ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣಾ ಆಯೋಗದಿಂದ ಮುನಿರಾಜು ಗೌಡಗೆ ರಿಲೀಫ್

|
Google Oneindia Kannada News

ಬೆಂಗಳೂರು, ಅಕ್ಟೋಬರ್ 23 : ಬಿಜೆಪಿ ನಾಯಕ ಪಿ. ಮುನಿರಾಜು ಗೌಡಗೆ ಚುನಾವಣಾ ಆಯೋಗ ನೆಮ್ಮದಿ ನೀಡಿದೆ. ಚುನಾವಣಾ ಕಣಕ್ಕಿಳಿಯದಂತೆ ಹೇರಿದ್ದ ನಿಷೇಧವನ್ನು ಆಯೋಗ ಕಡಿತಗೊಳಿಸಿ ಆದೇಶ ಹೊರಡಿಸಿದೆ.

ಮುನಿರಾಜು ಗೌಡ ಮೂರು ವರ್ಷಗಳ ಕಾಲ ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸದಂತೆ ಚುನಾವಣಾ ಆಯೋಗ ನಿಷೇಧ ಹೇರಿತ್ತು. 2019ರ ಜನವರಿ 9ರಂದು ಈ ಕುರಿತು ಆದೇಶ ಹೊರಡಿಸಿತ್ತು.

 ಮುನಿರತ್ನ ಶಾಸಕತ್ವ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಮನವಿ: ಮುನಿರಾಜು ಮುನಿರತ್ನ ಶಾಸಕತ್ವ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ಮನವಿ: ಮುನಿರಾಜು

2014ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದ ಮುನಿರಾಜು ಗೌಡ 4,21,243 ಮತಗಳನ್ನು ಪಡೆದು ಸೋಲು ಕಂಡಿದ್ದರು. ಆದರೆ, ಚುನಾವಣಾ ವೆಚ್ಚದ ವಿವರವನ್ನು ಸೂಕ್ತವಾಗಿ ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಆಯೋಗ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಿತ್ತು.

ಅನರ್ಹ ಶಾಸಕ ಮುನಿರತ್ನ ವಿರುದ್ಧದ ಮತ್ತೊಂದು ದೂರು ಹಿಂಪಡೆದ ಬಿಜೆಪಿ ಕಾರ್ಯಕರ್ತಅನರ್ಹ ಶಾಸಕ ಮುನಿರತ್ನ ವಿರುದ್ಧದ ಮತ್ತೊಂದು ದೂರು ಹಿಂಪಡೆದ ಬಿಜೆಪಿ ಕಾರ್ಯಕರ್ತ

Big Relief For BJP Leader P Muniraju Gowda

ಚುನಾವಣಾ ಆಯೋಗದ ಆದೇಶದ ಬಗ್ಗೆ ಮುನಿರಾಜು ಗೌಡ ಮೇಲ್ಮನವಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. ಪ್ರಾಧಿಕಾರದ ಮುಂದೆ ಖುದ್ದಾಗಿ ಹಾಜರಾಗಿ ವಿವರಣೆ ನೀಡಿದ್ದರು. ಎಲ್ಲಾ ಅಂಕಿಗಳನ್ನು ಪರಿಶೀಲಿಸಿ ಹೊಸ ಆದೇಶವನ್ನು ಆಯೋಗ ಹೊರಡಿಸಿದೆ.

ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?ಆರ್.ಆರ್ ನಗರ, ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ಇಲ್ಲ: ಕಾರಣವೇನು?

ಅಕ್ಟೋಬರ್ 17ರಂದು ಪ್ರಕಟವಾದ ಆದೇಶ ಅನ್ವಯ ಮುನಿರಾಜು ಗೌಡ ಮೇಲೆ ಹೇರಿದ್ದ ನಿಷೇಧದ ಅವಧಿಯನ್ನು ಕಡಿತಗೊಳಿಸಲಾಗಿದೆ. ಇನ್ನು 9 ತಿಂಗಳು 9 ದಿನಕ್ಕೆ ಅವಧಿ ಮುಕ್ತಾಯಗೊಳ್ಳಲಿದೆ.

ಮುನಿರಾಜು ಗೌಡ 2018ರ ವಿಧಾನಸಭೆ ಚುನಾವಣೆಗೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಕಣಕ್ಕಿಳಿದಿದ್ದರು. 49, 216 ಮತಗಳನ್ನು ಪಡೆದು ಕಾಂಗ್ರೆಸ್‌ನ ಮುನಿರತ್ನ ವಿರುದ್ಧ ಸೋಲು ಕಂಡಿದ್ದರು.

ಜನಪ್ರತಿನಿಧಿಗಳ ಕಾಯ್ದೆ 1950ರ ಸೆಕ್ಷನ್ 11ರ ಪ್ರಕಾರ ಚುನಾವಣಾ ವೆಚ್ಚದ ಬಗ್ಗೆ ಸೂಕ್ತ ಮಾಹಿತಿ ನೀಡದಿದ್ದರೆ ಅಂತಹ ಅಭ್ಯರ್ಥಿಯನ್ನು ಮೂರು ವರ್ಷಗಳ ಕಾಲ ಚುನಾವಣಾ ಕಣಕ್ಕಿಳಿಯದಂತೆ ನಿಷೇಧಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಇದೆ.

English summary
Big relief for BJP leader P. Muniraju Gowda from election commission of India. Commission has reduced the disqualification period of Muniraju Gowda from 3 years to 9 months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X