ಬಿಹಾರ ಪಿಎಫ್‌ಐ ಧನಸಹಾಯ ಪ್ರಕರಣ: ಬೆಂಗಳೂರಿನಲ್ಲಿ 4, ಕೇರಳದಲ್ಲಿ ಒಬ್ಬರನ್ನು ಬಂಧಿಸಿದ ಎನ್‌ಐಎ
ಬಂಧಿತರನ್ನು ಕರ್ನಾಟಕದ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್, ಇಕ್ಬಾಲ್ ಮತ್ತು ಅಬ್ದುಲ್ ರಫೀಕ್ ಎಂದು ಗುರುತಿಸಲಾಗಿದೆ.
ಬೆಂಗಳೂರು, ಮಾರ್ಚ್ 07: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಕೊಲೆಯ ಸಂಚಿಗೆ ಹಣ ನೀಡಿದ ಆರೋಪದ ಮೇಲೆ ಕರ್ನಾಟಕದಲ್ಲಿ ನಾಲ್ವರು ಮತ್ತು ಕೇರಳದ ಓರ್ವ ಸೇರಿದಂತೆ ಐವರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ ಬೆಂಗಳೂರಿನಲ್ಲಿ ಮಂಗಳವಾರ ತಿಳಿಸಿದೆ.
ಬಂಧಿತರನ್ನು ಕರ್ನಾಟಕದ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್, ಇಕ್ಬಾಲ್ ಮತ್ತು ಅಬ್ದುಲ್ ರಫೀಕ್ ಎಂದು ಗುರುತಿಸಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಅಬಿದ್ ಕೆ ಎಂ ಎನ್ನುವವರನ್ನು ಬಂಧಿಸಲಾಗಿದೆ. ಫುಲ್ವಾರಿ ಷರೀಫ್ ಪಿಎಫ್‌ಐ ಪ್ರಕರಣದ ಎನ್‌ಐಎ ತನಿಖೆಯು ದಕ್ಷಿಣ ಭಾರತದಲ್ಲಿ ಹವಾಲಾ ಕಾರ್ಯಕರ್ತರ ದೊಡ್ಡ ಜಾಲವನ್ನು ಪತ್ತೆಹಚ್ಚಿದ ನಂತರ ಈ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಸಂಸ್ಥೆ ತಿಳಿಸಿದೆ.

ದುಬೈನಲ್ಲಿ ತನ್ನ ಬೇರುಗಳನ್ನು ಹೊಂದಿರುವ ಮತ್ತು ಬಿಹಾರ, ಕರ್ನಾಟಕದಿಂದ ಕಾರ್ಯನಿರ್ವಹಿಸುತ್ತಿರುವ ಪಿಎಫ್‌ಐ ಫಂಡಿಂಗ್ ಮಾಡ್ಯೂಲ್ ಅನ್ನು ಪತ್ತೆ ಮಾಡಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಎನ್‌ಐಎ ಪ್ರಕಾರ, ಫುಲ್ವಾರಿ ಷರೀಫ್ ಮತ್ತು ಮೋತಿಹಾರಿಯಲ್ಲಿರುವ ಪಿಎಫ್‌ಐ ಕಾರ್ಯಕರ್ತರು ನಿಷೇಧಿತ ಸಂಘಟನೆಯ ಚಟುವಟಿಕೆಗಳನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.
ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ "ನಿರ್ದಿಷ್ಟ ಸಮುದಾಯದ ಯುವಕರನ್ನು" ಕೊಲೆ ಮಾಡಲು ಪಿಎಫ್‌ಐ ಕಾರ್ಯಕರ್ತರು ಬಂದೂಕು ಮತ್ತು ಮದ್ದುಗುಂಡುಗಳನ್ನು ವ್ಯವಸ್ಥೆಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಫೆಬ್ರವರಿ 5 ರಂದು ಈ ಘಟಕದ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಮಂಗಳವಾರ ಬಂಧಿತರಾಗಿರುವ ಐದು ಜನರು ಭಾರತದ ಹೊರಗಿನಿಂದ ಸಂಗ್ರಹಿಸಿದ ಅಕ್ರಮ ಹಣವನ್ನು ಪಿಎಫ್‌ಐ ನಾಯಕರು ಮತ್ತು ಕಾರ್ಯಕರ್ತರಿಗೆ ರವಾನಿಸುವ ಸಂಚಿನಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಎನ್‌ಐಎ ತಿಳಿಸಿದೆ.
ಕಳೆದ ವರ್ಷ ಜುಲೈನಲ್ಲಿ ಪಾಟ್ನಾದ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ತರಬೇತಿ, ಭಯೋತ್ಪಾದನೆ ಮತ್ತು ಹಿಂಸಾಚಾರದ ಕೃತ್ಯಗಳನ್ನು ನಡೆಸುತ್ತಿದ್ದ ಏಳು ಜನರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 5 ರಿಂದ ಕಾಸರಗೋಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಎನ್‌ಐಎ ಶೋಧ ನಡೆಸುತ್ತಿದೆ. ಇದರಿಂದಾಗಿ ಎಂಟು ಸ್ಥಳಗಳಲ್ಲಿ ನಡೆದ ಶೋಧನೆಯಿಂದಾಗಿ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲು ಮತ್ತು ಹಲವಾರು ಕೋಟಿ ರೂಪಾಯಿಗಳ ವಹಿವಾಟಿನ ವಿವರಗಳ ದಾಖಲೆಗಳನ್ನು ಪಡೆಯಲಿ ಸಾಧ್ಯವಾಗಿದೆ ಎಂದು ಹೇಳಿದೆ.

27 ಸೆಪ್ಟೆಂಬರ್ 2022 ರಂದು ಪಿಎಫ್‌ಐ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಇದರ ಹೊರತಾಗಿಯೂ, ಪಿಎಫ್‌ಐ ಮತ್ತು ಅದರ ಕಾರ್ಯಕರ್ತರು ಹಿಂಸಾತ್ಮಕ ಉಗ್ರವಾದದ ಸಿದ್ಧಾಂತವನ್ನು ಪ್ರಚಾರ ಮಾಡುವುದನ್ನು ಮುಂದುವರೆಸಿದ್ದಾರೆ. ಅಪರಾಧಗಳನ್ನು ಮಾಡಲು ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವ್ಯವಸ್ಥೆಗೊಳಿಸುತ್ತಿದ್ದಾರೆ ಎಂದು ಎನ್‌ಐಎ ಮಾಹಿತಿ ನೀಡಿದೆ.
ಬಂಧೀತ ಇಕ್ಬಾಲ್ ಮತ್ತು ಇತರ ಸಹಚರರು ದುಬೈ ಮತ್ತು ಅಬುಧಾಬಿಯಿಂದ ಅಕ್ರಮವಾಗಿ ಹಣವನ್ನು ಸಂಗ್ರಹಿಸಿ ಭಾರತದಲ್ಲಿ ಮಹಮ್ಮದ್ ಸಿನಾನ್, ಸರ್ಫರಾಜ್ ನವಾಜ್, ಅಬ್ದುಲ್ ರಫೀಕ್ ಮತ್ತು ಅಬಿದ್ ಕೆಎಂ ಅವರಿಗೆ ಹಸ್ತಾಂತರಿಸಿದ್ದಾರೆ. ಸಿನಾನ್, ಸರ್ಫರಾಜ್ ಮತ್ತು ರಫೀಕ್ ಅವರು ಪ್ರಕರಣದ ಆರೋಪಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಿದ್ದಾರೆ. ಐವರು ಆರೋಪಿಗಳನ್ನು ಶೀಘ್ರದಲ್ಲೇ ಪಾಟ್ನಾದ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ಸಂಸ್ಥೆ ತಿಳಿಸಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications