ಸುಶಾಂತ್ ಸಿಂಗ್ ಕೇಸ್ ಸಿಬಿಐಗೆ ನೀಡಲು ಬಿಹಾರ ಸಿಎಂ ಒಪ್ಪಿಗೆ!
ಪಾಟ್ನಾ, ಆಗಸ್ಟ್ 01: ಸುಶಾಂತ್ ಸಿಂಗ್ ರಜಪೂತ್ ಅವರ ಕುಟುಂಬ ಆಗ್ರಹಿಸಿದರೆ ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಲು ಬಿಹಾರ ಸರ್ಕಾರ ಸಿದ್ಧ ಎಂದು ಬಿಹಾರ ಮುಖ್ಯಮಂತ್ರಿ ನಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ.
Recommended Video
ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿ ಎಂದು ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಕೆಲವು ರಾಜಕಾರಣಿಗಳು ಒತ್ತಾಯಿಸುತ್ತಿದ್ದಾರೆ. ಆದರೆ, ಮಹಾರಾಷ್ಟ್ರ ಸರ್ಕಾರ ಸಿಬಿಐಗೆ ವಹಿಸಲು ನಿರಾಕರಿಸಿದೆ. ರಾಜ್ಯ ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ ಎಂದು ತಿಳಿಸಿದೆ.
ಆದರೆ, ಬಿಹಾರ ಸರ್ಕಾರ ಸಿಬಿಐಗೆ ನೀಡಲು ಒಲವು ತೋರಿದೆ. ಅಂದ್ಹಾಗೆ, ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಅವರ ತಂದೆ ಬಿಹಾರದಲ್ಲಿ ದೂರು ದಾಖಲಿಸಿದ್ದಾರೆ. ಬಿಹಾರ ಪೊಲೀಸರ ಸಹ ತನಿಖೆ ಕೈಗೆತ್ತಿಕೊಂಡಿದ್ದಾರೆ. ಹೆಚ್ಚಿನ ತನಿಖೆಗಾಗಿ ಬಿಹಾರ ಪೊಲೀಸ್ ತಂಡ ಮುಂಬೈಗೆ ತಲುಪಿದೆ. ಆದರೆ, ರಿಯಾ ಚಕ್ರವರ್ತಿಯ ತನಿಖೆ ನಡೆಸಲು ಬಿಹಾರ ಪೊಲೀಸರಿಗೆ, ಮುಂಬೈ ಪೊಲೀಸರು ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿಗೆ ಕಾರಣರಾದವರ ರಕ್ಷಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿಂತಿದ್ದಾರೆ ಎಂದು ಬಿಹಾರ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಆರೋಪಿಸಿದ್ದಾರೆ.
ಮಹಾ ಸಿಎಂ ಠಾಕ್ರೆ ತನ್ನ ಮಿತ್ರ ಪಕ್ಷ ಕಾಂಗ್ರೆಸ್ ಒತ್ತಡಕ್ಕೆ ಮಣಿದು, ಅಪರಾಧಿಗಳನ್ನು ರಕ್ಷಿಸುತ್ತಿದ್ದಾರೆ. ಬಾಲಿವುಡ್ ಮಾಫಿಯಾವನ್ನು ಪೋಷಿಸುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತ ಎಂದು ಬಿಹಾರ ಡಿಸಿಎಂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬಿಹಾರದಲ್ಲಿ ಸುಶಾಂತ್ ಅವರ ತಂದೆ ರಿಯಾ ಚಕ್ರವರ್ತಿ ಸೇರಿದಂತೆ ಹಲವು ವಿರುದ್ಧ ದೂರು ನೀಡಿದ್ದಾರೆ. ಈ ದೂರಿನ ಅನ್ವಯ ಬಿಹಾರ್ ಪೊಲೀಸರು ತನಿಖೆ ಆರಂಭಿಸಿದ್ದು, ಮುಂಬೈಗೆ ಭೇಟಿ ನೀಡಿದ್ದಾರೆ. ಮತ್ತೊಂದೆಡೆ ಮುಂಬೈನ ಬಾಂದ್ರಾ ಪೊಲೀಸರು ಸುಶಾಂತ್ ಆತ್ಮಹತ್ಯೆ ಪ್ರಕರಣವನ್ನು ತನಿಖೆ ನಡೆಸುತ್ತಿದ್ದು, ಇದುವರೆಗೂ ಸುಮಾರು 30ಕ್ಕೂ ಅಧಿಕ ಮಂದಿಯ ವಿಚಾರಣೆ ನಡೆಸಿದ್ದಾರೆ.












Click it and Unblock the Notifications