ಬೆಂಗಳೂರಿನ ಈ ಆಸ್ತಿದಾರರಿಗೆ ಶಾಕ್: ಅನಧಿಕೃತ ಕಟ್ಟಡಗಳ ತೆರವಿಗೆ ಜಿಬಿಎ ಪ್ಲ್ಯಾನ್!
ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿರುವ ಆಸ್ತಿದಾರರ ಮೇಲೆ ಗ್ರೇಟರ್ ಬೆಂಗಳೂರು ಆಡಳಿತವು ಕಣ್ಣಿರಿಸಿದೆ. ಇದೀಗ ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಆಸ್ತಿಗಳನ್ನು ಕೆಡವುದಕ್ಕೆ ಗ್ರೇಟರ್ ಬೆಂಗಳೂರು ಆಡಳಿತವು ಮುಂದಾಗಿದೆ.
ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಕಂಠೀರವ ಸ್ಟೇಡಿಯಂನಲ್ಲಿ ಕೈಗೆತ್ತಿಕೊಂಡಿರುವ ರಾಜಕಾಲುವೆ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಲು ಆಯುಕ್ತರಾದ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಇದೇ ಸಂದರ್ಭದಲ್ಲಿ ಕೆಲವು ಆಸ್ತಿದಾರರಿಗೆ ಗಂಭೀರವಾದ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಬುಧವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ್ದು. ಮಳೆಗಾಲದ ವೇಳೆ ಕಂಠೀರವ ಸ್ಟೇಡಿಯಂನಲ್ಲಿ ಜಲಾವೃತವಾಗಲಿದ್ದು, ಅದನ್ನು ತಪ್ಪಿಸುವ ಸಲುವಾಗಿ ರಾಜಕಾಲುವೆಯ ತಡೆಗೋಡೆ ಎತ್ತರಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಈ ಸಂಬಂಧ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಂಠೀರವ ಸ್ಟೇಡಿಯಂನಲ್ಲಿ ರಾಜಕಾಲುವೆ ಕಾಮಗಾರಿಯಿಂದಾಗಿ ಕ್ರೀಡಾಪಟುಗಳು, ಕ್ರೀಡಾರ್ಥಿಗಳಿಗೆ/ಮಕ್ಕಳಿಗೆ ಅನಾನುಕೂಲವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಕಾಲುವೆ ಕಾಮಗಾರಿಯನ್ನು ಜರೂರಾಗಿ ಪೂರ್ಣಗೊಳಿಸಿ ಇಲ್ಲಿ ಜಲಾವೃತವಾಗದಂತೆ ಸೂಕ್ತ ಕ್ರಮವಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ತುರ್ತಾಗಿ ಕೈಗೊಳ್ಳಬೇಕು. ರಸ್ತೆ ಮೇಲ್ಮೈ ಹಾಳಾಗಿರುವ ಕಡೆ ಡಾಂಬರೀಕರಣ ಕಾರ್ಯ ಪ್ರಗತಿಯಲ್ಲಿದ್ದು, ಅಗತ್ಯ ಇರುವ ಕಡೆಗಳಲ್ಲಿ ರಸ್ತೆ ಡಾಂಬರಿಕರಣ (resurfacing) ಕಾಮಗಾರಿ ಕೈಗೊಳ್ಳಲು ನಿರ್ದೇಶನ ಕೊಟ್ಟಿದ್ದಾರೆ.
ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ: ಇನ್ನು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳನ್ನು ಗುರುತಿಸಿ, ಅವುಗಳನ್ನು ಪಟ್ಟಿ ಮಾಡಬೇಕು. ಅನಂತರ ಅವುಗಳನ್ನು ಹಂತ-ಹಂತವಾಗಿ ತೆರವುಗೊಳಿಸುವ ಕಾರ್ಯವನ್ನು ಪ್ರಾರಭಿಸಲು ಹಾಗೂ ಕಟ್ಟಡ ಕಟ್ಟುವ ಮುನ್ನವೇ ಯಾವುದೇ ರೀತಿಯ ಉಲ್ಲಂಘನೆ ಮಾಡದಂತೆ ತಿಳಿ ಹೇಳಬೇಕೆಂದು ಸೂಚನೆ ನೀಡಿದ್ದಾರೆ.
ರಸ್ತೆಗೆ ನೀರು ಬರದಂತೆ ಕ್ರಮವಹಿಸಿ: ಕುಮಾರ ಪಾರ್ಕ್(ಪಶ್ಚಿಮ) ಸುಬ್ರಾಯಶಾಸ್ತ್ರಿ ರಸ್ತೆಯಲ್ಲಿ(ಉಮೇಶ್ ಹೋಟೆಲ್ ಹತ್ತಿರ) ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದನ್ನು ಗಮನಿಸಿ, ಇದರಿಂದ ರಸ್ತೆ ಹಾಳಾಗುವುದರ ಜೊತೆಗೆ ಪಾದಚಾರಿಗಳ, ಸಾರ್ವಜನಿಕ ಸಂಚಾರಕ್ಕೆ ಅನಾನುಕೂಲವಾಗುತ್ತಿದೆ. ಈ ನಿಟ್ಟಿನಲ್ಲಿ ಕೂಡಲೇ ರಸ್ತೆಗೆ ನೀರು ಬರದಂತೆ ಹಾಗೂ ಹಾಳಾದ ರಸ್ತೆ ಸರಿಪಡಿಸಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಪರಿಶೀಲನೆ ನಡೆಸಿದ ರಸ್ತೆಗಳು: ವಿಧಾನಸೌಧ ಸುತ್ತಮುತ್ತಲಿನ ರಸ್ತೆ, ಮಿನ್ಸ್ ಸ್ಕೈರ್, ಶಿವಾನಂದ ವೃತ್ತ, ಕಬ್ಬನ್ ರಸ್ತೆ, ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಹತ್ತಿರ, ಅರಮನೆ ರಸ್ತೆ, ರೇಸ್ ಕೋರ್ಸ್ ರಸ್ತೆ ಹಾಗೂ ನೃಪತುಂಗ ರಸ್ತೆ. ಇನ್ನು ಈ ಸಂದರ್ಭದಲ್ಲಿ ಮುಖ್ಯ ಎಂಜಿನಿಯರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಎಂಜಿನಿಯರರು ಸೇರಿದಂತೆ ಹಲವರು ಹಾಜರಿದ್ದರು.












Click it and Unblock the Notifications