ಭಾರತ್ ಬಂದ್; ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆಗಳಿಗೆ ಅವಕಾಶವಿಲ್ಲ!
ಬೆಂಗಳೂರು, ಜ.7: ಬುಧವಾರ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿವೆ. ಆದರೆ, 'ಬುಧವಾರ ಬೆಂಗಳೂರಿನಲ್ಲಿ ಯಾವುದೇ ಸಂಘಟನೆಗಳಿಗೆ ಪ್ರತಿಭಟನಾ ಮೆರವಣಿಗೆಗಳಿಗೆ, ಬಹಿರಂಗ ಸಮಾವೇಶಗಳನ್ನು ಮಾಡಲು ಅವಕಾಶ ನೀಡುವುದಿಲ್ಲ' ಎಂದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ಈ ಕುರಿತು ಮಂಗಳವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 'ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಜನಗಳಿಗೆ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತವೆ. ಬುಧವಾರ ಪೊಲೀಸರು ತೀವ್ರ ನಿಗಾ ವಹಿಸಲಿದ್ದು, ಸೂಕ್ಷ್ಮ ಸ್ಥಳಗಳ ಮೇಲೆ ಹದ್ದಿನ ಕಣ್ಣಿಡಲಾಗುವುದು. ಬಂದ್ ಹೆಸರಿನಲ್ಲಿ ಅಮಾಯಕರಿಗೆ ತೊಂದರೆಯುಂಟು ಮಾಡಿದರೇ ಸಹಿಸುವುದಿಲ್ಲ' ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ ತರುತ್ತಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಯಲಿದ್ದು, ಬುಧವಾರ ನೌಕರರು ಕಾರ್ಯಸ್ಥಾನದಿಂದ ದೂರವೇ ಉಳಿಯಲಿದ್ದಾರೆ. ಈ ಬಂದ್ಗೆ ವ್ಯಾಪಾರ ಒಕ್ಕೂಟಗಳು ಮಾತ್ರವಲ್ಲದೆ ದೇಶದಾದ್ಯಂತ ಅನೇಕ ಸಂಘಟನೆಗಳು, ಸಂಘ ಸಂಸ್ಥೆಗಳು, ಒಕ್ಕೂಟಗಳು, ರಾಜಕೀಯ ಪಕ್ಷಗಳಿಂದ ಬೆಂಬಲ ವ್ಯಕ್ತವಾಗಿದೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್












Click it and Unblock the Notifications