಜಾವನ್ನು ಗಮನದಲ್ಲಿಟ್ಟುಕೊಂಡು "ಬೆಂಗಳೂರು ಉತ್ಸವ-2019" ಸಮ್ಮರ್ ಶಾಪಿಂಗ್ ಕಾರ್ನಿವಲ್ ಮೇಳವನ್ನು ಮೇ 3 ರಿಂದ ಮೇ 12 ರ ವರೆಗೆ 10 ದಿವಸಗಳ ಕಾಲ ಚಿತ್ರಕಲಾ ಪರಿಷತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿಗೆ ಭೇಟಿ ನೀಡುವ ಪ್ರವಾಸಿಗರು ಹಾಗೂ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು 10 ದಿವಸಗಳ ಈ ವಿಶಿಷ್ಟ ಬೆಂಗಳೂರು ಉತ್ಸವ ಮೇಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ ಉತ್ಪಾದಕರನ್ನು ಪ್ರೋತ್ಸಾಹಿಸಬೇಕೆಂದು ಈ ಮೂಲಕ ಕೋರಲಾಗಿದೆ. ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ.

ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ

ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ

ಈ ಮೇಳದಲ್ಲಿ ಕಾಶ್ಮೀರದಿಂದ ಕಾಂಚಿಪುರಂವರೆಗಿನ ರೇಷ್ಮೆ ಸೀರೆ ಉತ್ಪಾದಕರು, ರೇಷ್ಮೆ ಸೀರೆ ವಿನ್ಯಾಸಗಾರರು ಮತ್ತು ರೇಷ್ಮೆ ಸಹಕಾರ ಸಂಘಗಳು 100 ಕ್ಕೂ ಹೆಚ್ಚಿನ ಮಳಿಗೆಗಳಲ್ಲಿ ತಮ್ಮ ರಾಜ್ಯದ ಸಾಂಪ್ರದಾಯಿಕ ರೇಷ್ಮೆ ಸೀರೆ ಮತ್ತು ಕರಕುಶಲ ಉತ್ಪನ್ನಗಳನ್ನು ಬೆಂಗಳೂರು ಜನತೆಯ ಮುಂದೆ ಪ್ರತಿದಿನ ಬೆಳಿಗ್ಗೆ 11 ರಿಂದ ರಾತ್ರಿ 7.30 ರವರೆಗೆ ಪ್ರದರ್ಶಿಸಿ ಮಾರಾಟ ಮಾಡುವರು.ಮೇಳಕ್ಕೆ ಪ್ರವೇಶವನ್ನು ಉಚಿತವಾಗಿ ಕಲ್ಪಿಸಲಾಗಿದೆ.

ಬೆಳ್ಳಿಯ ಸೂಕ್ಷ ಕೆತ್ತನೆಯ ಆಭರಣಗಳು

ಬೆಳ್ಳಿಯ ಸೂಕ್ಷ ಕೆತ್ತನೆಯ ಆಭರಣಗಳು

ಇಲ್ಲಿ ಹುಲ್ಲಿನ ಹಾಸು, ಬೆಳ್ಳಿಯ ಸೂಕ್ಷ ಕೆತ್ತನೆಯ ಆಭರಣಗಳು, ಸೆಣಬಿನ ಚಪ್ಪಲಿ, ಅಂದದ ಆಟಿಕೆಗಳು, ಜವಳಿ ಮತ್ತು ಕಚೇರಿಗೆ ಉಪಯುಕ್ತ ಸಾಮಾಗ್ರಿಗಳು ಸೇರಿದಂತೆ ಅನೇಕ ಕರಕುಶಲ ವಸ್ತುಗಳು ಲಭ್ಯವಿದೆ. ಈ ಮೇಳದ ಮುಖ್ಯ ಉದ್ದೇಶ ಸಾಂಪ್ರದಾಯಿಕ ಕಲಾಕೌಶಲ್ಯವನ್ನು ಬಳಸಿ ಆಧುನಿಕ ಜೀವನ ಶೈಲಿಗೆ ತಕ್ಕ ಉತ್ಪನ್ನಗಳನ್ನು ತಯಾರಿಸುವುದಾಗಿದೆ. ಪುರಾನಾ ಸಾಹು ಅವರ ಕಣ್ಮನಸೆಳೆಯುವ ಪುರಾತನ ಹಿತ್ತಾಳೆಯ ಕರಕುಶಲವಸ್ತುಗಳು. ಅಲ್ಲದೆ ಅವರ ಸೌರ ಚಿತ್ರಕಲಾಕೃತಿಗಳು ಇಲ್ಲಿ ಲಭ್ಯ. ಪೌರ್ಣ ಚಂದ್ರ ಮೊಹಪಾತ್ರ ಅವರ ಬೆಳ್ಳಿಯ ಆಭರಣಗಳು ಆಧುನಿಕತೆಯ ಹಿನ್ನಲೆಯಲ್ಲಿ ಪುರಾತನ ಸೊಬಗನ್ನು ಬಿಂಬಿಸಲಿವೆ. ಪೆಂಡೆಟ್‍ಗಳು, ಬಳೆಗಳು, ಹೇರ್ ಪಿನ್‍ಗಳು ಅಲ್ಲದೆ ಮುತ್ತಿನ ಆಭರಣದ ಕುಂಕುಮ ಬಾಕ್ಸ್‍ಗಳು ಇಲ್ಲಿ ಲಭ್ಯವಿವೆ.

ಪರಿಸರ ಸ್ನೇಹಿ ಕರಕುಶಲ ವಸ್ತು

ಪರಿಸರ ಸ್ನೇಹಿ ಕರಕುಶಲ ವಸ್ತು

ಪರಿಸರ ಸ್ನೇಹಿ ಕರಕುಶಲ ವಸ್ತುಗಳಾದ ಮಧುಕಾಟಿ ಗ್ರಾಸ್ ರನ್ನರ್ಸ್, ಟೇಬಲ್ ಮತ್ತು ನೆಲದ ಮೇಲೆ ಹಾಸುವಂತಹ ಮ್ಯಾಟ್‍ಗಳು ಹಾಗೂ ಗೋಡೆಯ ಮೇಲೆ ನೇತು ಹಾಕುವ ಮ್ಯಾಟ್‍ಗಳು ಇಲ್ಲಿ ಲಭ್ಯವಿವೆ. ಮಧುಬನಿ ಕಲಾ ಪ್ರಕಾರದ ವಸ್ತುಗಳು ಇಲ್ಲಿ ಲಭ್ಯವಿವೆ. ರಾಹುಲ್ ಸೇನ್‍ಗುಪ್ತ ಅವರ ರಚಿತ ಸೆಣಬಿನಿಂದ ತಯಾರಿಸಲ್ಪಟ್ಟ ಚಪ್ಪಲಿಗಳು ಇಲ್ಲಿ ಲಭ್ಯವಿವೆ.

ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ

ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ

ಇದಲ್ಲದೆ ಕುರ್ತಾ, ಸ್ಟೋಲ್ಸ್, ಶಾಲುಗಳು, ಸಲ್‍ವಾರ್ ಕಮೀಜ್ ಮತ್ತು ಉಡುಪಿನ ಬಟ್ಟೆಗಳು, ಕುಶನ್ ಕವರ್‍ಗಳು ಮತ್ತು ಬೆಡ್‍ಶೀಟ್‍ಗಳನ್ನು ಈ ವಸ್ತು ಪ್ರದರ್ಶನದಲ್ಲಿ ಪ್ರದರ್ಶಿಸಿ ಮಾರಾಟ ಮಾಡುವರು. ಈ ವಸ್ತುಗಳನ್ನು ಉತ್ವಾದಕರೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತಿರುವುದರಿಂದ ವಸ್ತುಗಳು ನ್ಯಾಯಯುತ ಬೆಲೆಯಲ್ಲಿ ದೊರಕುತ್ತದೆ.

English summary
The Karnataka Chitrakala Paishat on Kumara Krupa road will host Bangalore Utsav 2019 from May 03 to 16. Artisans from various parts of the country will sale their items in this events.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X