ಆದಿಯೋಗಿ ಪ್ರತಿಮೆ ವಿವಾದ: ಪ್ರತಿಮೆ ಸ್ಥಾಪನೆ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಅರ್ಜಿದಾರರು ತಮ್ಮ ವಿರುದ್ಧ ಕ್ರಿಮಿನಲ್ ಕೇಸ್ ಬಾಕಿ ಇರುವುದನ್ನು ಮುಚ್ಚಿಟ್ಟಿದ್ದ ವಿಚಾರವನ್ನು ಇಶಾ ಫೌಂಡೇಷನ್ ಪರ ವಕೀಲರು ಪ್ರಸ್ತಾಪಿಸಿದರು. ಅದನ್ನೇ ಆಧರಿಸಿ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.
ಬೆಂಗಳೂರು, ಫೆಬ್ರವರಿ. 10: ಐತಿಹಾಸಿಕ ನಂದಿ ಬೆಟ್ಟದ ಸಮೀಪ ಇಶಾ ಯೋಗ ಕೇಂದ್ರದ ಆದಿಯೋಗಿ ಪ್ರತಿಮೆ ಸ್ಥಾಪಿನೆಗೆ ಇದ್ದ ದೊಡ್ಡ ಅಡ್ಡಿ ನಿವಾರಣೆಯಾಗಿದೆ.
ಆದಿಯೋಗಿ ಪ್ರತಿಮೆ ಸ್ಥಾಪನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಜಾಗೊಳಿಸಿ ಹೈಕೋರ್ಟ್ ಗುರುವಾರ ಆದೇಶಿಸಿದೆ. ಹಾಗಾಗಿ ಇನ್ನು ಪ್ರತಿಮೆ ಸ್ಥಾಪನೆ ಕಾರ್ಯ ಯಾವುದೇ ಅಡಚಣೆ ಇಲ್ಲದೆ ನಡೆಯಬಹುದಾಗಿದೆ.
#KarnatakaHighCourt dismisses #FalseCase against Isha filed to stall construction In Chikkaballapur.
— Isha Foundation (@ishafoundation) February 9, 2023
Pulls up the petitioner for not coming to court with clean hands. #PressRelease pic.twitter.com/9sFLmNmA8y
ಅರ್ಜಿದಾರರು ತಮ್ಮ ವಿರುದ್ಧ ಕ್ರಿಮಿನಲ್ ಕೇಸ್ ಬಾಕಿ ಇರುವುದನ್ನು ಮುಚ್ಚಿಟ್ಟಿದ್ದ ವಿಚಾರವನ್ನು ಇಶಾ ಫೌಂಡೇಷನ್ ಪರ ವಕೀಲರು ಪ್ರಸ್ತಾಪಿಸಿದರು. ಅದನ್ನೇ ಆಧರಿಸಿ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.

ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್.ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಳೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರು ಶುದ್ಧಹಸ್ತದಿಂದ ನ್ಯಾಯಾಲಯದ ಮೆಟ್ಟಿಲೇರಿಲ್ಲ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಿಲ್ಲ. ಶುದ್ಧಹಸ್ತರು ನ್ಯಾಯಾಲಯದ ಮುಂದೆ ಹಾಜರಾದರೆ ಅವರ ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾಗೊಳಿಸಿತು.
*ಕೋರ್ಟ್‌ನಲ್ಲಿ ನಡೆದದ್ದೇನು?*
ಮೊದಲಿಗೆ ಇಶಾಯೋಗ ಕೇಂದ್ರದ ಪರ ಹಿರಿಯ ವಕೀಲರು, ಅರ್ಜಿದಾರರು ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಿಲ್ಲ. ವಾಸ್ತವಾಂಶ ಮುಚ್ಚಿಟ್ಟು ಅರ್ಜಿ ಸಲ್ಲಿಸಿದ್ದಾರೆ. ಆ ಮೂಲಕ ಪಿಐಎಲ್ ನಿಯಮ ಉಲ್ಲಂಘಿಸಿದ್ದಾರೆ ಎಂದರು.

ಅದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಚಳವಳಿಗಳಲ್ಲಿ ಭಾಗಿಯಾಗಿರುವುದಕ್ಕೆ ದುರುದ್ದೇಶಪೂರಿತವಾಗಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಿವರಿಸಿದರು.
ಅದನ್ನು ಒಪ್ಪದ ನ್ಯಾಯಪೀಠ, ಏನಾದರೂ ಶುದ್ಧಹಸ್ತವಾಗಿ ಅರ್ಜಿದಾರರು ನ್ಯಾಯಾಲಯದ ಮುಂದೆ ಬರಬೇಕು. ಉದ್ದೇಶವಷ್ಟೇ ಅಲ್ಲದೇ ಮಾರ್ಗವೂ ಶುದ್ಧವಾಗಿರಬೇಕು ಎಂಬುದಾಗಿ ಗಾಂಧೀಜಿ ಹೇಳಿದ್ದಾರೆ. ಪ್ರಕರಣಗಳಿದ್ದರೆ ಅದನ್ನು ಬಹಿರಂಗಪಡಿಸಬೇಕು. ಬಳಿಕ ಅದಕ್ಕೆ ಪೂರಕವಾದ ದಾಖಲೆ ಸಲ್ಲಿಸಬಹುದಿತ್ತು. ವ್ಯಕ್ತಿಗಳ ನಡುವಿನ ವೈಷಮ್ಯಕ್ಕೆ ಪ್ರಕರಣ ದಾಖಲಿಸಲಾಗಿದೆ. ಹೀಗಿರುವಾಗ ರೈತರ ಪ್ರತಿಭಟನೆಯ ಪ್ರಶ್ನೆ ಎಲ್ಲಿಂದ ಬರುತ್ತದೆ..? ಎಂದು ಪ್ರಶ್ನಿಸಿತು.
ಅಲ್ಲದೆ, ಯಾವ ಕಾರಣಕ್ಕಾಗಿ ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಾಗಿದೆ ಎಂಬುದನ್ನು ನ್ಯಾಯಾಲಯ ಪರಿಶೀಲಿಸುತ್ತಿಲ್ಲ. ಅರ್ಜಿದಾರರು ನ್ಯಾಯಾಲಯದ ಮುಂದೆ ಬಂದಾಗ ಯಾವುದೇ ದಾಖಲೆಯನ್ನೂ ಸಹ ಮುಚ್ಚಿಟ್ಟಿಲ್ಲ ಎಂಬುದನ್ನು ನೋಡಲಾಗುತ್ತದೆ. ಬೇರೆಯ ಮೇಲೆ ಬೆರಳು ತೋರಿಸುವ ಮುನ್ನ ಅರ್ಜಿದಾರರು ಸರಿಯಾಗಿರಬೇಕು. ಸಾರ್ವಜನಿಕ ಹಿತಾಸಕ್ತಿಯ ವಿಚಾರ ಎತ್ತಿಕೊಂಡಾಗ ಅರ್ಜಿದಾರರು ಶುದ್ಧಹಸ್ತರಾಗಿರಬೇಕ ಎಂಬುದು ನ್ಯಾಯಾಲಯದ ಕನಿಷ್ಠ ಬಯಕೆಯಾಗಿದೆ ಎಂದು ಹೇಳಿತು.
*ಪ್ರಕರಣದ ಹಿನ್ನೆಲೆ*
ಚಿಕ್ಕಬಳ್ಳಾಪುರದ ನಂದಿ ಬೆಟ್ಟ ಮತ್ತು ನರಸಿಂಹ ದೇವರು ಬೆಟ್ಟದ ವ್ಯಾಪ್ತಿಯಲ್ಲಿ ಆದಿಯೋಗಿ ಪ್ರತಿಮೆ ಸ್ಥಾಪಿಸಲು ಇಶಾ ಯೋಗ ಕೇಂದ್ರಕ್ಕೆ ಸರ್ಕಾರದ ಪ್ರಾಧಿಕಾರಗಳು ಅವಕಾಶ ಮಾಡಿಕೊಟ್ಟಿವೆ. ಇದರಿಂದ ಅಲ್ಲಿನ ಜನ-ಜೀವನ ಮತ್ತು ಕಾಡು ಪ್ರಾಣಿಗಳ ಬದುಕಿನ ಮೇಲೆ ನೇರ ಪರಿಣಾಮ ಉಂಟಾಗಲಿದೆ. ಹೀಗಾಗಿ, ಅವಲಗುರ್ಕಿಯಲ್ಲಿ ಇಶಾ ಯೋಗ ಕೇಂದ್ರಕ್ಕೆ ಸಂಬಂಧಿಸಿದ ಭೂಮಿಗೆ ದಾಖಲೆ ಸಲ್ಲಿಸಲು ಹಾಗೂ ನಂದಿ ಬೆಟ್ಟದ ವ್ಯಾಪ್ತಿಯ ಪರಿಸದರ ರಕ್ಷಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು. ಅವಲಗುರ್ಕಿ ಪ್ರದೇಶದ ಬೆಟ್ಟದ ಶ್ರೇಣಿಯಲ್ಲಿನ ಭೂಪ್ರದೇಶದ ಚಹರೆ ಬದಲಿಸದಂತೆ ಮತ್ತು ಪರಿಸರ ವ್ಯವಸ್ಥೆಗೆ ಹಾನಿ ಉಂಟು ಮಾಡದಂತೆ ಇಶಾ ಯೋಗ ಕೇಂದ್ರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.
ಮೊದಲಿಗೆ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ 2023 ಜ.11ರಂದು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್ ನಿರ್ದೇಶಿಸಿತ್ತು. ನಂತರ ಜ.15ರಂದು ನಿಗದಿಯಾಗಿದ್ದ ಆದಿಯೋಗಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಸಲು ಜ.13ರಂದು ಅನುಮತಿ ನೀಡಿತ್ತು.












Click it and Unblock the Notifications