• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಗ್ ಬಾಸ್ ಖ್ಯಾತಿಯ ರೂಪದರ್ಶಿ ಜಯಶ್ರೀ ರಾಮಯ್ಯ ಆತ್ಮಹತ್ಯೆ

|

ಬೆಂಗಳೂರು, ಜನವರಿ 25: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಖ್ಯಾತಿಯ ರೂಪದರ್ಶಿ ಕಮ್ ನಟಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿದ್ದ ವೃದ್ಧಾಶ್ರಮವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಜಯಶ್ರೀ ರಾಮಯ್ಯ ಶವ ಪತ್ತೆಯಾಗಿದೆ. ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾಕಿರಣ ವೃದ್ಧಾ/ಅಬಲಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ‌ಠಾಣಾ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಜಯಶ್ರೀ ರಾಮಯ್ಯ ಡೆತ್ ನೋಟ್, ಎರಡು ಡೈರಿಯಲ್ಲಿ ಏನಿದೆ?

ಬಿಗ್ ಬಾಸ್ ಕನ್ನಡದಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ಅವರು ಈ ಹಿಂದೆ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದರು. ಹಾಗೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಹಿರಂಗವಾಗಿ ಸಾಮಾಜಿಕ ಜಾಲ ತಾಣಗಳಲ್ಲಿ ಸಂದೇಶ ಹಾಕಿದ್ದರು.

ಆದರೆ, ನಂತರ ಕಿಚ್ಚ ಸುದೀಪ ಸೇರಿದಂತೆ ಸಿನಿಮಾರಂಗದ ಅನೇಕರು ಜಯಶ್ರೀಗೆ ಸಾಂತ್ವನ ಹೇಳಿದ್ದರು. ಆದರೆ, ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದ ಜಯಶ್ರೀ ಅವರು ಮಾನಸಿಕ ಖಿನ್ನತೆಯಿಂದ ಹೊರಬಂದಿರಲಿಲ್ಲ ಎಂಬ ಸುದ್ದಿಯಿದೆ.

ಜಯಶ್ರೀ ಅವರು ಆತ್ಮಹತ್ಯೆಗೆ ಶರಣಾಗಲು ಏನು ಕಾರಣ ಎಂಬುದು ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಸೂಸೈಡ್ ನೋಟ್ ಇದೆಯೇ? ಎಂದು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಕ್ಷಣದ ಪ್ರತಿಕ್ರಿಯೆ ನೀಡಿದ್ದಾರೆ.

''ನಾನು ಏಳೆಂಟು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದೇನೆ, ನಾನು ಒಳ್ಳೆ ಹುಡುಗಿಯಲ್ಲ, ನನಗೆ ದಯಾ ಮರಣ ಕೊಡಿ'' ಎಂದು ಫೇಸ್ಬುಕ್ ವಿಡಿಯೋ ಮಾಡಿದ್ದರು.

ಆದರೆ, ನಂತರ ಕಿಚ್ಚ ಸುದೀಪ ಅವರ ಬುದ್ಧಿವಾದ ನಂತರ ವಿಡಿಯೋ ಡಿಲೀಟ್ ಮಾಡಿದ್ದರು. ಸುದೀಪ್ ಹಾಗೂ ಮಾಧ್ಯಮದವರಿಗೆ ಧನ್ಯವಾದ ಅರ್ಪಿಸಿದ್ದರು. ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಮುಂತಾದ ಚಿತ್ರಗಳಲ್ಲಿ ಜಯಶ್ರೀ ನಟಿಸಿದ್ದಾರೆ, ಸಿನಿಮಾ ರಂಗಕ್ಕೂ ಮುನ್ನ ರೂಪದರ್ಶಿಯಾಗಿ ಬಣ್ಣದ ಲೋಕಕ್ಕೆ ಕಾಲಿರಿಸಿದ್ದರು.

   ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ಇನ್ನಿಲ್ಲಾ !! | Oneindia Kannada

   2019ರಲ್ಲಿ ಒನ್‌ಇಂಡಿಯಾದೊಂದಿಗೆ ಮಾತನಾಡಿದ್ದ ಜಯಶ್ರೀ, 'ನಮ್ಮ ಮಾವ ನನ್ನನ್ನು ಹಾಗೂ ತಾಯಿಯನ್ನು ಮನೆಯಿಂದ ಹೊರಗೆ ಹಾಕಿದ್ದಾರೆ, ಆಸ್ತಿ ವಿಷಯವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ' ಎಂದು ಅಳಲು ತೋಡಿಕೊಂಡಿದ್ದರು.

   ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

   English summary
   Bigg Boss Kannada Fame Jayashree Ramaiah commits suicide at a old age home in Madanayanakahalli Police station limits, Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X