ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಫುಟ್ ಪಾತ್ ಮೇಲಿದ್ದ 620 ಟ್ರಾನ್ಸ್ ಫಾರ್ಮರ್ ತೆರವು

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜು.4. ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ಪಾದಚಾರಿ ಮಾರ್ಗಗಳ ಮೇಲಿನ ವಿದ್ಯುತ್ ಪರಿವರ್ತಕಗಳನ್ನು ತೆರವು ಮಾಡುವ ಕಾರ್ಯವನ್ನು ಕೊನೆಗೂ ಬೆಸ್ಕಾಂ ಕೈಗೊಂಡಿದ್ದು, ಸದ್ಯ ಬೆಂಗಳೂರು ನಗರದಲ್ಲಿ ಪಾದಚಾರಿ ಮಾರ್ಗಗಳಲ್ಲಿ ಅಳವಡಿಸಲಾಗಿದ್ದ ಟ್ರಾನ್ಸ್‌ಫಾರ್ಮರ್‌ ಪೈಕಿ 620 ಸ್ಥಳಾಂತರ ಮಾಡಿದೆ.

ಅಲ್ಲದೆ, ಇನ್ನೆರಡು ತಿಂಗಳಲ್ಲಿ 862 ಟ್ರಾನ್ಸ್‌ರ್ಮರ್‌ಗಳನ್ನು ಸ್ಥಳಾಂತರ ಮಾಡಲಾಗುವುದು ಎಂದು ಹೈಕೋರ್ಟ್‌ಗೆ ಸಲ್ಲಿಸಿದ ಪ್ರಮಾಣಪತ್ರದಲ್ಲಿ ಬೆಸ್ಕಾಂ ತಿಳಿಸಿದೆ.

ನಗರದಲ್ಲಿ ಪಾದಚಾರಿ ಮಾರ್ಗ ಹಾಗೂ ರಾಜಕಾಲುವೆಗಳ ಮೇಲಿರುವ ಟ್ರಾನ್ಸ್‌ ಫಾರ್ಮರ್‌ ತೆರವು ಕೋರಿ ನಿವೃತ್ತ ವಿಂಗ್‌ ಕಮಾಂಡರ್‌ ವಿ.ಜಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮಮೂರ್ತಿ ಆಲೋಕ್‌ ಆರಾಧೆ ಹಾಗೂ ನ್ಯಾ. ಜೆ.ಎಂ. ಖಾಜಿ ಅವರಿದ್ದ ವಿಭಾಗೀಯಪೀಠ ವಿಚಾರಣೆ ನಡೆಸಿತು.

 BESCOM Shifted 620 transformers in the footpath: Filed report before HC

ಆಗ ಬೆಸ್ಕಾಂ ಪರ ವಕೀಲರು, ಪಾದಾಚಾರಿ ಮಾರ್ಗಗಳಲ್ಲಿನ ವಿದ್ಯುತ್‌ ಪರಿವರ್ತಕಗಳನ್ನು ತೆರವುಗೊಳಿಸುವ ಕುರಿತು ಕೈಗೊಂಡಿರುವ ಕ್ರಮಗಳನ್ನು ಒಳಗೊಂಡ ಪ್ರಮಾಣಪತ್ರ ಸಲ್ಲಿಸಿದರು. ಆ ಪ್ರಮಾಣಪತ್ರದಲ್ಲಿನ್ಯಾಯಾಲಯ ನಿರ್ದೇಶನದಂತೆ ಪಾದಚಾರಿ ಮಾರ್ಗಗಳ ಮೇಲೆ ಅಳವಡಿಸಲಾಗಿರುವ 2,587 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರ ಮಾಡಲು ಗುರುತಿಸಲಾಗಿದ್ದು, ಆ ಪೈಕಿ ಈಗಾಗಲೇ 620 ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲಾಗಿದೆ. 862 ವಿದ್ಯುತ್‌ ಪರಿವರ್ತಕಗಳನ್ನು ಸ್ಥಳಾಂತರಿಸಲು 2 ತಿಂಗಳ ಗುರಿ ಇಟ್ಟುಕೊಳ್ಳಲಾಗಿದೆ. ಉಳಿದವನ್ನು ಹಂತ ಹಂತವಾಗಿ ಸ್ಥಳಾಂತರ ಮಾಡಲಾಗುವುದು, ಅದಕ್ಕಾಗಿ ಕಾಲಾವಕಾಶ ನೀಡುವಂತೆ ಕೋರಿ ಮೆಮೋ ಸಲ್ಲಿಸಿದರು.

ಬೆಸ್ಕಾಂ ಪರ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಟ್ರಾನ್ಸ್‌ಫಾರ್ಮರ್‌ಗಳ ಸ್ಥಳಾಂತರದ ಕಾರ್ಯಪ್ರಗತಿ ವರದಿ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಸೆ.12ಕ್ಕೆ ಮುಂದೂಡಿತು.

Recommended Video

ಬಸವರಾಜ್ ಬೊಮ್ಮಾಯಿ ಅವರು ಪಿಎಸ್‌ಐ ನೇಮಕಾತಿ ಬಗ್ಗೆ ಮಾತನಾಡಿದ್ದಾರೆ | Oneindia

English summary
Bescom informed the High Court that it has relocated 620 transformers installed on footpaths in Bangalore city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X