ಬಿಗ್‌ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನ!
ಬಿಗ್‌ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಅವರನ್ನು ರಾಮೋಹಳ್ಳಿ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರಿರುವ ಪೆಂಡೆಂಟ್ ಹಾಕಿಕೊಂಡ ವರ್ತೂರ್ ಸಂತೋಷ್ ಅವರನ್ನು ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಬಂಧಿಸಲಾಗಿದೆ.
ಹುಲಿ ಉಗುರು ಧರಿಸಿದ ಆರೋಪದ ಮೇಲೆ ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಕರೆತಂದ ಅರಣ್ಯಾಧಿಕಾರಿಗಳು ವಿಚಾರಣೆ ಬಳಿಕ ಬಂಧಿಸಿದ್ದಾರೆ ಎನ್ನಲಾಗುತ್ತಿದೆ. ಮಾಹಿತಿಗಳ ಪ್ರಕಾರ, ನಾನ್ ಬೇಲೆಬಲ್ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ವರ್ತೂರು ಸಂತೋಷ್ ಅವರನ್ನ ಅಧಿಕಾರಿಗಳು ಕೋರ್ಟ್‌ಗೆ ಹಾಜರು ಪಡಿಸಿ ಬಳಿಕ ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಕನ್ನಡದ ಬಿಗ್ ಬಾಸ್ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆ ಒಳಗೆ ಪೊಲೀಸರ ಎಂಟ್ರಿ ಆಗಿದೆ ಎನ್ನಲಾಗುತ್ತಿದೆ. ವರ್ತೂರು ಸಂತೋಷ್ ಅವರನ್ನು ಪೊಲೀಸರು ಭಾನುವಾರ ತಡರಾತ್ರಿ ಅರೆಸ್ಟ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ವರ್ತೂರು ಸಂತೋಷ್ ಮೂಲತ: ರೈತರಾಗಿದ್ದಾರೆ. ಅವರು ಹಲವು ಪ್ರಾಣಿಗಳನ್ನು ಸಾಕಿದ್ದಾರೆ. ಜೊತೆಗೆ ಕೈ ಹಾಗೂ ಕತ್ತಿಗೆ ಹಲವಾರು ಚಿನ್ನದ ಆಭರಣಗಳನ್ನು ಹಾಕಿರುತ್ತಾರೆ. ಅಖಿಲ ಭಾರತ ಹಳ್ಳಿಕಾರ್ ತಳಿ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾದ ಸಂತೋಷ್ ಅವರು ಯಾವಾಗಲು ಒಂದು ಚೈನ್ ಹಾಕಿರುತ್ತಾರೆ. ಅದರಲ್ಲಿ ಹುಲಿಯ ಉಗುರು ಕಾಣಿಸಿದೆ. ಈ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ.
ಅರಣ್ಯ ಸಂರಕ್ಷಣಾಧಿಕಾರಿ ರವೀಂದ್ರ ಅವರು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಸಂತೋಷ್ ಅವರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಹುಲಿ ಉಗುರು ಧರಿಸಿರುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.
ಒಮ್ಮೆ ಬಿಗ್ ಬಾಸ್ ಮನೆಯಿಂದ ಹೊರಬಂದರೆ ಅವರಿಗೆ ಮತ್ತೆ ಮನೆ ಒಳಗೆ ಎಂಟ್ರಿ ಸಿಗುವುದಿಲ್ಲ. ಆದರೆ ವರ್ತೂರು ಸಂತೋಷ್ ಅರೆಸ್ಟ್ ಮಾಡಿರುವುದರಿಂದ ಅವರು ಮತ್ತೆ ಬಿಗ್‌ಬಾಸ್ ಮನೆಗೆ ಬರುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ.












Click it and Unblock the Notifications