ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತ್ ಬಂದ್; ಪ್ರತಿಭಟನಾಕಾರರಿಗೆ ಸಿಎಂ ಯಡಿಯೂರಪ್ಪ ನೀಡಿದ ಎಚ್ಚರಿಕೆ

|
Google Oneindia Kannada News

ಬೆಂಗಳೂರು, ಜ.7: ಬುಧವಾರ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

"ರಾಜ್ಯದ ಎಲ್ಲಾ ನಗರಗಳು, ಅದರಲ್ಲೂ ಬೆಂಗಳೂರಿನಲ್ಲಿ ಜನಜೀವನ ಎಂದಿನಂತೇ ಸಾಮಾನ್ಯವಾಗಿರುತ್ತದೆ ಮತ್ತು ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ತಡೆ ಇರುವುದಿಲ್ಲ. ಶಾಲಾ-ಕಾಲೇಜು ಎಂದಿನಂತೆ ಕಾರ್ಯನಿರ್ವಹಿಸುತ್ತವೆ ಮತ್ತು ಸಾರಿಗೆ ಕೂಡ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತದೆ' ಎಂದು ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಭಾರತ್ ಬಂದ್: ನಿಮಗೆ ತಿಳಿದಿರಬೇಕಾದ 5 ಸಂಗತಿಗಳುಬುಧವಾರ ಭಾರತ್ ಬಂದ್: ನಿಮಗೆ ತಿಳಿದಿರಬೇಕಾದ 5 ಸಂಗತಿಗಳು

"ಬಂದ್ ಗಳು ಜನವಿರೋಧಿಯೆಂದು ಹಿಂದೆ ಸವೋಚ್ಛ ನ್ಯಾಯಾಲಯ ಹೇಳಿದೆ. ಈ ವಿಷಯ ಬಂದ್ ಗೆ ಕರೆ ಕೊಟ್ಟವರ ಗಮನದಲ್ಲಿ ಇರಬೇಕು. ಜನರು ಯವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ ಎಂದು ಮುಖ್ಯಮಂತ್ರಿ ಪತ್ರಿಕಾ ಪ್ರಕಟಣೆಯಲ್ಲಿ' ತಿಳಿಸಿದ್ದಾರೆ.

Bharat Bandh On January 8th; CM Yediyurappa Warn to Protesters

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ ತರುತ್ತಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದ್ದು, ಬುಧವಾರ ನೌಕರರು ಕಾರ್ಯಸ್ಥಾನದಿಂದ ದೂರವೇ ಉಳಿಯಲಿದ್ದಾರೆ. ಈ ಬಂದ್‌ಗೆ ವ್ಯಾಪಾರ ಒಕ್ಕೂಟಗಳು ಮಾತ್ರವಲ್ಲದೆ ದೇಶದಾದ್ಯಂತ ಅನೇಕ ಸಂಘಟನೆಗಳು, ಸಂಘ ಸಂಸ್ಥೆಗಳು, ಒಕ್ಕೂಟಗಳು, ರಾಜಕೀಯ ಪಕ್ಷಗಳಿಂದ ಬೆಂಬಲ ವ್ಯಕ್ತವಾಗಿದೆ.

English summary
Bharat Bandh On January 8th; CM Yediyurappa Warn to Protesters. Bharat Bandh no effect on Karnataka, He said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X