ಬೆಂಗಳೂರು: ಬೈಕ್, ಕ್ಯಾಂಟರ್ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
ಬೆಂಗಳೂರು, ಮಾರ್ಚ್ 23: ನಗರ ಸೇರಿದಂತೆ ಹೊರವಲಯದಲ್ಲಿ ಅಪಘಾತದ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಬೈಕ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದಲ್ಲಿ ಶುಕ್ರವಾರ ನಡೆದಿದೆ.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ನಿಡವಂದ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಬೈಕ್ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಿಂದಾಗಿ ಬೈಕ್ ಸವಾರರಾದ 30 ವರ್ಷದ ಜಗದೀಶ್ ಹಾಗೂ 32 ವರ್ಷದ ಸೀನಾನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಡಾಬಸ್ ಪೇಟೆ ಪೊಲೀಸರು ಕ್ಯಾಂಟರ್ ವಶಪಡಿಸಿಕೊಂಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ.












Click it and Unblock the Notifications