Bidar-Bengaluru Airlines: ಬೆಂಗಳೂರು-ಬೀದರ್ ವಿಮಾನಯಾನ ಪುನಾರಂಭಕ್ಕೆ ಮುಹೂರ್ತ, ಅಪ್ಡೇಟ್

ಬೆಂಗಳೂರು, ಜುಲೈ 18: ಸ್ಥಗಿತಗೊಂಡಿರುವ ಬೀದರ್ ಬೆಂಗಳೂರು ನಡುವಿನ ನಾಗರಿಕ ವಿಮಾನ ಸಂಚಾರ ಪುನಾರಂಭಿಸುವ ಕುರಿತಂತೆ ವಿವಿಧ ಖಾಸಗಿ ವಿಮಾನಯಾನ ಸೇವಾ ಸಂಸ್ಥೆಗಳೊಂದಿಗೆ ಚರ್ಚಿಸಿ ಎರಡು ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ. ಪಾಟೀಲ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಚಿವರು ಈ ಸೂಚನೆ ನೀಡಿದರು.

Bidar-Bengaluru Fight Service Restart likely Within Two Weeks

72 ಆಸನಗಳ ಚಿಕ್ಕ ವಿಮಾನ

ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿಲಾಗುವುದು. ಮುಂದಿನ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ಅವರು ಹೇಳಿದರು.

ಸಭೆಯಲ್ಲಿ ಈಶ್ವರ ಖಂಡ್ರೆ ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್ ಜಿಲ್ಲೆಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್ ನಿಂದ ಸಂಪೂರ್ಣ ಸ್ಥಗಿತಗೊಂಡಿದೆ.

Bidar-Bengaluru Fight Service Restart likely Within Two Weeks

ಉಡಾನ್ ಸಬ್ಸಿಡಿ ಸಿಗಬೇಕಿದೆ

ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ವಿಮಾನಯಾನ ಸೇವೆ ಪುನಾರಂಭಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಮೂಲಸೌಕರ್ಯ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ, ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ ಮತ್ತಿತರರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+