ಆನ್‌ಲೈನ್ ಮೂಲಕ ಬೆಸ್ಕಾಂ ಬಿಲ್‌ ಪಾವತಿ: ಗ್ರಾಹಕರಿಗೆ ಮಹತ್ವದ ಮಾಹಿತಿ

ಬೆಂಗಳೂರು, ಅಕ್ಟೋಬರ್ 03: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಅಕ್ಟೋಬರ್ 4 ರಿಂದ 7ರ ತನಕ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಅಭಿವೃದ್ಧಿ ಮೇಲ್ದರ್ಜೆಗೇರಿಸುವ ಕಾರ್ಯವನ್ನು ಕೈಗೊಳ್ಳಲಿದೆ. ಈ ಸಮಯದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಆದರೆ, ಆನ್‌ಲೈನ್ ಬಿಲ್ ಪಾವತಿ ಮೇಲೆ ಪರಿಣಾಮ ಬೀರಲಿದೆ ಎಂದು ಬೆಸ್ಕಾಂ ಹೇಳಿದೆ.

ಅಕ್ಟೋಬರ್ 4 ರಿಂದ 7ರ ತನಕ ಗ್ರಾಹಕರು ಆನ್‌ಲೈನ್ ಮೂಲಕ, ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಲ್ ಪಾವತಿ ಮಾಡಲು ಸಾಧ್ಯವಾಗುವುದಿಲ್ಲ. ಕೌಂಟರ್ ಮೂಲಕ ಸಹ ಬಿಲ್ ಪಾವತಿ ಸಾಧ್ಯವಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಆದ್ದರಿಂದ ಮೂರು ದಿನಗಳ ಕಾಲ ಗ್ರಾಹಕರು ಬಿಲ್ ಪಾವತಿ ಮಾಡಲು ಪ್ರಯತ್ನ ಮಾಡಬೇಡಿ. ಅಕ್ಟೋಬರ್ 7ರ ಬಳಿಕ ಬಿಲ್ ಪಾವತಿಸಿ.

BESCOM Online Bill Payments Affected From October 4 to 7

ಇಂಧನ ಇಲಾಖೆಯ ಹೊಸ ತಂತ್ರಜ್ಞಾನ ವ್ಯವಸ್ಥೆಯಡಿ IPDS IT Phase-1 ಮೇಲ್ದರ್ಜೆಗೇರಿಸುವ ಕಾರ್ಯ ಮಾರ್ಚ್‌ 2024ರಲ್ಲಿ ಪೂರ್ಣಗೊಂಡಿತ್ತು. ಈಗ 2ನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಮೂರು ದಿನಗಳ ಕಾಲ ಈ ಕಾರ್ಯ ನಡೆಯಲಿದೆ. ಆದ್ದರಿಂದ ಆನ್‌ಲೈನ್ ಬಿಲ್ ಪಾವತಿ ವ್ಯವಸ್ಥೆಯಲ್ಲಿ ಅಡಚಣೆ ಉಂಟಾಗಲಿದೆ.

ಅಧಿಕಾರಿಗಳ ಹೇಳಿಕೆ: ಈ ಕುರಿತು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಮಾತನಾಡಿದ್ದು, "ಉಳಿದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಮಾಹಿತಿ ತಂತ್ರಜ್ಞಾನ ಯೋಜನೆ ಅನುಷ್ಠಾನಕ್ಕೆ ಬೆಸ್ಕಾಂ ನೋಡಲ್ ಏಜೆನ್ಸಿಯಾಗಿದೆ. 30,000ಕ್ಕಿಂತ ಹೆಚ್ಚು ಜನರು ಇರುವ ಪಟ್ಟಣಕ್ಕೆ ಇದನ್ನು ಜಾರಿಗೊಳಿಸಲಾಗುತ್ತಿದೆ" ಎಂದು ಹೇಳಿದ್ದಾರೆ.

"ಹೊಸ ತಂತ್ರಜ್ಞಾನ ವ್ಯವಸ್ಥೆಯಿಂದ ಬಿಲ್ ಪಾವತಿಯಲ್ಲಿ ಹೆಚ್ಚಿನ ಪಾರದರ್ಶಕತೆ ಮತ್ತು ಸರಳತೆಯನ್ನು ತರುತ್ತದೆ. ಈಗಾಗಲೇ ಫೀಲ್ಡ್ ಆಫೀಸರ್‌ಗಳ ತರಬೇತಿ ಪೂರ್ಣಗೊಂಡಿದೆ. ಬೇರೆ ಬೇರೆ ಎಸ್ಕಾಂಗಳ ಸಿಬ್ಬಂದಿಗಳಿಗೆ ತರಬೇತಿ ನಡೆಯುತ್ತಿದೆ" ಎಂದು ತಿಳಿಸಿದ್ದಾರೆ.

ಈ ಕಾರ್ಯ ಕೈಗೊಳ್ಳುವಾಗ ಆನ್‌ಲೈನ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು, ಸಂಪರ್ಕದ ಹೆಸರು ಮತ್ತು ಇತರ ಮಾಹಿತಿ ಬದಲಾವಣೆ, ತಾತ್ಕಾಲಿಕ ಸಂಪರ್ಕದಿಂದ ಕಾಯಂ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಮುಂತಾದ ವ್ಯವಸ್ಥೆಗಳು ಲಭ್ಯವಿರುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಕ್ಟೋಬರ್ 4 ರಿಂದ 7ರ ತನಕ ಬೆಂಗಳೂರು, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕೋಲಾರ, ಚಿಂತಾಮಣಿ, ಕನಕಪುರ, ರಾಮನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿರಾ, ಚನ್ನಪಟ್ಟಣ, ಆನೇಕಲ್, ಮುಳುಬಾಗಿಲು, ಬಂಗಾರಪೇಟೆ, ಹೊಸಕೋಟೆ, ದೊಡ್ಡಬಳ್ಳಾಪುರ, ಕೆಜಿಎಫ್, ಚಳ್ಳಕೆರೆ, ಕುಣಿಗಲ್, ಹರಪನಹಳ್ಳಿ, ಹರಿಹರ, ಹಿರಿಯೂರು, ತಿಪಟೂರು ಮತ್ತು ಗೌರಿಬಿದನೂರಿನಲ್ಲಿ ಸೇವೆಗಳಲ್ಲಿ ವ್ಯತ್ಯಯ ಉಂಟಾಗಲಿದೆ.

ಈಗ ವಿದ್ಯುತ್ ಬಿಲ್ ಪಾವತಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ಇದುವರೆಗೂ ವಿದ್ಯುತ್ ಬಿಲ್ ಸಕಾಲದಲ್ಲಿ ಪಾವತಿಸದೇ ಹೋದಲ್ಲಿ ರಿಯಾಯಿತಿ ನೀಡಲಾಗುತ್ತಿತ್ತು. ಆದರೆ ಅಕ್ಟೋಬರ್ 1ರಿಂದ ಜಾರಿಗೆ ಬರುವಂತೆ ವಿದ್ಯುತ್ ಬಿಲ್ ಬಂದ 30 ದಿನದೊಳಗೆ ಕಟ್ಟದಿದ್ದಲ್ಲಿ ಸಂಪರ್ಕ ಕಡಿತಗೊಳಿಸಲಾಗುತ್ತದೆ ಎಂದು ಗ್ರಾಹಕರಿಗೆ ಮಾಹಿತಿ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+