ಬೆಂಗಳೂರು-ಚೆನ್ನೈ, ದೆಹಲಿ-ಮುಂಬೈ & ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ ವೇ ಪ್ರಯೋಜನಗಳ ಬಿಗ್‌ ಅಪ್ಡೇಟ್‌

Expressways: ದೇಶದಲ್ಲಿ ಈ ವರ್ಷ ಒಟ್ಟು ಮೂರು ಬಹುನಿರೀಕ್ಷಿತ ಎಕ್ಸ್‌ಪ್ರೆಸ್‌ವೇಗಳು ಸಂಚಾರಕ್ಕೆ ಮುಕ್ತವಾಗಲಿವೆ. ಅವುಗಳು ಬೆಂಗಳೂರು-ಮೈಸೂರು, ದೆಹಲಿ-ಮುಂಬೈ ಹಾಗೂ ದೆಹಲಿ-ಡೆಹ್ರಾಡೂನ್ ಎಕ್ಸ್‌ಪ್ರೆಸ್‌ ವೇಗಳಾಗಿವೆ. ಹಾಗಾದರೆ ಈ ಹೆದ್ದಾರಿಗಳಿಂದ ಏನೆಲ್ಲಾ ಪ್ರಯಜನೆಗಳಾಗಲಿವೆ ಹಾಗೂ ಇವುಗಳ ಕಾಮಗಾರಿ ವೆಚ್ಚ ಎಷ್ಟು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

Delhi-Mumbai Expressway: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಗ್ರೀನ್‌ಫೀಲ್ಡ್ ಯೋಜನೆಯಡಿ ನಿರ್ಮಾಣವಾಗುತ್ತಿರುವ ದೇಶದ ಅತಿ ಉದ್ದದ ಎಕ್ಸ್‌ಪ್ರೆಸ್‌ವೇ ಆಗಿದೆ. ಈಗಾಗಲೇ ಶೇಕಡ 82ರಷ್ಟು ಕಾಮಗಾರಿ ಮುಗಿದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಅಲ್ಲದೆ, ಇದನ್ನು 53 ಪ್ಯಾಕೇಜ್‌ಗಳಲ್ಲಿ ನಿರ್ಮಾಣ ಮಾಡಲಾಗಿದ್ದು, ಅಕ್ಟೋಬರ್ 2025 ಅಂದರೆ ಇದೇ ವರ್ಷ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ತಿಳಿಸಿದ್ದಾರೆ.

Big Update on Bengaluru-Chennai Delhi-Mumbai amp amp Delhi-Dehradun Expressways

ಈ ಹೆದ್ದಾರಿಯು 1,386 ಕಿಮೀ ವ್ಯಾಪಿಸಿದ್ದು, ಉತ್ತರ ಪ್ರದೇಶ, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರ ಸೇರಿದಂತೆ ಪ್ರಮುಖ ಆರ್ಥಿಕ ಕೇಂದ್ರಗಳನ್ನು ಸಂಪರ್ಕಿಸುತ್ತದೆ. ಈ ಹೆದ್ದಾರಿ ನಿರ್ಮಾಣವಾದರೆ ದೆಹಲಿ ಮತ್ತು ಮುಂಬೈನಲ್ಲಿ ನಡುವಿನ ಅಂತಹ 180 ಕಿಲೋ ಮೀಟರ್‌ಗಳಷ್ಟು ಕಡಿಮೆಯಾಗಲಿದೆ. ಈ ಮೂಲಕ ಪ್ರಯಾಣದ ಸಮಯವೂ ಕೂಡ ಶೇಕಡ 50ರಷ್ಟು ಕಡಿಮೆಯಾಗಲಿದೆ.

ಈ ಯೋಜನೆಯು ಭಾರತದ ಲಾಜಿಸ್ಟಿಕ್ಸ್ ವೆಚ್ಚವನ್ನು ಪ್ರಸ್ತುತ ಶೇಕಡ 14-16ರಿಂದ 9ಕ್ಕೆ ಇಳಿಸುವ ಗುರಿಯನ್ನು ಹೊಂದಿದೆ. ಅಲ್ಲದೆ ಜಾಗತಿಕವಾಗಿ ರಫ್ತಿಗೆ, ಪ್ರವಾಸೋದ್ಯಮ ಅಭಿವೃದ್ಧಿ, ಆರ್ಥಿಕತೆಯಲ್ಲಿ ಸುಧಾರಣೆಗೆ ತುಂಬಾ ಸಹಾಯಕ ಆಗಲಿದೆ ಎಂದು ನಿತಿನ್‌ ಗಡ್ಕರಿ ಅವರು ವಿವರಿಸಿದ್ದಾರೆ.

Bengaluru-Chennai Expressway: ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಈಗಾಗಲೇ ಕರ್ನಾಟಕದಲ್ಲಿ ಬಹುತೇಕ ಪೂರ್ಣವಾಗಿದ್ದು, 71 ಕಿಲೋ ಮೀಟರ್ ಸಂಚಾರಕ್ಕೆ ಮುಕ್ತವಾಗಿದೆ. ಎಕ್ಸ್‌ಪ್ರೆಸ್‌ವೇ ಸುತ್ತಮುತ್ತಲಿನ ಸ್ಥಳೀಯರು ಮತ್ತು ರಸ್ತೆಯ ಕೊನೆಯವರೆಗೆ ಮತ್ತು ಹಿಂತಿರುಗುವವರೆಗೆ ಲಾಂಗ್ ಡ್ರೈವ್‌ಗೆ ಈ ದ್ದಾರಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಆದರೆ ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹೆದ್ದಾರಿ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ. 60 ಕಿಲೋ ಮೀಟರ್‌ ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಆಗಸ್ಟ್ 2025ರ ವೇಳೆಗೆ ಸಂಪೂರ್ಣ ಕಾರ್ಯನಿರ್ವಹಿಸಲಿದೆ. ಇನ್ನು 17,900 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎಕ್ಸ್‌ಪ್ರೆಸ್‌ ವೇ ಅನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ಬೆಂಗಳೂರು ಮತ್ತು ಚೆನ್ನೈ ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು 6 ಗಂಟೆಗಳಿಂದ ಕೇವಲ 3 ಗಂಟೆಗೆ ಇಳಿಕೆಯಾಗಲಿದೆ.

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನಗಳ ಗರಿಷ್ಠ ವೇಗವನ್ನು ಗಂಟೆಗೆ 120 ಕಿಲೋ ಮೀಟರ್‌ವರೆಗೆ ಅನುಮತಿಸಬಹುದು ಎನ್ನಲಾಗಿದೆ. ಇನ್ನು 260 ಕಿಲೋ ಮೀಟರ್ ವ್ಯಾಪ್ತಿ ಹೊಂದಿರುವ ಈ ಎಕ್ಸ್‌ಪ್ರೆಸ್‌ವೇ ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನಲ್ಲಿ ಹಾದುಹೋಗಲಿದೆ. ಮಾಲೂರು, ಬಂಗಾರಪೇಟೆ ಮತ್ತು ಬೇತಮಂಗಲದಲ್ಲಿ ಪ್ರಮುಖ ನಿರ್ಗಮನ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

ಈ ಹೆದ್ದಾರಿ ನಿರ್ಮಾಣದಿಂದ ಕರ್ನಾಟಕಕ್ಕೆ ಹಲವು ಉಪಯೋಗಗಳಾಗಲಿವೆ. ಮೊದಲ ಪ್ಯಾಕೇಜ್ ಹೊಸಕೋಟೆ-ಮಾಲೂರು ನಡುವೆ 27.1 ಕಿಲೋ ಮೀಟರ್, ಎರಡನೇಯದಾಗಿ ಮಾಲೂರು-ಬಂಗಾರಪೇಟೆ 27.1 ಕಿಲೋ ಮೀಟರ್ ಮತ್ತು ಮೂರನೇಯದಾಗಿ ಬಂಗಾರಪೇಟೆ-ಬೇತಮಂಗಲ ನಡುವೆ 17.5 ಕಿಲೋ ಮೀಟರ್‌ ಇದೆ.

ಯಾವೆಲ್ಲಾ ಮಾರ್ಗಗಳಲ್ಲಿ ಹಾದು ಹೋಗಲಿದೆ?: ಇದು ಹೊಸಕೋಟೆ, ಮುಳಬಾಗಲು, ಚಿತ್ತೂರು, ರಾಣಿಪೇಟೆ, ವಾಲಾಜಪೇಟೆ, ಶ್ರೀಪೆರಂಬದೂರು, ಪೊನ್ನಮಲ್ಲೆ, ಕೋಯಂಬೆಡು ಮೂಲಕ ಹಾದುಹೋಗಲಿದೆ. ಈ ಹೆದ್ದಾರಿ ಬೆಂಗಳೂರಿನ ಹೊರವಲಯದಲ್ಲಿರುವ ಹೊಸಕೋಟೆಯಿಂದ ಆರಂಭವಾಗಿ ಮಾಲೂರು, ಬಂಗಾರಪೇಟೆ, ಕೋಲಾರ, ಪಲಮನೇರ್, ಚಿತ್ತೂರು, ರಾಣಿಪೇಟೆ ಪಟ್ಟಣಗಳ ಮೂಲಕ ಸಾಗಲಿದ್ದು, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಶ್ರೀಪೆರಂಬದೂರಿನಲ್ಲಿ ಕೊನೆಗೊಳ್ಳಲಿದೆ.

Delhi-Dehradun Expressway: ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಕೂಡ ಇದೇ ವರ್ಷದಲ್ಲಿ ಅಂದರೆ 2025ರಲ್ಲಿ ಉದ್ಘಾಟನೆಯಾಗಲಿದೆ. ಇದು ಇನ್ನೂ ಮೂರು ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಈ ಹೆದ್ದಾರಿ ನಿರ್ಮಾಣವಾದರೆ, ದೆಹಲಿ ಮತ್ತು ಡೆಹ್ರಾಡೂನ್ ನಡುವಿನ ಪ್ರಯಾಣದ ಸಮಯ 5-6 ಗಂಟೆಗಳಿಂದ ಕೇವಲ ಎರಡು ಗಂಟೆಗೆ ಕಡಿತವಾಗಲಿದೆ.

10,000 ಕೋಟಿ ರೂಪಾಯಿ ಅನುದಾನದಲ್ಲಿ ಈ ಹೆದ್ದಾರಿ ನಿರ್ಮಾಣ ಮಾಡಲಾಗುತ್ತಿದೆ. ಇದು ದೆಹಲಿ-ಕಾಳಿಂದಿ ಕುಂಜ್‌ನಿಂದ ಫರಿದಾಬಾದ್ ಮಾರ್ಗವನ್ನು ಸಂಪರ್ಕಿಸುತ್ತದೆ. ಈಗಾಗಲೇ ಕಾಮಗಾರಿ ಬಹತೇಖ ಮುಕ್ತಾಯವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶೀಘ್ರದಲ್ಲೇ ಉದ್ಘಾಟಿಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+