ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ಶತಕೋಟಿ ಒಡೆಯ ಫಿದಾ: ಭಾರತದ ಡಿಜಿಟಲೀಕರಣಕ್ಕೆ ಬಿಲ್ ಗೇಟ್ಸ್ ಮೆಚ್ಚುಗೆ

ಬೆಂಗಳೂರು, ಆಗಸ್ಟ್ 22: ಬೆಂಗಳೂರಿನ ಪೋಸ್ಟ್ ಮಾಸ್ಟರ್ ಕೆಲಸಕ್ಕೆ ವಿಶ್ವದ ಅತಿದೊಡ್ಡ ಸಂಸ್ಥೆ ಮೈಕ್ರೋಸಾಫ್ಟ್ ಸಹಸ್ಥಾಪಕ ಬಿಲ್ ಗೇಟ್ಸ್ ಫಿದಾ ಆಗಿದ್ದು, ಭಾರತದ ಡಿಜಿಟಲೀಕರಣಕ್ಕೆ ಮನಸೋತಿದ್ದಾರೆ. ಅಲ್ಲದೇ ಭಾರತದ ಡಿಜಿಟಲೀಕರಣ ಹಾಗೂ ಬೆಂಗಳೂರಿನ ಪೋಸ್ಟ್ ಮಾಸ್ಟರ್ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಭಾರತದ ಬಗ್ಗೆ ಬಿಲ್ ಗೇಟ್ಸ್ ಅವರ ಮೆಚ್ಚುಗೆ ಮಾತಿನ ಪೋಸ್ಟ್ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದೆ.

ಶತಕೋಟಿ ಒಡೆಯ ಬಿಲ್ ಗೇಟ್ಸ್ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಬೆಂಗಳೂರಿನ ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ಕುಸುಮಾರನ್ನು ಹೊಗಳಿದ್ದಾರೆ. ಜೊತೆಗೆ ಆಕೆಯನ್ನು ಭೇಟಿಯಾದ ಸಂದರ್ಭದಲ್ಲಿ ನಗುನಗುತ್ತಾ ಮಾತನಾಡುತ್ತಿರುವ ಫೋಟೋವನ್ನು ಬಿಲ್ ಗೇಟ್ಸ್ ತಮ್ಮ ಲಿಂಕ್ಡ್ ಇನ್ ಅಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಕುಸುಮಾ ಮಾಡುವ ಕೆಲಸದ ಬಗ್ಗೆ ಹೆಚ್ಚು ತಿಳಿದುಕೊಳ್ಳುವ ಸಲುವಾಗಿ ಒಂದು ಲಿಂಕ್ ಅನ್ನು ಸಹಾ ಪೋಸ್ಟ್ ಮಾಡಿದ್ದಾರೆ. ಸದ್ಯ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ವೆಬ್‌ಸೈಟ್ ಲಿಂಕ್‌ನಲ್ಲಿ ವಿಡಿಯೋ ಪ್ರಕಟ ಮಾಡಲಾಗಿದೆ.

bill-gates-impressed-by-bengalurus-female-post-master

ಇನ್ನು ಅಭಿವೃದ್ಧಿಯ ಪತದಲ್ಲಿರುವ ಭಾರತದ ಡಿಜಿಟಲೀಕರ, ಡಿಜಿಟಲ್ ಬ್ಯಾಂಕಿಂಗ್ ಬಗ್ಗೆಯೂ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಭಾರತದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಕಥೆ ಮತ್ತು ಯುವತಿಯ ವೃತ್ತಿಜೀವನದ ಹಾದಿ ಎಂಬ ಶೀರ್ಷಿಕೆಯಡಿ ಕುಸುಮಾ ಅವರ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಶತಕೋಟಿ ಒಡೆಯ ಬಿಲ್ ಗೇಟ್ಸ್ ಹಂಚಿಕೊಂಡಿರುವ ಪೋಸ್ಟ್‌ನಲ್ಲೇನಿದೆ..?

'ನನ್ನ ಭಾರತ ಪ್ರವಾಸದಲ್ಲಿ ನಾನು ನಂಬಲಾಗದ ಶಕ್ತಿಯೊಂದನ್ನು ಭೇಟಿಯಾದೆ. ಆ ಶಕ್ತಿಯೇ ಕುಸುಮಾ. ತನ್ನ ಸ್ಥಳೀಯ ಅಂಚೆ ಇಲಾಖೆಯಲ್ಲಿ ಅದ್ಭುತ ಕೆಲಸ ಮಾಡುತ್ತಿರುವ ಗಮನಾರ್ಹ ಯುವತಿ ಈಕೆ. ಹಣಕಾಸು ಅಭಿವೃದ್ಧಿಯನ್ನು ವೇಗಗೊಳಿಸಲು ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಕುಸುಮಾರಂತಹ ಅಂಚೆ ಕಚೇರಿ ಪೋಸ್ಟ್‌ಮಾಸ್ಟರ್‌ಗಳು ಭಾರತದಾದ್ಯಂತ ಗ್ರಾಹಕರಿಗೆ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್‌ಫೋನ್ ಸಾಧನಗಳು ಮತ್ತು ಬಯೋಮೆಟ್ರಿಕ್‌ಗಳನ್ನು ಬಳಕೆ ಮಾಡುತ್ತಿರುವುದು ಗಮನಾರ್ಹ. ಆಕೆ ಕೇವಲ ಹಣಕಾಸು ಸೇವೆಗಳನ್ನು ಒದಗಿಸುತ್ತಿಲ್ಲ, ಬದಲಾಗಿ ತನ್ನ ಸಮುದಾಯಕ್ಕೆ ಭರವಸೆ ಮತ್ತು ಆರ್ಥಿಕ ಸಬಲೀಕರಣವನ್ನು ನೀಡುತ್ತಿದ್ದಾಳೆ' ಎಂದು ಬಿಲ್ ಗೇಟ್ಸ್ ಪೋಸ್ಟ್‌ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+