ಆಕ್ರೋಶ್ ದಿವಸ್: ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ

ಭಾರಿ ಮೌಲ್ಯದ ನೋಟು ನಿಷೇಧದ ವಿರುದ್ಧ ಕಾಂಗ್ರೆಸ್ ಹಾಗೂ ಎಡಪಕ್ಷಗಳು ನಡೆಸಲು ಉದ್ದೇಶಿಸಿರುವ ಆಕ್ರೋಶ್ ದಿವಸ್ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು, ನವೆಂಬರ್ 27: ಭಾರಿ ಮೌಲ್ಯದ ನೋಟು ನಿಷೇಧದ ವಿರುದ್ಧ ಕಾಂಗ್ರೆಸ್ ಹಾಗೂ ಎಡಪಕ್ಷಗಳು ನಡೆಸಲು ಉದ್ದೇಶಿಸಿರುವ ಆಕ್ರೋಶ್ ದಿವಸ್ ಆಚರಣೆ ಹಿನ್ನಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯ ಈ ಬಗ್ಗೆ ಪ್ರಕಟಣೆ ಹೊರಡಿಸಿ ನವೆಂಬರ್ 28ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಡಿಸೆಂಬರ್ 8ರಂದು ನಡೆಸಲಾಗುವುದು ಎಂದು ಹೇಳಿದೆ.[ಆಕ್ರೋಶ್ ದಿವಸ್: ಕರ್ನಾಟಕದಲ್ಲಿ ಬಸ್ ಮೆಟ್ರೋ ಸಂಚಾರ ಸ್ಥಗಿತ]

ಅಪನಗದೀಕರಣ (demonetisation) ವಿರುದ್ಧದ ಆಕ್ರೋಶ್ ದಿವಸಕ್ಕೆ ಕರ್ನಾಟಕ ಸರ್ಕಾರ ಕೂಡಾ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಬೆಂಗಳೂರು ವಿಶ್ವವಿದ್ಯಾಲಯ ತನ್ನ ಸೆಮಿಸ್ಟರ್ ಪರೀಕ್ಷೆಗಳನ್ನು ಅನಿವಾರ್ಯವಾಗಿ ಮುಂದೂಡಿದೆ.

Bharat bandh: Bangalore University postpones exams

ಸೋಮವಾರ(ನವೆಂಬರ್ 28)ರಂದು ಮೂರನೇ ಹಾಗೂ ಐದನೇ ಸೆಮಿಸ್ಟರ್ ಬಿಎ/ಬಿಕಾಂ/ಬಿಬಿಎಂ/ಬಿಎಚ್ಎಂ ಪರೀಕ್ಷೆ ನಿಗದಿಯಾಗಿತ್ತು. ಸೋಮವಾರದಂದು ಎಲ್ಲಾ ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಸಿದ್ದರಾಮಯ್ಯ ಸರ್ಕಾರ ಸುತ್ತೋಲೆ ಹೊರೆಡಿಸಿರುವ ಬೆನ್ನಲ್ಲೇ ಬೆಂಗಳೂರು ವಿವಿ ಈ ನಿರ್ಧಾರ ಕೈಗೊಂಡಿದೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ಸರ್ಕಾರಿ ಸಾರಿಗೆ ವ್ಯವಸ್ಥೆ ವ್ಯತ್ಯಯವಾಗುವ ಸಾಧ್ಯತೆ ಕಂಡು ಬಂದಿದೆ. ತುಮಕೂರು ವಿವಿ ಈಗಾಗಲೇ ಪರೀಕ್ಷೆಗಳನ್ನು ಮುಂದೂಡಿರುವುದನ್ನು ಇಲ್ಲಿ ಸ್ಮರಿಸಬಹುದು. (ಒನ್ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+