ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಾದಿ ಭಾಗ್ಯ ಹಿಂದೂ ಹೆಣ್ಣು ಮಕ್ಕಳಿಗೆ ಇಲ್ಲ: ಸಚಿವ ಇಸ್ಲಾಂ

By Srinath
|
Google Oneindia Kannada News

Bidayee marriage financial help not for hindus - Mminister Qamar ul Islam,
ಬೆಂಗಳೂರು, ನ. 7: ರಾಜ್ಯ ಕಾಂಗ್ರೆಸ್‌ ಸರ್ಕಾರವು ಮುಸ್ಲಿಂ ಹೆಣ್ಣುಮಕ್ಕಳಿಗೆ ಕೊಡ ಮಾಡಿರುವ Bidayee ಶಾದಿ ಭಾಗ್ಯ ಯೋಜನೆಯನ್ನು ಎಲ್ಲರಿಗೂ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಮನದಟ್ಟುಪಡಿಸುತ್ತಿದ್ದರೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವವರು ಶಾದಿ ಭಾಗ್ಯವು ಹಿಂದೂ ಹೆಣ್ಣುಮಕ್ಕಳಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದೂಗಳನ್ನು ಬಿಟ್ಟು ಇನ್ನೆಲ್ಲರಿಗೂ ಈ ಶಾದಿ ಭಾಗ್ಯ ಪ್ರಾಪ್ತಿಯಾಗಲಿದೆ. ಅಂದರೆ ಯೋಜನೆಯನ್ನು ಕ್ರಿಶ್ಚಿಯನ್‌, ಜೈನ, ಪಾರ್ಸಿ, ಬೌದ್ಧರಿಗೂ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಖಮರುಲ್‌ ಇಸ್ಲಾಂ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಖಮರುಲ್‌ ಇಸ್ಲಾಂ, ಕ್ರಿಶ್ಚಿಯನ್‌ ಸಮುದಾಯಕ್ಕೆ 2 ಕೋಟಿ ರೂ., ಜೈನರಿಗೆ 1 ಕೋಟಿ ರೂ., ಉಳಿದ ವರ್ಗಕ್ಕೆ 2 ಕೋಟಿ ರೂ. ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಫ‌ಲಾನುಭವಿಗಳ ಆಯ್ಕೆ ಸಂದರ್ಭದಲ್ಲಿ ಹಿರಿತನ ಪರಿಗಣಿಸಲಾಗುವುದು. ಜತೆಗೆ ಅಂಗವಿಕಲರು, ವಿಧವೆಯರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಶಾದಿ ಭಾಗ್ಯ ಯೋಜನೆಯನ್ನು ಎಲ್ಲ ವರ್ಗದ ಬಡವರಿಗೂ ವಿಸ್ತರಿಸಲು ತಮ್ಮ ಅಭ್ಯಂತರವಿಲ್ಲ. ಆದರೆ ಪ್ರತಿಪಕ್ಷಗಳು ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿವೆ. ಬಜೆಟ್‌ ನಲ್ಲಿ ಘೋಷಿಸಿದಂತೆ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ. ಆಗೆಲ್ಲಾ ಸುಮ್ಮನಿದ್ದವರೂ ಈಗ ರಾಜಕೀಯ ಲಾಭಕ್ಕೆ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸಚಿವ ಇಸ್ಲಾಂ ದೂರಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಧರಣಿ ಕುರಿತು ಪ್ರತಿಕ್ರಿಯಿಸಿ, ಅವರು ಮುಖ್ಯಮಂತ್ರಿಯಾಗಿದ್ದಾಗ ಇಂತಹ ಯೋಜನೆ ಯಾಕೆ ಜಾರಿಗೊಳಿಸಲಿಲ್ಲ? ಎಂದು ಪ್ರಶ್ನಿಸಿದರು.

English summary
The Karnataka government has launched a new scheme ‘Bidayee’ to help poor Muslim girls by providing financial assistance for their marriage. But various political parties have condemned the move. In the meanwhile Mminister Qamar ul Islam has made it clear that other than hindus the scheme is applicable for all other communities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X