ಭಾಸ್ಕರ್ ರಾವ್ ಚಾಲಕನಿಗೆ ಕೊರೊನಾ, ಕಮಿಷನರ್ ಕ್ವಾರಂಟೈನ್

ಬೆಂಗಳೂರು, ಜುಲೈ 17: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರಿಗೆ ಕೊರೊನಾ ಭೀತಿ ಎದುರಾಗಿದ್ದು, ನಾಲ್ಕು ದಿನಗಳ ಕಾಲ ಹೋಮ್ ಕ್ವಾರಂಟೈನ್ ಮೊರೆ ಹೋಗಿದ್ದಾರೆ.

ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರ ಚಾಲಕನಿಗೆ ಶುಕ್ರವಾರ ಕೊವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಈ ಹಿನ್ನೆಲೆ ಮುಂಜಾಗ್ರತೆಯಾಗಿ ಪೊಲೀಸ್ ಆಯುಕ್ತರು ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ.

ಈ ಕುರಿತು ಸ್ವತಃ ಭಾಸ್ಕರ್ ರಾವ್ ಅವರೇ ಟ್ವೀಟ್ ಮಾಡಿದ್ದು 'ನನ್ನ ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ, ನಾನು ಕ್ವಾರಂಟೈನ್‌ಗೆ ಒಳಪಟ್ಟಿದ್ದೇನೆ' ಎಂದು ಮಾಹಿತಿ ನೀಡಿದ್ದಾರೆ.

ಅಂದ್ಹಾಗೆ, ಭಾಸ್ಕರ್ ರಾವ್ ಅವರು ಸೋಮವಾರ ಕೊವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಕಳೆದ ಮೂರು ತಿಂಗಳಲ್ಲಿ ನಾಲ್ಕು ಸಲ ಕೊರೊನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಈಗ ಐದನೇ ಬಾರಿ ಪರೀಕ್ಷೆಗೆ ಒಳಪಡಲಿದ್ದಾರೆ.

Bhaskar Rao Home Quarantined After His Driver Tests Covid-19 Positive

ಸದ್ಯ, ಬೆಂಗಳೂರಿನಲ್ಲಿ 732ಕ್ಕೂ ಅಧಿಕ ಸಿಬ್ಬಂದಿ ಕ್ವಾರಂಟೈನ್‌ನಲ್ಲಿದ್ದಾರೆ ಎಂಬ ಮಾಹಿತಿ ಇದೆ. ಸುಮಾರು 720 ಜನ ಪೊಲೀಸರಿಗೆ ಸೋಂಕು ತಗುಲಿದ್ದು, ಅದರಲ್ಲಿ 256 ಜನರು ಮಾತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರೆಲ್ಲ ಗುಣಮುಖರಾಗಿದ್ದಾರೆ.

Mum

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+