ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾಹನ ಸವಾರರೇ ಗಮನಿಸಿ: ಬೆಂಗಳೂರಲ್ಲಿ ಸಂಚಾರ ಮಾರ್ಗದಲ್ಲಿ ಬದಲಾವಣೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 8: ಮಂಗಳವಾರದ ಭಾರತ್ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲವು ರಸ್ತೆ ಸಂಚಾರಗಳಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಮಾಡಲಾಗಿದೆ. ರಾಜಧಾನಿಯಲ್ಲಿ ಕೆಲವು ಸಂಚಾರ ಮಾರ್ಗಗಳ ಬದಲಾವಣೆಯನ್ನು ಮಾಡಿ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.

Recommended Video

ಜಸ್ಟ್ ಕ್ಯಾಮರಾ ನೋಡಿ ತಬ್ಬಿಬ್ಬಾಗಿ ಘೋಷಣೆ ಕೂಗಿದ ನಾಯಕರು | Oneindia Kannada

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ರೈತರ ಪ್ರತಿಭಟನಾ ಮೆರವಣಿಗೆಗಳು ನಡೆಯಲಿವೆ. ಹೀಗಾಗಿ ಸಂಚಾರ ಮಾರ್ಗಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದ್ದು, ಮಂಗಳವಾರ ಬೆಳಿಗ್ಗೆ 6 ರಿಂದ ಬುಧವಾರ ಬೆಳಿಗ್ಗೆ 6 ಗಂಟೆಯವರೆಗೂ ಇದು ಜಾರಿಯಲ್ಲಿರಲಿದೆ.

ಭಾರತ್ ಬಂದ್: ರೈತರಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದೇನು?ಭಾರತ್ ಬಂದ್: ರೈತರಲ್ಲಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದೇನು?

ಡಿ. 8ರಂದು ಬೆಳಿಗ್ಗೆ ರೈತರು ಪುರಭವನದಿಂದ ಜಾಥಾ ಮತ್ತು ಎತ್ತಿನ ಬಂಡಿಗಳಲ್ಲಿ ಎನ್‌ಆರ್ ಸ್ಕ್ವೇರ್, ಕೆಜಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತದ ಮೂಲಕ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ತೆರಳಲಿದ್ದಾರೆ. ಹೀಗಾಗಿ ವಾಹನಗಳ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಕೆ.ಜಿ. ರಸ್ತೆಯಲ್ಲಿ ಸಾಗುವ ವಾಹನಗಳು ಪೊಲೀಸ್ ಕಾರ್ನರ್ ಬಳಿ ಕೆ,ಜಿ ರಸ್ತೆಗೆ ಎಡ ತಿರುವು ಪಡೆದುಕೊಂಡು ಸಾಗುವುದಕ್ಕೆ ನಿರ್ಬಂಧಿಸಲಾಗಿದೆ.

Bharat Bandh: City Police Allows Two Way Traffic In Nrupathunga Road

ಹಲಸೂರು ಗೇಟ್ ಪೊಲೀಸ್ ಠಾಣೆಯ ಕಡೆಯಿಂದ ಬಂದು ಪೊಲೀಸ್ ಕಾರ್ನರ್ ಬಳಿ ಎಡ ತಿರುವು ಪಡೆದು ಕೆಜಿ ರಸ್ತೆಯ ಕಡೆಗೆ ಸಾಗುವ ವಾಹನಗಳು ಪೊಲೀಸ್ ಕಾರ್ನರ್‌ನಿಂದ ನೇರವಾಗಿ ನೃಪತುಂಗ ರಸ್ತೆಯ ಮೂಲಕ ಕೆಆರ್ ವೃತ್ತ ತಲುಪಬಹುದಾಗಿ.

'ಭಾರತ್ ಬಂದ್' ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ!'ಭಾರತ್ ಬಂದ್' ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ!

ನೃಪತುಂಗ ರಸ್ತೆಯಲ್ಲಿ ಇರುವ ಏಕಮುಖ ಸಂಚಾರವನ್ನು ನಾಳಿನ ಮಟ್ಟಿಗೆ ದ್ವಿಮುಖ ಸಂಚಾರ ವ್ಯವಸ್ಥೆಯನ್ನಾಗಿ ಪರಿವರ್ತಿಸಲಾಗಿದೆ. ಕೆಆರ್ ವೃತ್ತದಿಂದ ಪೊಲೀಸ್ ಕಾರ್ನರ್‌ವರೆಗೆ ಮತ್ತು ಪೊಲೀಸ್ ಕಾರ್ನರ್‌ನಿಂದ ಕೆಆರ್ ವೃತ್ತದವರೆಗೆ ರಸ್ತೆಯ ಎರಡೂ ದಿಕ್ಕಿನಲ್ಲಿ ವಾಹನಗಳು ಸಂಚಾರ ನಡೆಸಬಹುದಾಗಿದೆ ಎಂದು ಕಮಲ್ ಪಂತ್ ಆದೇಶಿಸಿದ್ದಾರೆ.

English summary
Bengaluru city police has changed some routes near KR Circle and KG road to avoid traffic jam on Tuesday due to farmers protest over Bharat Bandh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X