ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಐಇಸಿ ಕೋವಿಡ್ ಆರೈಕೆ ಕೇಂದ್ರದ ನೋಡೆಲ್ ಅಧಿಕಾರಿ ಸಾವು

|
Google Oneindia Kannada News

ಬೆಂಗಳೂರು, ಆಗಸ್ಟ್ 09 : ಬೆಂಗಳೂರು ಅಂತರ ರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಕೋವಿಡ್‌ ಆರೈಕೆ ಕೇಂದ್ರದ ನೋಡೆಲ್ ಅಧಿಕಾರಿ ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅಧಿಕಾರಿಯ ಸಾವಿಗೆ ಸಂತಾಪ ಸೂಚಿಸಿದ್ದಾರೆ.

ಬಿಐಇಸಿ ಕೋವಿಡ್ ಆರೈಕೆ ಕೇಂದ್ರದ ನೋಡೆಲ್ ಅಧಿಕಾರಿಯಾಗಿದ್ದ ಹೆಚ್. ಗಂಗಾಧರಯ್ಯ ಹೃದಯಾಘಾತದಿಂದಾಗಿ ಮೃತಪಟ್ಟಿದ್ದಾರೆ. ಕೆಎಎಸ್‌ ಅಧಿಕಾರಿಯಾಗಿದ್ದ ಅವರನ್ನು ಕೇಂದ್ರದ ನೋಡೆಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿತ್ತು.

ಬಿಐಇಸಿ ಕೋವಿಡ್ ಆರೈಕೆ ಕೇಂದ್ರದಲ್ಲಿ ರೋಗಿಗೆ ಮದ್ಯ ಪೂರೈಕೆ! ಬಿಐಇಸಿ ಕೋವಿಡ್ ಆರೈಕೆ ಕೇಂದ್ರದಲ್ಲಿ ರೋಗಿಗೆ ಮದ್ಯ ಪೂರೈಕೆ!

ಕುಸಿದು ಬಿದ್ದ ಗಂಗಾಧರಯ್ಯ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದರು. ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಸಲು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಬಿಎಂಆರ್‌ಸಿಎಲ್, ಕೆಎಸ್ಆರ್‌ಟಿಸಿಯಿಂದ ಕೋವಿಡ್ ಆರೈಕೆ ಕೇಂದ್ರ ಬಿಎಂಆರ್‌ಸಿಎಲ್, ಕೆಎಸ್ಆರ್‌ಟಿಸಿಯಿಂದ ಕೋವಿಡ್ ಆರೈಕೆ ಕೇಂದ್ರ

kas officer

ಬಿ. ಎಸ್. ಯಡಿಯೂರಪ್ಪ ಅವರು ಗಂಗಾಧರಯ್ಯ ಸಾವಿಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಕುಟುಂಬ ಸದಸ್ಯರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 25 ಲಕ್ಷ ರೂ. ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶ ನೀಡಿದ್ದಾರೆ.

ಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರ ಚಿತ್ರ: ದೇಶದಲ್ಲೇ ದೊಡ್ಡದಾದ ಬೆಂಗಳೂರಿನ ಕೋವಿಡ್ ಆರೈಕೆ ಕೇಂದ್ರ

ಮೇಯರ್ ಸಂತಾಪ : ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್ ಸಹ ಗಂಗಾಧರಯ್ಯ ಸಾವಿಗೆ ಸಂತಾಪ ಸೂಚಿಸಿದ್ದಾರೆ. "ಬಿ.ಐ.ಇ. ಸಿ ಆರೈಕೆ ಕೇಂದ್ರದಲ್ಲಿ ಕೋವಿಡ್ ಕರ್ತವ್ಯದಲ್ಲಿ ತೊಡಗಿದ್ದ, ಅಧಿಕಾರಿ ಹೆಚ್.ಗಂಗಾಧರಯ್ಯ ಅವರು ಹೃದಯಾಘಾತದಿಂದ ಅಕಾಲಿಕ ಮರಣವಾದ ಸುದ್ದಿ ಕೇಳಿ ತೀವ್ರ ಬೇಸರವಾಯಿತು.ಅವರ ಆತ್ಮಕ್ಕೆ ಶಾಂತಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.

English summary
KAS officer and Nodal officer for Covid Care Centre at Bangalore International Exhibition Centre (BIEC) died due to heart attack.BBMP mayor and CM B. S. Yediyurappa expressed his heartfelt condolences over the death of H.Gangadharaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X