Get Updates
Get notified of breaking news, exclusive insights, and must-see stories!

ಬಿಗ್ ಬಾಸ್ ಖ್ಯಾತಿಯ ನರ್ಸ್ ಜಯಲಕ್ಷ್ಮೀ ಎಂಇಪಿ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು, ಏ.06: ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಪಟ್ಟಿಯನ್ನು ಒಂದೆರಡು ದಿನಗಳಲ್ಲಿ ಬಿಡುಗಡೆ ಮಾಡುವುದಾಗಿ ಎಂಇಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಡಾ.ನೌಹೀರಾ ಶೇಖ್ ಹೇಳಿದ್ದಾರೆ.

ನಗರದ ಲೀಲಾ ಪ್ಯಾಲೆಸ್ ಹೊಟೇಲ್ ನಲ್ಲಿ ಶುಕ್ರವಾರ ನರ್ಸ್ ವಿಜಯಲಕ್ಷ್ಮಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮತ್ತಷ್ಟು ನಾಯಕರು ಪಕ್ಷ‌ ಸೇರಲಿದ್ದಾರೆ ಎಂಬ ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ನಿರ್ಧಾರ ಮಾಡಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡಲಿದ್ದು, ಶೇ.35 ರಷ್ಟು ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳಿಗೆ ನೀಡಲಾಗುತ್ತಿದೆ ಎಂದರು.

Bigg Boss fame Nurse Jayalaxmi joins MEP

ರಾಜ್ಯದಲ್ಲಿ ಹಲವಾರು ಸಮಸ್ಯೆಗಳಿವೆ ವಿದ್ಯುತ್, ನೀರಿನ ಸಮಸ್ಯೆ, ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಲು ಹಾಗೂ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಲು ಕೊನೆಯ ಉಸಿರಿನತನಕ ಹೋರಾಟ ಮಾಡುತ್ತೇನೆ ಎಂದರು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದಂತೆಯೇ ಎಂಇಪಿಗೆ ನಿರೀಕ್ಷೆಗೂ ಮೀರಿದ ಜನಬೆಂಬಲ ದೊರಕುತ್ತಿದೆ ಎಂದು ತಿಳಿಸಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಪಕ್ಷಕ್ಕೆ ಸೇಪರ್ಡೆಯಾಗಿ ಮಾತನಾಡಿದ ನರ್ಸ್ ಜಯಲಕ್ಷ್ಮಿ, ನೌಹೀರಾ ಶೇಕ್ ಮಾಡಿರುವ ಕೆಲಸ ಕಾರ್ಯಗಳನ್ನು ಮಾಧ್ಯಮದ ಮೂಲಕ ತಿಳಿದುಕೊಂಡು ಸಾಥ್ ಕೊಡಬೇಕು ಎಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ಪಕ್ಷ ಸೇರಿದ್ದೇನೆ ಮತ್ತು ಎಂಇಪಿ ವತಿಯಿಂದಲೇ ಚುನಾವಣೆ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಘೋಷಿಸಿದ್ದರು.

ಎಂಇಪಿ ಪಕ್ಷದ ಸಹಕಾರವಿಲ್ಲದೇ ರಾಜ್ಯದಲ್ಲಿ ಯಾವ ಪಕ್ಷ ಸರ್ಕಾರ ರಚನೆ ಮಾಡುಲು ಆಗದಂತ ಮಹತ್ತರ ಪಾತ್ರವನ್ನು ಎಂಇಪಿ ವಹಿಸಲಿದೆ ಹೀಗಾಗಿ ರಾಜ್ಯದಲ್ಲಿ ಮಹಿಳೆಯರು ಹೆಚ್ಚಿನ ಎಂಇಪಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಈ ಸಂದರ್ಭದಲ್ಲಿ ಮನವಿ‌ ಮಾಡಿಕೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+