ಇವಿ-ಚಾರ್ಜಿಂಗ್ ಸ್ಟೇಷನ್ ಹುಡುಕಲು ಬೆಸ್ಕಾಂನಿಂದ ಆ್ಯಪ್ ಬಿಡುಗಡೆ
ಬೆಂಗಳೂರು, ಡಿಸೆಂಬರ್ 23: ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್‌ಗಳನ್ನು ಹುಡುಕಲು ಸುಲಭವಾಗುವಂತೆ 'ಇವಿ ಮಿತ್ರ' ಎನ್ನುವ ಅಪ್ಲಿಕೇಷನ್ ಒಂದನ್ನು ಬೆಸ್ಕಾಂ ಬಿಡುಗಡೆ ಮಾಡಿದೆ.
ಬೆಸ್ಕಾಂ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಎಲೆಕ್ಟ್ರಿಕಲ್ ವಾಹನ ಚಾರ್ಜಿಂಗ್‌ಗಾಗಿ ನಗರದಲ್ಲಿ 74 ಸ್ಥಳಗಳಲ್ಲಿ 136 ಪೋರ್ಟ್ಸ್‌ಗಳನ್ನು ಹೊಂದಿದೆ. ಮೊಬೈಲ್ ಅಪ್ಲಿಕೇಷನ್ ಮೂಲಕ ಹತ್ತಿರದ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್‌ಗಳು ಎಲ್ಲಿವೆ ಎಂಬುದರ ಕುರಿತು ಮಾಹಿತಿ ಲಭ್ಯವಾಗಲಿದೆ.
ಈ ಸ್ಟೇಷನ್‌ಗಳು ಬೆಳಗ್ಗೆ 6 ರಿಂದ ರಾತ್ರಿ 10ರವರೆಗೂ ತೆರೆದಿರುತ್ತವೆ, ಆದರೆ ಎಲೆಕ್ಟ್ರಿಕ್ ವಾಹನಗಳನ್ನು ಹೊಂದಿರುವವರಿಗೆ ಈ ಮಾಹಿತಿ ಲಭ್ಯವಿಲ್ಲ. ಈ ಅಪ್ಲಿಕೇಷನ್ ಮೂಲಕ ವಾಹನಗಳ ಚಾರ್ಜಿಂಗ್ ಕುರಿತು ಅರಿವು ಮೂಡಿಸಲು ನೆರವಾಗುತ್ತದೆ. ಸ್ಟೇಷನ್‌ಗಳಲ್ಲಿ AC001 ಹಾಗೂ DC001 ಚಾರ್ಜರ್ ಮಾಡೆಲ್‌ಗಳು ಲಭ್ಯವಿದೆ.

ಇವಿ ಮಿತ್ರ ಅಪ್ಲಿಕೇಷನ್ ಆಂಡ್ರಾಯ್ಡ್ ಹಾಗೂ ಐಒಎಸ್ ಮೊಬೈಲ್‌ಗಳಲ್ಲಿ ಲಭ್ಯವಿದೆ. ಮುಂದಿನ ಕೆಲವು ತಿಂಗಳುಗಳಲ್ಲಿ ನಗರದಲ್ಲಿ 300 ಇವಿ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗುತ್ತದೆ.
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ 1 ಸಾವಿರ ರೀಚಾರ್ಜಿಂಗ್ ಸೆಂಟರ್ ತೆರೆಯುತ್ತೇವೆ. ಈ ಪೈಕಿ ಬೆಂಗಳೂರು ಒಂದರಲ್ಲೇ 500 ಸೆಂಟರ್ ತೆರೆಯುವ ಸಾಧ್ಯತೆಯಿದೆ ಎಂದು ಬೆಂಗಳೂರಲ್ಲಿ ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದರು. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಬೇಕಾಗಿದೆ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳುತ್ತಿದೆ.
ಅಪಾರ್ಟ್‌ಮೆಂಟ್, ಮಾಲ್, ಸರ್ಕಾರಿ ಕಚೇರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ, ಪ್ರವಾಸೋದ್ಯಮ ಜಾಗಗಳಲ್ಲಿ ರೀಚಾರ್ಜಿಂಗ್ ಸೆಂಟರ್ ಮಾಡಬೇಕು ಎಂದು ಆಲೋಚನೆಯಿದೆ. ಹೀಗಾಗಿ ವಾಹನಗಳನ್ನು ತಯಾರಿಸುವ ಮಾಲೀಕರ ಜತೆ ಕಾರ್ಯಾಗಾರ ಮಾಡುವ ಮೂಲಕ ಮಾತುಕತೆ ನಡೆಸಲಾಗುತ್ತಿದೆ ಎಂದು ಅವರು ವಿವರಿಸಿದರು.
ವಿದ್ಯುತ್ ಚಾಲಿತ ವಾಹನ ಇನ್ನು ಮುಂದೆ ಅನಿವಾರ್ಯ: ವಿದ್ಯುತ್ ಚಾಲಿತ ವಾಹನಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬೆಂಗಳೂರಿನಲ್ಲಿ 136 ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ 500ಕ್ಕೂ ಹೆಚ್ಚು ಸೆಂಟರ್ ನಿರ್ಮಾಣವಾಗಲಿದೆ.
ವಿದ್ಯುತ್ ಚಾಲಿತ ವಾಹನಗಳು ಭವಿಷ್ಯಕ್ಕೆ ಅನಿವಾರ್ಯವಾಗಿರುವ ಕಾರಣ ನಾವು ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಬೆಂಗಳೂರಿನಲ್ಲಿ ಇಂಧನ ಸಚಿವ ಸುನಿಲ್‌ಕುಮಾರ್ ಸೆಪ್ಟೆಂಬರ್ 9ರಂದು ಸಹ ಹೇಳಿಕೆ ನೀಡಿದ್ದರು.
Recommended Video
ವಿದ್ಯುತ್ ಚಾಲಿತ ವಾಹನಗಳಿಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಯೋಜನೆಗಳನ್ನು ರೂಪಿಸಲಿದೆ. ಈ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್ ಸೆಂಟರ್ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ. ಇದು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದ್ದಾರೆ.












Click it and Unblock the Notifications