ಬಿಹಾರ ರಾಜ್ಯಪಾಲ ಡಿ.ವೈ.ಪಾಟೀಲ್ ಬೆಂಗಳೂರಿನಲ್ಲಿ ಅಸ್ವಸ್ಥ

ಶುಕ್ರವಾರ ಬೆಳಗ್ಗೆ ಡಿ.ವೈ.ಪಾಟೀಲ್ ಅಸ್ವಸ್ಥಗೊಂಡಿದ್ದು ಅವರನ್ನು ಚಿಕಿತ್ಸೆಗಾಗಿ ಹೆಬ್ಬಾಳದಲ್ಲಿರುವ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಏಳು ದಿನಗಳಿಂದ ಡಿ.ವೈ.ಪಾಟೀಲ್ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಶುಕ್ರವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದ್ಲಲಿ ಡಿ.ವೈ.ಪಾಟೀಲ್ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಬೇಕಾಗಿತ್ತು.
ಆದರೆ, ಬೆಳಗ್ಗೆಯಿಂದಲೇ ಪಾಟೀಲ್ ಅವರಿಗೆ ವಾಂತಿ ಆರಂಭವಾಗಿತ್ತು. ತೀವ್ರವಾದ ನಿಶ್ಯಕ್ತಿಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಟೀಲ್ ಅವರಿಗೆ ಲಘು ಹೃದಯಾಘಾತವಾಗಿದೆ ಎಂದು ತಿಳಿದು ಬಂದಿದೆ. ಏಳು ದಿನಗಳ ಹಿಂದೆ ನಗರಕ್ಕೆ ಆಗಮಿಸಿದ್ದ ಪಾಟೀಲ್ ಜಿಂದಾಲ್ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಅವರು ಬಿಹಾರಕ್ಕೆ ಮರಳಬೇಕಾಗಿತ್ತು.
ಸಿದ್ದರಾಮಯ್ಯ ಕಾರ್ಯಕ್ರಮಗಳು : ಸಿಎಂ ಸಿದ್ದರಾಮಯ್ಯ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಬಿಹಾರ ರಾಜ್ಯಪಾಲ ಡಿ.ವೈ.ಪಾಟೀಲ್ ಅವರನ್ನು ಭೇಟಿಯಾಗಬೇಕಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ 9.30ಕ್ಕೆ ಜಪಾನ್ ರಾಯಭಾರಿ ಜೊತೆ ಸಿಎಂ ಸಭೆ ನಿಗದಿಯಾಗಿತ್ತು. ಎರಡೂ ಸಭೆಗಳ ನಂತರ ಸಿಎಂ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಲಿದ್ದು, ಸಂಜೆ ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಲಿದೆ. ವಿವಿಧ ಕಾರ್ಯಕ್ರಗಳಲ್ಲಿ ಭಾಗವಹಿಸಿದ ಸಿಎಂ ಬೆಂಗಳೂರಿಗೆ ಮರಳಲಿದ್ದಾರೆ.












Click it and Unblock the Notifications