Bidar-Bengaluru Corridor: ಬೀದರ್‌-ಬೆಂಗಳೂರು ಕಾರಿಡಾರ್‌ ಅಭಿವೃದ್ಧಿಗೆ ನಿರ್ಧಾರ, ಪ್ರಯೋಜನೆಗಳು & ತಗಲುವ ವೆಚ್ಚ ಎಷ್ಟು?

ಬೆಂಗಳೂರು, ಫೆಬ್ರವರಿ, 21: ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡಿಸಿದ್ದು, ಈ ವೇಳೆ ಹಲವು ಪ್ರಮುಖ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಅದರಲ್ಲಿ ಕಾರಿಡಾರ್‌ಗಳ ಯೋಜನೆಯೂ ಒಂದಾಗಿದೆ.

ಮುಂಬೈ-ಚೆನ್ನೈ ಕಾರಿಡಾರ್‌ ಮಾದರಿಯಲ್ಲಿ ಮಂಗಳೂರು-ಬೆಂಗಳೂರು ಸೇರಿದಂತೆ ಎರಡು ಆರ್ಥಿಕ ಕಾರಿಡಾರ್‌ ಅಭಿವೃದ್ಧಿಪಡಿಸಲು ಈ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಹಾಗಾದರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

Bidar-Bengaluru corridor: Government Decision to Bidar-Bengaluru corridor development

ಒಂದು ಕಾರಿಡಾರ್‌ ಮಂಗಳೂರು ಬಂದರಿನಿಂದ ಬೆಂಗಳೂರುವರೆಗೆ ಅಭಿವೃದ್ಧಿ ಮಾಡಲಾಗುತ್ತದೆ. ಇದರಿಂದ ಬಂದರು ಸಂಪರ್ಕ ಸುಲಭ ಆಗುತ್ತದೆ. ಅಲ್ಲದೆ, ಯುರೋಪ್‌ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಗಣನೀಯವಾಗಿ ಕಡಿಮೆ ಆಗಲಿದೆ.

ಇನ್ನೊಂದು ಕಾರಿಡಾರ್‌ನ್ನು ಬೀದರ್‌ ಹಾಗೂ ಬೆಂಗಳೂರು ನಡುವೆ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಆದರೆ ಈ ಯೋಜನೆಗಳಿಗೆ ತಗಲುವ ವೆಚ್ಚದ ಬಗ್ಗೆ ಬಜೆಟ್‌ನಲ್ಲಿ ತಿಳಿಸಿಲ್ಲ.

ಪ್ರಸಕ್ತ ಸಾಲಿನಲ್ಲಿ ಕೆಶಿಪ್‌-4 ಯೋಜನೆ ಜಾರಿಗೊಳಿಸಲು ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದ್ದು, ಇದಕ್ಕಾಗಿ ಬಾಹ್ಯ ಹಣಕಾಸು ಸಂಸ್ಥೆಯ ನೆರವು (ಸಾಲ) ಪಡೆಯಲು ನಿರ್ಧಾರ ಮಾಡಲಾಗುದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿಲೋ ಮೀಟರ್‌ ಉದ್ದದ ರಾಜ್ಯ ಹೆದ್ದಾರಿಯನ್ನು 5,736 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುತ್ತದೆ.

* ರಾಜ್ಯದಲ್ಲಿನ 1,300 ಕಿಲೋ ಮೀಟರ್‌ ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (ಎಸ್‌ಎಚ್‌ಡಿಪಿ ) ಹಂತ-5 ಪ್ರಾರಂಭ.

* ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು ಕೇಂದ್ರದ ಸಹಕಾರದೊಂದಿಗೆ 450 ಕೋಟಿ ರೂಪಾಯಿ ವೆಚ್ಚದಲ್ಲಿ 4.50 ಕಿಲೋ ಮೀಟರ್‌ ಉದ್ದದ ಮೇಲ್ಸೇತುವೆ ನಿರ್ಮಾಣ.

* ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್‌ನಲ್ಲಿ ವಾಹನ ಸಂಚಾರ ದಟ್ಟಣೆ ತಗ್ಗಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ.

* ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆಆರ್‌ಎಸ್‌ ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲ್ಸೇತುವೆ ಮತ್ತು ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+