BESCOM: ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಅಪ್‌ಡೇಟ್ ಕೊಟ್ಟ ಬೆಸ್ಕಾಂ
ಬೆಂಗಳೂರು, ಮೇ 14, 2025: ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಯೋಗದಲ್ಲಿ ಮಂಗಳವಾರ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಗೆ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿ, ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ ಎಂದು ತಿಳಿಸಿದರು.

ಕೆಇಆರ್‌ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಕರೆ ನೀಡಿದರು. ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆ (ಸಿಜಿಆರ್‌ಎಫ್)ಯ ಸ್ಪಷ್ಟ ನಿರ್ದೇಶನದಂತೆ ಗ್ರಾಹಕರು ದೂರುಗಳು ಬಂದಲ್ಲಿ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕಿದೆ.
ಜಿಲ್ಲಾ ಹಂತದ ವೇದಿಕೆಯಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್, ಇಇ ಹಾಗೂ ಸ್ವತಂತ್ರ ಸದಸ್ಯರು ಇರಲಿದ್ದಾರೆ. ಕಾರ್ಪೋರೇಟ್ ಕಚೇರಿಯ ಸಿಜಿಆರ್‌ಎಫ್ ವೇದಿಕೆಯಲ್ಲಿ ದೂರು ಇತ್ಯರ್ಥವಾಗದಿದ್ದರೆ ಕೆಇಆರ್‌ಸಿ ವಿದ್ಯುಚ್ಛಕ್ತಿ ಲೋಕಪಾಲರ (ಓಂಬುಡ್ಸ್‌ಮನ್) ಬಳಿ ದೂರು ಸಲ್ಲಿಸಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು. ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕೆಇಆರ್‌ಸಿಯ ಅಧ್ಯಕ್ಷರೂ ಆದ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, "ದೂರಿನ ಇತ್ಯರ್ಥದ ಸಂದರ್ಭದಲ್ಲಿ ಗ್ರಾಹಕರಿಗೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ನ್ಯಾಯ ಒದಗಿಸಬೇಕು. ಮುಖ್ಯವಾಗಿ ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾದರೆ ಕಾರ್ಯಾಗಾರ ಯಶಸ್ವಿಯಾದಂತೆ ಎಂದರು.
ಕೆಇಆರ್‌ಸಿ ಸದಸ್ಯರಾದ (ಕಾನೂನು) ಹೆಚ್.ಕೆ.ಜಗದೀಶ್ ಮಾತನಾಡಿ, ವಿದ್ಯುಚ್ಛಕ್ತಿ ಅಧಿನಿಯಮ 2003ರ ಸೆಕ್ಷನ್ 42ರ 5 ಮತ್ತು 6ರಲ್ಲಿ ಗ್ರಾಹಕರ ದೂರುಗಳನ್ನು ಸ್ವೀಕರಿಸಿ ನ್ಯಾಯ ಒದಗಿಸಲು ವಿವರಿಸಲಾಗಿದೆ. ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆ ಮತ್ತು ವಿದ್ಯುಚ್ಛಕ್ತಿ ಲೋಕಪಾಲರನ್ನು ಅರೆನ್ಯಾಯಿಕ ವೇದಿಕೆಯಂತೆ ಪರಿಗಣಿಸಲಾಗಿದೆ. ವೇದಿಕೆಗಳ ಕಾರ್ಯವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯ ಹಾಗೂ ಉಚ್ಛ ನ್ಯಾಯಾಲಯ ಸ್ಪಷ್ಟಪಡಿಸಿದೆ ಎಂದರು.
ಕಾರ್ಯಾಗಾರದಲ್ಲಿ ಕೆಇಆರ್‌ಸಿಯ ತಾಂತ್ರಿಕ ನಿರ್ದೇಶಕರಾದ ಶ್ರೀನಿವಾಸಪ್ಪ, ನಿವೃತ್ತ ನ್ಯಾಯಾಧೀಶರಾದ ಕೃಷ್ಣಯ್ಯ ಹಾಗೂ ಐ.ಎಫ್.ಬಿದರಿ ಅವರು ಅಧಿಕಾರಿಗಳಿಗೆ ಗ್ರಾಹಕರ ಹಕ್ಕುಗಳ ಬಗ್ಗೆ ಇಲಾಖೆ ತಾಂತ್ರಿಕ ವಿಚಾರಗಳು ಹಾಗೂ ಸಾಮಾನ್ಯವಾಗಿ ಎದುರಾಗುತ್ತಿರುವ ದೂರುಗಳ ಬಗ್ಗೆ ವಿವರಿಸಿದರು.
ಇನ್ನೂ ಈ ವೇಳೆ ಕೆಇಆರ್‌ಸಿ ಕಾರ್ಯದರ್ಶಿ ಸಿದ್ದೇಶ್ವರ್, ಬೆಸ್ಕಾಂ ತಾಂತ್ರಿಕ ನಿರ್ದೇಶಕ ಹೆಚ್.ಜೆ.ರಮೇಶ್, ಬೆಸ್ಕಾಂ ಹಣಕಾಸು ವಿಭಾಗದ ನಿರ್ದೇಶಕ ಮಹಾದೇವ, ಬೆಸ್ಕಾಂ ಆಡಳಿತ ಮತ್ತು ಮಾನವ ಸಂಪನ್ಮೂಲ ವಿಭಾಗದ ಪ್ರಧಾನ ವ್ಯವಸ್ಥಾಪಕ ಡಾ.ದಯಾನಂದ್, ಗ್ರಾಹಕ ಸಂಬಂಧ ಶಾಖೆಯ ಪ್ರಧಾನ ವ್ಯವಸ್ಥಾಪಕ ರಾಜೋಜಿ ರಾವ್, ನಿಗಮ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಪುಷ್ಪ ಎಸ್.ಎ ಉಪಸ್ಥಿತರಿದ್ದರು.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications