ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Video: ನೂತನ ಸಿಎಂ ಬೊಮ್ಮಾಯಿ ಮನೆ ಮುಂದೆ ಮೊದಲ ದಿನವೇ ಆಗಿದ್ದೇನು?

|
Google Oneindia Kannada News

ಬೆಂಗಳೂರು, ಜು. 29: ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆ ಮುಂದೆ ವ್ಹೀಲಿಂಗ್ ಮಾಡಲು ಹೋಗಿ ಮೂವರು ಪೊಲೀಸರ ಅತಿಥಿಗಳಾಗಿದ್ದಾರೆ. ನೂತನ ಮುಖ್ಯಮಂತ್ರಿ ಮನೆಯ ಭದ್ರತಾ ಸಿಬ್ಬಂದಿ ಮೂವರು ಯುವರಕನ್ನು ವಶಕ್ಕೆ ಪಡೆದು ಎರಡು ವ್ಹೀಲಿಂಗ್ ಬೈಕ್ ಸಮೇತ ಆರ್‌.ಟಿ. ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಹುದ್ದೆಗೆ ಅಲಂಕರಿಸಿದ ಬಸವರಾಜ ಬೊಮ್ಮಾಯಿ ಅವರು ಆರ್‌.ಟಿ. ನಗರದಲ್ಲಿ ವಾಸವಾಗಿದ್ದಾರೆ. ಅವರು ಮುಖ್ಯಮಂತ್ರಿಯಾಗುವ ಮುನ್ನ ಮನೆಗೆ ಯಾವುದೇ ರೀತಿಯ ಭದ್ರತೆ ತೆಗೆದುಕೊಂಡಿರಲಿಲ್ಲ. ಬುಧವಾರ ಬಸವರಾಜ ಬೊಮ್ಮಾಯಿ ಸಿಎಂ ಆಗುತ್ತಿದ್ದಂತೆ ಅವರ ಮನೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಅವರ ಮನೆ ಸಮೀಪವೇ ವ್ಹೀಲಿಂಗ್ ಮಾಡುತ್ತಿದ್ದ ಮೂವರು ಪುಂಡರನ್ನು ಎರಡು ಬೈಕ್ ಸಮೇತ ವಶಕ್ಕೆ ಪಡೆದ ಭದ್ರತಾ ಸಿಬ್ಬಂದಿ ಆರ್‌.ಟಿ. ನಗರ ಪೊಲೀಸರಿಗೆ ತಿಳಿಸಿದ್ದಾರೆ. ಸ್ಥಳೀಯ ಪೊಲೀಸರು ಎರಡು ಬೈಕ್ ಜಪ್ತಿ ಮಾಡಿದ್ದು, ಮೂವರು ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Bike wheeling in front of the New CM house: 2 bikes seized by R.T. Nagara Police

ಈ ಕುರಿತು ಆರ್‌.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೂತನ ಸಿಎಂ ಮನೆ ಮಂದೆ ವ್ಹೀಲಂಗ್ ಮಾಡಿದ ಮೂವರನ್ನು ವಿಚಾರಣೆ ನಡೆಸಿ ಬಿಟ್ಟು ಕಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Recommended Video

ಅಪಹರಣಕ್ಕೊಳಗಾದ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ರಕ್ಷಣೆ ಮಾಡಿದ ಪೊಲೀಸರು | Oneindia Kannada

English summary
Security Staff confiscate the bikes of three youths who were wheeled in front of the home of the new chief minister Basavaraja Bommai know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X