Video: ಬೆಂಗಳೂರಿನ ಬಿಲ್ವಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ
ಬೆಂಗಳೂರಿನ ವೈಯಾಲಿ ಕಾವಲ್ ಬಳಿ ಇರುವ ಬಿಲ್ವಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನ ವೈಯಾಲಿ ಕಾವಲ್ ಬಳಿ ಇರುವ ಬಿಲ್ವಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದೆ.
ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಗಿತ್ತು. ಆದರೆ, ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.

ಬೆಳಗ್ಗೆ 5.30 ರ ಸಮಯದಲ್ಲಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಪಕ್ಕದ ಕಟ್ಟಡಗಳಿಗೂ ವ್ಯಾಪಿಸಿತ್ತು. ಕಟ್ಟಡದ ಒಳಗೆ ಸಿಲುಕಿದ್ದ ಮಹಿಳೆಯರು, ಮಕ್ಕಳು ಸೇರಿದಂತೆ ಹಲವರು ರೋಗಿಗಳನ್ನು ರಕ್ಷಿಸಲಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಸಾಧ್ಯತೆ ಕಂಡು ಬಂದಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಗ್ನಿಶಾಮಕ ದಳ ಸಿಬ್ಬಂದಿ ಹೇಳಿದ್ದಾರೆ.












Click it and Unblock the Notifications