ಜ. 8 ಭಾರತ್ ಬಂದ್: ಬಿಎಂಟಿಸಿ ಸೇವೆ ಇರುತ್ತಾ?
ಬೆಂಗಳೂರು, ಜನವರಿ 6: ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ದೇಶವ್ಯಾಪಿ ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಜನವರಿ 8 ರಂದು ಕರೆ ಕೊಟ್ಟಿವೆ. ಅಂದು ಬೆಂಗಳೂರಿನ ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಲಕ್ಷಣವಿದೆ.
ಆದರೆ, "ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ) ಸಂಚಾರ ಸೇವೆಯಲ್ಲಿ ವ್ಯತ್ಯಾಸ ಆಗುವುದಿಲ್ಲ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಸೋಮವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಯಾವುದೇ ಕಾರ್ಮಿಕ ಸಂಘಟನೆಗಳು ನಮ್ಮನ್ನು ಭೇಟಿಯಾಗಿಲ್ಲ. ಒಂದು ವೇಳೆ ನಿಯಮಾವಳಿಗಳನ್ನು ಮೀರಿ ಮುಷ್ಕರದಲ್ಲಿ ಸಂಸ್ಥೆಯ ಉದ್ಯೋಗಿಗಳು ಭಾಗಿಯಾದರೆ ಕ್ರಮ ಕೈಗೊಳ್ಳಲಾಗುತ್ತೆ ಎಂದು ಎಚ್ಚರಿಸಿದ್ದಾರೆ.
ಕೇಂದ್ರದಲ್ಲಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ ತರುತ್ತಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದ್ದು, ಬುಧವಾರ ನೌಕರರು ಕಾರ್ಯಸ್ಥಾನದಿಂದ ದೂರವೇ ಉಳಿಯಲಿದ್ದಾರೆ.

ಜನವರಿ 08ರಂದು ಭಾರತ್ ಬಂದ್, ಯಾವ ಸೇವೆ ಲಭ್ಯ? ಯಾವ್ದು ಅಲಭ್ಯ?
ಈ ಬಂದ್‌ಗೆ ವ್ಯಾಪಾರ ಒಕ್ಕೂಟಗಳು ಮಾತ್ರವಲ್ಲದೆ ದೇಶದಾದ್ಯಂತ ಅನೇಕ ಸಂಘಟನೆಗಳು, ಸಂಘ ಸಂಸ್ಥೆಗಳು, ಒಕ್ಕೂಟಗಳು, ರಾಜಕೀಯ ಪಕ್ಷಗಳಿಂದ ಬೆಂಬಲ ವ್ಯಕ್ತವಾಗಿದೆ. ಸರ್ಕಾರಿ ನೌಕರರು, ಬ್ಯಾಂಕ್ ಉದ್ಯೋಗಿಗಳು, ಶಿಕ್ಷಕರು ಮತ್ತು ಉಕ್ಕು ಹಾಗೂ ರೈಲ್ವೆ ಒಳಗೊಂಡಂತೆ ವಿವಿಧ ವಲಯಗಳ ಲಕ್ಷಾಂತರ ಮಂದಿ ಈ ಮುಷ್ಕರದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.












Click it and Unblock the Notifications