ಬೆಂಗಳೂರಿನಲ್ಲಿ ಬಿಹಾರ ಯುವತಿ ಮೇಲೆ ಅತ್ಯಾಚಾರ
ಬೆಂಗಳೂರು, ಆ.21 : ಬಿಹಾರ ಮೂಲದ ಯುವತಿಯನ್ನು ಅಪಹರಿಸಿ ಚಿಕ್ಕಮಾರನಹಳ್ಳಿ ರೆಸಾರ್ಟ್‌ನಲ್ಲಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಈ ಕುರಿತು ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಬುಧವಾರ ರಾತ್ರಿ ಮೆಜೆಸ್ಟಿಕ್‌ನಿಂದ ಯುವತಿಯನ್ನು ಅಪಹರಿಸಲಾಗಿದ್ದು, ರೆಸಾರ್ಟ್‌ನಲ್ಲಿ ಕೆಲಸ ಮಾಡುವ ಯುವಕ ಸೇರಿದಂತೆ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇಂದು ಬೆಳಗ್ಗೆ ರೆಸಾರ್ಟ್‌ನಿಂದ ಅರೆನಗ್ನ ಸ್ಥಿತಿಯಲ್ಲಿ ಓಡಿಬಂದ ಯುವತಿಯನ್ನು ಕ್ಯಾಬ್ ಚಾಲಕರು ರಕ್ಷಿಸಿ, ತಾವರೆಕೆರೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಯುವತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಾರನಹಳ್ಳಿ ರೆಸಾರ್ಟ್‌ಗೆ ರಾಮನಗರ ಎಸ್ಪಿ ಅನುಮಪ್ ಅಗರ್‌ವಾಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಯುವತಿ ನೀಡಿದ ದೂರಿನ ಅನ್ವಯ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ಮುಂದುವರೆಸಿದ್ದಾರೆ. [ಚೆನ್ನಮ್ಮ ಶಾಲೆಯಲ್ಲಿ ಅಡುಗೆ ಭಟ್ಟನ ಲೈಂಗಿಕ ದೌರ್ಜನ್ಯ]
ಪ್ರಭಾವಿಗಳ ಮಕ್ಕಳು : ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಶಕ್ಕೆ ಪಡೆದಿರುವ ಆರೋಪಿಗಳಲ್ಲಿ ಇಬ್ಬರು ಪ್ರಭಾವಿ ಉದ್ಯಮಿಗಳ ಮಕ್ಕಳು ಎಂದು ತಿಳಿದುಬಂದಿದೆ. ಡ್ರಾಪ್ ಕೊಡುವ ನೆಪದಲ್ಲಿ ಮೆಜೆಸ್ಟಿಕ್‌ನಿಂದ ಯುವತಿಯನ್ನು ಅಪಹರಿಸಿ ಚಿಕ್ಕಮಾರನಹಳ್ಳಿ ರೆಸಾರ್ಟ್‌ಗೆ ಕರೆದುಕೊಂಡು ಹೋಗಲಾಗಿದೆ. ರೆಸಾರ್ಟ್‌ನಲ್ಲಿ ಕೆಲಸ ಮಾಡುವ ಯುವಕ ಸಹ ಪ್ರಕರಣದಲ್ಲಿ ಭಾಗಿಯಾಗಿದ್ದು, ಉಳಿದ ಆರೋಪಿಗಳ ಸ್ನೇಹಿತನಾಗಿದ್ದ ಎಂದು ತಿಳಿದುಬಂದಿದೆ.
ಯುವತಿಯನ್ನು ಅಪಹರಣ ಮಾಡಲು ಬಳಸಿದ್ದ ಕೆಎ 42 ಎಂ 3624 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಯುವತಿ ಬೆಂಗಳೂರಿನಲ್ಲಿ ಏನು ಕೆಲಸ ಮಾಡುತ್ತಿದ್ದಳು? ಎಂದು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.












Click it and Unblock the Notifications