ದುಬಾರಿ 'ಬಡ್ಡಿ' ಮಕ್ಕಳ ಮೇಲೆ ಪೊಲೀಸರ ವಿಶೇಷ ಕಾರ್ಯಾಚರಣೆ
ಬೆಂಗಳೂರು, ಜೂನ್ 29: ಕಾನೂನುಬಾಹಿರವಾಗಿ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದವರ ಮೇಲೆ, ಬೆಂಗಳೂರು ಉತ್ತರ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ಆರು ಜನರನ್ನು ಬಂಧಿಸಿದ್ದಾರೆ, ಜೊತೆಗೆ ಹತ್ತು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಮಲ್ಲೇಶ್ವರಂ, ಯಶವಂತಪುರ ಮತ್ತು ಜೆ ಸಿ ನಗರದ ಎಸಿಪಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಂಧಿತರಿಂದ 13ಲಕ್ಷಕ್ಕೂ ಅಧಿಕ ಮೊತ್ತದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಅಲ್ಲದೇ, ವಿವಿಧ ಬ್ಯಾಂಕುಗಳ 145 ಖಾಲಿ ಚೆಕ್, ಸ್ಟ್ಯಾಂಪ್ ಪತ್ರ, ಆಸ್ತಿಯ ಶುದ್ದ ಕ್ರಯಪತ್ರ, ಬಾಂಡ್ ಪೇಪರ್, ಜಿಪಿಎ ಪತ್ರ, ವಾಹನ ಅಡಮಾನ ಪತ್ರ ಮತ್ತು ಇತರ ದಾಖಲಾತಿಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಈ ಕಾರ್ಯಾಚರಣೆಯ ವೇಳೆ, ಇನ್ನೂ ಹಲವರು ತಲೆಮರೆಸಿಕೊಂಡಿದ್ದು ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುಬ್ರಮಣ್ಯ ನಗರ, ಮಹಾಲಕ್ಷ್ಮೀ ಲೇಔಟ್, ನಂದಿನಿ ಲೇಔಟ್, ರಾಜಗೋಪಾಲ ನಗರ, ಆರ್ ಎಂ ಸಿ ಯಾರ್ಡ್, ಸೋಲದೇವನ ಹಳ್ಳಿ, ಬಾಗಲಕುಂಟೆ, ಜಾಲಹಳ್ಳಿ, ಪೀಣ್ಯ ಮತ್ತು ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಚಕ್ರಬಡ್ಡಿ, ಮೀಟರ್ ಬಡ್ಡಿ ದಂಧೆ ಅವ್ಯಾಹುತವಾಗಿ ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿದ್ದರಿಂದ, ಪೊಲೀಸರಿಂದ ಈ ವಿಶೇಷ ಕಾರ್ಯಾಚರಣೆ ನಡೆದಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026: ಬೆಂಗಳೂರು ಕ್ರಿಕೆಟ್ ಪ್ರೇಮಿಗಳೇ ಗಮನಿಸಿ, ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುವ ಮುನ್ನ ಈ ಹೊಸ ರೂಲ್ಸ್ ಗೊತ್ತಿರಲಿ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು?









Click it and Unblock the Notifications