ಬಿಡಿದಿ ಟೌನ್‌ಶಿಪ್ ನಿರ್ಮಾಣ: ರೈತರಿಗೆ ಭರ್ಜರಿ ಗುಡ್‌ನ್ಯೂಸ್ ಕೊಟ್ಟ ಸಿಎಂ ಡಿ.ಕೆ ಶಿವಕುಮಾರ್, ಜೆಡಿಎಸ್ ಹೇಳಿದ್ದೇನು

ಬಿಡದಿ ಟೌನ್‌ಶಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿದ್ದಾರೆ. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇದರೊಂದಿಗೆ ಭಾರೀ ಗುಡ್‌ನ್ಯೂಸ್ ಸಹ ಕೊಟ್ಟಿದ್ದಾರೆ.

Bidadi Township

ಬಿಡದಿ ಟೌನ್‌ಶಿಪ್ ನಿರ್ಮಾಣ ಯೋಜನೆಯು ವಿವಾದ ಸ್ವರೂಪವನ್ನು ಪಡೆದುಕೊಂಡಿದೆ. ಅಲ್ಲದೆ ಈ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಪಕ್ಷವು ಪಾದಯಾತ್ರೆ ಸಹ ನಡೆಸುತ್ತಿದೆ. ಇದೀಗ ಈ ಯೋಜನೆಯ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ ಎಂದಿದ್ದಾರೆ.

ಮುಂದುವರಿದು ಬಿಡದಿ ಟೌನ್‌ಶಿಪ್ ನಿರ್ಮಾಣ ಯೋಜನೆಗೆ ಭೂಮಿ ಕೊಡುವ ರೈತರು ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ಅಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

"ಭೂಮಿ ಉಳಿದರೆ ನಮ್ಮೆಲ್ಲರ ಬದುಕು ಉಳಿಯುತ್ತದೆ"

ಇನ್ನು ಭೂಮಿ ಉಳಿದರೆ ನಮ್ಮೆಲ್ಲರ ಬದುಕು ಉಳಿಯುತ್ತದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಕಳೆದ 516 ದಿನಗಳಿಂದ ಬೈರಮಂಗಲದಲ್ಲಿ ಹೋರಾಟ ಮಾಡುತ್ತಿರುವ ರೈತರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಈ ಮೂರು ದಿನಗಳ ಪಾದಯಾತ್ರೆ "ನಮ್ಮ ಸ್ವಾರ್ಥಕ್ಕೆ ಅಲ್ಲ, ನಮ್ಮ ರೈತರನ್ನು ರಿಯಲ್ ಎಸ್ಟೇಟ್ ಸರ್ಕಾರದಿಂದ ಉಳಿಸಲು" ಎಂದು ತಿಳಿಸಿ, ಪಾದಯಾತ್ರೆಗೆ ಸಂಪೂರ್ಣವಾಗಿ ಸಹಕಾರ ನೀಡಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಬಿಡದಿ ಮಣ್ಣಿನಲ್ಲಿ ರೈತರ ಭಾವನೆ ಅಡಗಿದೆ. ಅವರ ಭಾವನೆಗಳಿಗೆ ಬೆಲೆ ನೀಡುವ ನಿಟ್ಟಿನಲ್ಲಿ ಈ ಪಾದಯಾತ್ರೆಗೆ ಮುಂದಾಗಿದ್ದೇವೆ . ಜೊತೆಗೆ ಕಾನೂನಾತ್ಮಕ ಹೋರಾಟವನ್ನೂ ಮಾಡುತ್ತಿದ್ದೇವೆ ಎಂದು ತಿಳಿಸಿ, ರೈತರ ಅಸ್ತಿತ್ವವನ್ನು ಉಳಿಸಲು ನಮ್ಮ ಹೋರಾಟ ಮತ್ತು ಸರ್ಕಾರ ಬಿಡದಿ ಟೌನ್‌ಶಿಪ್ ನಿಲ್ಲಿಸುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದರು.

ಬಿಡದಿ ಟೌನ್‌ಶಿಪ್ ವಿರೋಧಿಸಿ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೆ ಹಮ್ಮಿಕೊಂಡ ಮೂರು ದಿನಗಳ ಬೃಹತ್ ಪಾದಯಾತ್ರೆಗೆ ಬೈರಮಂಗಲದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಮಾಗಡಿ ಮಾಜಿ ಶಾಸಕ ಎ.ಮಂಜುನಾಥ ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ನಾಯಕರು, ಮುಖಂಡರು ಹಾಗೂ ರೈತರೊಂದಿಗೆ ಚಾಲನೆ ನೀಡಿ, ರೈತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು, ಹಾಲಿ ಶಾಸಕರು, ವಿವಿಧ ಜಿಲ್ಲೆಗಳ ಜಿಲ್ಲಾಧ್ಯಕ್ಷರು, ರೈತ ಮುಖಂಡರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ರೈತರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+