Plastic Sale: ಏಕ ಬಳಕೆ ಪ್ಲಾಸ್ಟಿಕ್ ಮಾರಾಟ, ಉತ್ಪನ್ನ, ಬಳಕೆ ಮಾಡುವವರಿಗೆ ಬಿಗ್ ಶಾಕ್!
ಬೆಂಗಳೂರು ಜುಲೈ 27: ಪರಿಸರವನ್ನು ಹಾಳು ಮಾಡುವ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಪ್ರಮುಖ ನಿರ್ಧಾರವನ್ನು ಕೈಗೊಂಡಿದ್ದಾರೆ. ಕಟ್ಟುನಿಟ್ಟಾಗಿ ಪ್ಲಾಸ್ಟಿಕ್ ನಿಷೇಧಕ್ಕೆ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.
ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ್ದರೂ ಬಹುತೇಕ ಕಡೆ ಅದರ ಮಾರಾಟ, ಉತ್ಪನ್ನ, ದಾಸ್ತಾನು ನಡೆಯುತ್ತಲೇ ಇದೆ. ಹೀಗಾಗಿ ಇದನ್ನು ತಡೆಗಟ್ಟಲು ಜಿಲ್ಲೆಗಳಲ್ಲಿ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆ ರಚಿಸಿ ಏಕ ಬಳಕೆ ಪ್ಲಾಸ್ಟಿಕ್ ಸಾಗಾಟಕ್ಕೆ ಕಡಿವಾಣ ಹಾಕಲು ಈಶ್ವರ್ ಖಂಡ್ರೆ ಅವರು ಆದೇಶಿಸಿದ್ದಾರೆ.

ಹೀಗಾಗಿ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ, ಉತ್ಪನ್ನ, ಬಳಕೆ ಮಾಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚನೆ ನೀಡಿದ್ದಾರೆ.
ಏಕ-ಬಳಕೆಪ್ಲಾಸ್ಟಿಕ್ (SUP) ನಿಷೇಧವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ವಿಶೇಷ ಕಾರ್ಯಪಡೆಯನ್ನು ರಚಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB)ಗೆ ಕರ್ನಾಟಕ ಅರಣ್ಯ ಸಚಿವ ಈಶ್ವರ್ ಬಿ ಖಂಡ್ರೆ ನಿರ್ದೇಶನ ನೀಡಿದ್ದಾರೆ.
ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಮಾರಾಟ, ಸಂಗ್ರಹಣೆ ಮತ್ತು ಸಾಗಣೆಯನ್ನು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಮಾರ್ಷಲ್‌ಗಳನ್ನು ಒಳಗೊಂಡ ಕಾರ್ಯಪಡೆ ಕಾರ್ಯ ನಿರ್ವಹಿಸಬೇಕು. ಶುಕ್ರವಾರ ನಡೆದ ಸಭೆಯಲ್ಲಿ ಖಂಡ್ರೆ ಅವರು ತಕ್ಷಣ ಈ ತಂಡಗಳನ್ನು ಸ್ಥಾಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ವಿಕಾಸಸೌಧದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೊಂದಿಗೆ ಸಭೆ ನಡೆಸಿದ ಅವರು ಎಲ್ಲ ಜಿಲ್ಲಾ ಕೇಂದ್ರದಲ್ಲೂ ತಂಡ ರಚಿಸಿ, ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳಾದ ಕ್ಯಾರಿಬ್ಯಾಗ್, ಚಮಚ, ತಟ್ಟೆ, ಲೋಟ ಇತ್ಯಾದಿ ತಯಾರಿಸುವ ಘಟಕಗಳು, ಗೋದಮು ಮತ್ತು ಮಾರಾಟ ಮಳಿಗೆಗಳ ಮೇಲೆ ನಿಗಾ ಇಟ್ಟು, ದಾಳಿ ನಡೆಸಿ ಪ್ರಕರಣ ದಾಖಲಿಸುವಂತೆ ತಿಳಿಸಿದರು.
ಏಕ ಬಳಕೆ ಪ್ಲಾಸ್ಟಿಕ್ ಮತ್ತು ಪ್ಲಾಸ್ಟಿಕ್ ಉತ್ಪನ್ನಗಳು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಬರುವುದನ್ನು ನಿಯಂತ್ರಿಸಲು ಸಾರಿಗೆ, ಪೊಲೀಸ್, ವಾಣಿಜ್ಯ ತೆರಿಗೆ ಸೇರಿದಂತೆ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸುವಂತೆ ಸಲಹೆ ನೀಡಿದರು.
ಗಣೇಶ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪೂಜೆಗೆ ಹಾಗೂ ಹಸಿರು ಪಟಾಕಿಗಳನ್ನು ಆಚರಣೆಗೆ ಬಳಸುವಂತೆ ಸಚಿವರು ಜನಸಾಮಾನ್ಯರಲ್ಲಿ ಮನವಿ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಪ್ಲಾಸ್ಟಿಕ್ ವಸ್ತು ಬಳಕೆ
ಪ್ಲಾಸ್ಟಿಕ್ ಕವರ್, ಸ್ಟ್ರಾಗಳು, ಕಟ್ಲೆರಿ, ಸಂಸ್ಕರಿತ ಆಹಾರದ ಪಾಕೆಟ್, ವ್ರಾಪರ್, ಕಾಟನ್ ಬಡ್ ಸ್ಟಿಕ್ ಇತ್ಯಾದಿಗಳು ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳಾಗಿವೆ. ಅದರಲ್ಲೂ ನೊರೆಯುಕ್ತ ಪ್ಲಾಸ್ಟಿಕ್ ವಸ್ತುವಿನಿಂದ ಮಾಡಿದ ವಸ್ತುಗಳಾದ ಪ್ಲಾಸ್ಟಿಕ್ ಪ್ಲೇಟ್, ಕಪ್ ಇತ್ಯಾದಿಗಳಿಂದ ಪರಿಸರಕ್ಕೆ ಭಾರೀ ಹಾನಿಯಾಗುತ್ತದೆ. ಹೀಗಾಗಿ ವಿಶ್ವಸಂಸ್ಥೆಯ ಆಶಯದ ಅನುಸಾರ ಭಾರತ ಇಂಥ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು ಮುಂದಾಗಿದೆ.
ಭಾರತದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಹೇಗೆ?
ಪುನವರ್ಬಳಕೆ ಸಾಧ್ಯವಿಲ್ಲದ ಮತ್ತು ಬಹು ಎಳೆಯ ಪ್ಲಾಸ್ಟಿಕ್ ವಸ್ತುಗಳನ್ನು ನಿಷೇಧಿಸಲು 2016ರಲ್ಲಿ ಭಾರತ ನಿಯಮ ರೂಪಿಸಿತು. ೨೦೧೮ರಲ್ಲಿ ಜಾರಿಗೆ ಬಂದ ಈ ನಿಯಮದಲ್ಲಿ 50 ಮೈಕ್ರಾನ್‌ಗಿಂತ ಕಡಿಮೆ ಮಂದದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ನಿಷೇಧಿಸಲಾಯಿತು. ನಂತರ ಮತ್ತೆ ಈ ನಿಯಮದಲ್ಲಿ ತುಸು ಸಡಿಲಿಕೆ ತಂದಿತು. ನಿಷೇಧಿತ ಪಟ್ಟಿಯಲ್ಲಿ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳನ್ನು ಸೇರಿಸಿರಲಿಲ್ಲ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
GBA ದಾಳಿ: ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ವಿರುದ್ಧ ₹2 ಲಕ್ಷ ದಂಡ, ನಾಗರಿಕ ಅಹವಾಲಿಗೆ ಫೋನ್-ಇನ್ ಆರಂಭ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು











Click it and Unblock the Notifications