Property: ಕರ್ನಾಟಕದ ಆಸ್ತಿ ಮಾಲೀಕರಿಗೆ ಬಂಪರ್: ಈ ಆಸ್ತಿಗಳಿಗೆ ಕಟ್ಟಡ ಸ್ವಾಧೀನಾನುಭವ ಪ್ರಮಾಣಪತ್ರ ಬೇಡ!
ಕರ್ನಾಟಕ ಸರ್ಕಾರವು ವಿವಿಧ ವಿಚಾರಗಳಲ್ಲಿ ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್ ಕೊಡುತ್ತಿದೆ. ಇದೀಗ ಕಟ್ಟಡಗಳ ಆಸ್ತಿ ಮಾಲೀಕರಿಗೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ನೀಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಆಸ್ತಿ ಮಾಲೀಕರು ಎದುರಿಸುತ್ತಿದ್ದ ಪ್ರಮುಖ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಇದರಿಂದ ರಾಜ್ಯದ ಲಕ್ಷಾಂತರ ಜನ ಆಸ್ತಿದಾರರಿಗೆ ಅನುಕೂಲವಾಗಿದೆ.
ಕರ್ನಾಟಕ ಸರ್ಕಾರವು ಈಚೆಗಷ್ಟೇ ಬಿ - ಖಾತಾದಿಂದ ಎ - ಖಾತಾ ಪರಿವರ್ತನೆಗೆ ಅನುಮೋದನೆ ನೀಡಿದ್ದು, ಇದರಿಂದಲೂ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಅಂದಾಜು 30ರಿಂದ 40 ಲಕ್ಷಕ್ಕೂ ಹೆಚ್ಚು ಆಸ್ತಿದಾರರಿಗೆ ಅನುಕೂಲವಾಗಿದೆ. ಇದೀಗ 1,200 ಚದರ ಅಡಿ ವಿಸ್ತೀರ್ಣದವರೆಗೆ ನೆಲ ಮಹಡಿ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತು ವರೆಗಿನ ಮನೆಗಳಿಗೆ ಅಥವಾ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒ.ಸಿ Possession Certificate) ತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದಂತೆ ವಿನಾಯಿತಿ ಕೊಡಲಾಗಿದೆ. ಇದರಿಂದ ಕರ್ನಾಟಕದ ಲಕ್ಷಾಂತರ ಜನ ಆಸ್ತಿದಾರರಿಗೆ ಅನುಕೂಲವಾಗಿದೆ.

ಕರ್ನಾಟಕ ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ಲಕ್ಷಾಂತರ ಜನ ಆಸ್ತಿದಾರರಿಗೆ ಅನುಕೂಲವಾಗಿದೆ. ಸುಪ್ರೀಂ ಕೋರ್ಟ್ ಈಚೆಗೆ ನೀಡಿದ್ದ ಆದೇಶದಿಂದ ಒ.ಸಿ. ಇಲ್ಲದ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರು ಸಂಪರ್ಕ ಪೂರೈಕೆಯನ್ನು ನಿಲ್ಲಿಸಲಾಗಿತ್ತು. ಇದರಿಂದಾಗಿ ಅನೇಕ ಮಾಲೀಕರು ತೊಂದರೆಗೆ ಒಳಗಾಗಿದ್ದರು. ಈಗ ಈ ವಿನಾಯಿತಿ ಈ ಆಸ್ತಿದಾರರಲ್ಲಿ ನಿರಾಳತೆ ಮೂಡಿಸಿದೆ.
ಇನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೂ ವಿಸ್ತರಿಸಿದ್ದು, ಲಕ್ಷಾಂತರ ಆಸ್ತಿ ಮಾಲೀಕರಿಗೆ ವರದಾನವಾಗಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಪಾಲಿಕೆ, ನಗರ ಸಭೆ ಹಾಗೂ ಪುರಸಭೆಗಳಲ್ಲಿ ಕಟ್ಟಡದ ಸ್ವಾಧೀನಾನುಭವ ಪ್ರಮಾಣ ಪತ್ರ (ಒ.ಸಿ) ವಿನಾಯಿತಿ ಕೊಡಲಾಗಿದೆ. 1,200 ಚದರ ಅಡಿಯಲ್ಲಿ ಮನೆ ನಿರ್ಮಿಸಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ (ಒ.ಸಿ) ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ನೆಲ + 2 ಅಂತಸ್ತು ಅಥವಾ ಸ್ಟಿಲ್ಟ್ + 3 ಅಂತಸ್ತಿನವರೆಗಿನ ವಾಸದ ಕಟ್ಟಡಗಳಿಗೆ ಈ ಸೌಲಭ್ಯ ವಿಸ್ತರಣೆ ಆದಂತೆ ಆಗಿದೆ.
1,200 ಚದರ ಅಡಿ ವಿಸ್ತೀರ್ಣದವರೆಗೆ ಇರುವ ಮತ್ತು ನೆಲ ಮಹಡಿ ಜೊತೆಗೆ ಎರಡು ಅಂತಸ್ತು ಅಥವಾ ಸ್ಟಿಲ್ಟ್ ಜೊತೆಗೆ ಮೂರು ಅಂತಸ್ತು ಇರುವ ಕಟ್ಟಡಗಳಿಗೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒ.ಸಿ ಪಡೆಯುವುದು ಕಡ್ಡಾಯ ಮಾಡಲಾಗಿತ್ತು. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಪರಿಚಯಿಸಲಾಗಿತ್ತು. ಇದೀಗ ರಾಜ್ಯದಾದ್ಯಂತ ಈ ವಿನಾಯಿತಿಯನ್ನು ವಿಸ್ತರಿಸಲಾಗಿದೆ.
ಸ್ವಾಧೀನಾನುಭವ ಪ್ರಮಾಣ ಪತ್ರ ಎಂದರೇನು ?
ಕಟ್ಟಡಗಳ ನಿರ್ಮಾಣವು ಸುರಕ್ಷಿತವಾಗಿದೆ ಮತ್ತು ರಾಜ್ಯ ಸರ್ಕಾರದ ನಿಯಮಗಳನ್ನು ಅನುಸರಿ ಅಥವಾ ಅಳವಡಿಸಿಕೊಂಡು ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದೆ ಎನ್ನುವುದನ್ನು ಖಚಿತಪಡಿಸುವುದಕ್ಕೆ ಈ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಈ ಪತ್ರವು ಕಟ್ಟಡದ ಮಾಲೀಕರಿಗೆ ಕಾನೂನುಬದ್ಧ ಮಾನ್ಯತೆಯನ್ನು ಕೊಡುತ್ತದೆ.
ಯಾವ ಕಾರಣಕ್ಕೆ ಪ್ರಮಾಣಪತ್ರ ಕಡ್ಡಾಯ ರದ್ದು: ರಾಜ್ಯದಲ್ಲಿ ಪ್ರತಿ ಕಟ್ಟಡವನ್ನು ಪರಿಶೀಲಿಸಿ ಅದಕ್ಕೆ ಒ.ಸಿ. ಕೊಡಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಸಿಬ್ಬಂದಿಗೆ ಹೆಚ್ಚಿನ ಹೊರೆಯಾಗುತ್ತಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ. ಹೀಗಾಗಿ, ಕರ್ನಾಟಕ ಪುರಸಭೆ ಕಾಯ್ದೆ 1964ರ ಕಲಂ 190 (2ಎ) ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ.












Click it and Unblock the Notifications