ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೇಟಿ ಬಚಾವೊ ಬೇಟಿ ಪಡಾವೊ : ವಂಚಿಸುವವರ ವಿರುದ್ಧ ಕ್ರಮ

|
Google Oneindia Kannada News

ಬೆಂಗಳೂರು, ಜನವರಿ 21 : ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮದಡಿಯಲ್ಲಿ 2 ಲಕ್ಷ ರು. ನಗದು ಉತ್ತೇಜನ ನೀಡುವುದಾಗಿ ವಂಚಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸುವುದಾಗಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ.

ಕೆಲವು ಅನಧಿಕೃತ ಸಂಘಟನೆಗಳು / ಸ್ವಯಂ ಸೇವಾ ಸಂಸ್ಥೆಗಳು / ವ್ಯಕ್ತಿಗಳು ಹೆಣ್ಣು ಮಕ್ಕಳ ವೈಯಕ್ತಿಕ ಮಾಹಿತಿಯನ್ನು ನಮೂನೆಯಲ್ಲಿ ಪಡೆದು ವಂಚಿಸುತ್ತಿರುವುದು ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯ ಇಲಾಖೆಯ ಸಚಿವಾಲಯದ ಗಮನಕ್ಕೆ ಬಂದಿರುತ್ತದೆ. ಈ ನಿಟ್ಟಿನಲ್ಲಿ ಕೆಳಗಿನ ಎಚ್ಚರಿಕೆಯನ್ನು ಸಾರ್ವಜನಿಕರ ಅವಗಾಹನೆಗಾಗಿ ನೀಡಲಾಗಿದೆ.

Beti bachao beti padhao : Beware of cheaters

ಬೇಟಿ ಬಚಾವೊ ಬೇಟಿ ಪಢಾವೊ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇದರ ಲಾಭಗಳೇನು?

ಸಾರ್ವಜನಿಕ ಗಮನಕ್ಕೆ:

• ಬೇಟಿ ಬಚಾವೊ ಬೇಟಿ ಪಡಾವೊ ಯೋಜನೆಯಡಿಯಲ್ಲಿ ಯಾರಿಗೂ ನಗದು ವಿತರಣೆ ಮಾಡುವ ಕಾರ್ಯಕ್ರಮ ಇರುವುದಿಲ್ಲ.
• ಅನಧಿಕೃತ ಸಂಸ್ಥೆಗಳು/ವ್ಯಕ್ತಿಗಳು ಈ ಯೋಜನೆಯಡಿಯ ಹಣವನ್ನು ನೀಡುವುದಾಗಿ ಭರವಸೆ ನೀಡಿ ಸಾರ್ವಜನಿಕರನ್ನು ಮೋಸ ಮಾಡುತ್ತಿವೆ.
• ಈ ರೀತಿಯ ವಂಚನೆಯನ್ನು ಮಾಡುವ ಅಥವಾ ಪ್ರಚಾರ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು.
• ಇಂತಹ ವಂಚನೆಗಳು ಬೆಳಕಿಗೆ ಬಂದಾಗಲೆಲ್ಲಾ ಎಫ್.ಐ.ಆರ್.ಗಳನ್ನು ಈಗಾಗಲೇ ನೋಂದಾಯಿಸಲಾಗಿದೆ.
• ಇಂತಹ ವಂಚಕರ ಬಲೆಗೆ ಬೀಳದಂತೆ ಸಾರ್ವಜನಿಕರಿಗೆ ಸಲಹೆ/ಸೂಚನೆ ನೀಡಲಾಗಿದೆ. ಈ ಯೋಜನೆಯಡಿ ವಂಚಕರು ನಮೂನೆಯಲ್ಲಿ ಕೋರುವ ಯಾವುದೇ ವೈಯಕ್ತಿಕ ವಿವರಗಳನ್ನು ಅಂದರೆ ಆಧಾರ್ ಕಾರ್ಡ್, ಬ್ಯಾಂಕ್ ವಿವರಗಳು, ದೂರವಾಣಿ/ಮೊಬೈಲ್ ಸಂಖ್ಯೆ/ಇ-ಮೇಲ್ ಐ.ಡಿ/ಇತರೆ ಯಾವುದೇ ಮಾಹಿತಿಗಳನ್ನು ಬಹಿರಂಗಪಡಿಸಬಾರದು.
• ಇಂತಹ ವಂಚನೆಗಳನ್ನು ಮಾಡುವವರ ಬಗ್ಗೆ ವ್ಯಕ್ತಿಗಳ/ಸಂಸ್ಥೆಗಳ ಹೆಸರನ್ನು ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಿ.
• ನಿಮ್ಮ ಸ್ನೇಹಿತರು, ಸಂಬಂಧಿಕರು ಹಾಗೂ ನಿಮ್ಮನ್ನು ಸಂಪರ್ಕಿಸುವ ಎಲ್ಲರಿಗೂ ಇಂತಹ ವಂಚಕರ ವಿರುದ್ಧ ಜಾಗರೂಕರಾಗಿರಲು ತಿಳಿಸಿದೆ.

'ಬೇಟಿ ಬಚಾವೊ...' ಜಾಗೃತಿ ಮೂಡಿಸಲು ವಿಮಾನವೇರಿ ಹೊರಟ ಮಹಿಳಾ ಪೈಲಟ್‌ಗಳು'ಬೇಟಿ ಬಚಾವೊ...' ಜಾಗೃತಿ ಮೂಡಿಸಲು ವಿಮಾನವೇರಿ ಹೊರಟ ಮಹಿಳಾ ಪೈಲಟ್‌ಗಳು

ಈ ಹಿನ್ನೆಲೆಯಲ್ಲಿ ಬೇಟಿ ಬಚಾವೊ ಬೇಟಿ ಪಡಾವೊ ಕಾರ್ಯಕ್ರಮದಡಿ ಹೆಣ್ಣು ಮಕ್ಕಳಿಗೆ 2 ಲಕ್ಷ ರು. ನಗದು ನೀಡುವ ಕಾರ್ಯಕ್ರಮ ಇರುವುದಿಲ್ಲ. ಈ ರೀತಿ ಮುಗ್ಧ ಹೆಣ್ಣು ಮಕ್ಕಳನ್ನು ಸುಳ್ಳು ಭರವಸೆ ನೀಡಿ ಮೋಸ ಮಾಡುವವರನ್ನು ಕಾನೂನು ಬಾಹಿರವಾಗಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

English summary
Beti bachao beti padhao: Beware of cheaters. Women and Children development department has warned the people not to give any money to unknown people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X